ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಸಹಿತ ಎಲ್ಲ ಪರೀಕ್ಷೆಗಳು ಮುಂದೂಡಿಕೆ : ಸಿ.ಎಂ. ಘೋಷಣೆ - Karavali Times ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಸಹಿತ ಎಲ್ಲ ಪರೀಕ್ಷೆಗಳು ಮುಂದೂಡಿಕೆ : ಸಿ.ಎಂ. ಘೋಷಣೆ - Karavali Times

728x90

21 March 2020

ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಸಹಿತ ಎಲ್ಲ ಪರೀಕ್ಷೆಗಳು ಮುಂದೂಡಿಕೆ : ಸಿ.ಎಂ. ಘೋಷಣೆ



ಬೆಂಗಳೂರು (ಕರಾವಳಿ ಟೈಮ್ಸ್) : ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಸೇರಿದಂತೆ ಅನೇಕ ಪರೀಕ್ಷೆಗಳನ್ನು ಮುಂದೂಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಸದ್ಯದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದು ಕಷ್ಟ.ಕೊರೋನಾ ಸೋಂಕು ವ್ಯಾಪಕವಾಗಿ ಹಬ್ಬುವುದನ್ನು ತಡೆಯಬೇಕಿರುವುದು ನಮ್ಮ ಮುಂದಿರುವ ಸವಾಲಾಗಿದೆ. ಈ ನಿಟ್ಟಿನಲ್ಲಿ ಈ ತಿಂಗಳ 27ರಿಂದ ನಡೆಯಬೇಕಿದ್ದ ಹತ್ತನೇ ತರಗತಿ ಪರೀಕ್ಷೆ ಸೇರಿ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸರ್ಕಾರದ ಬಾಲಬ್ರೂಯಿ ಅತಿಥಿಗೃಹವನ್ನು ಕೊರೋನಾ ವಾರ್ ರೂಂ ಬಳಕೆಗೆ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕೊರೋನಾ ವೈರಸ್ ಸದ್ಯ ಹಳ್ಳಿಗಳಲ್ಲಿ ಅಷ್ಟೊಂದು ಪಸರಿಸಿಲ್ಲ, ಅಲ್ಲದೆ ಹಳ್ಳಿಗಳಲ್ಲಿ ಸೋಂಕು ಚಿಕಿತ್ಸೆಗಳಿಗೂ ಅಷ್ಟೊಂದು ಅನುಕೂಲಗಳಿರುವುದಿಲ್ಲ. ಹೀಗಾಗಿ ಇನ್ನು 15 ದಿನಗಳವರೆಗೆ ನಗರಗಳಿಂದ ಯಾರೂ ಪ್ರಯಾಣ ಮಾಡಬೇಡಿ. ತೀರಾ ಅಗತ್ಯವಿದ್ದರೆ ಮಾತ್ರ ಹಳ್ಳಿಗಳಿಗೆ ಹೋಗಿ ಎಂದು ಮುಖ್ಯಮಂತ್ರಿ ಜನತೆಗೆ ಮನವಿ ಮಾಡಿದ್ದಾರೆ.
ಇಂದು ಮಾತ್ರ ಜನತಾ ಕರ್ಫ್ಯೂ ಇದ್ದು ನಾಳೆಯಿಂದ ಎಂದಿನಂತೆ ದಿನಸಿ, ತರಕಾರಿ, ಅಗತ್ಯ ವಸ್ತುಗಳ ಅಂಗಡಿಗಳು ತೆರೆದಿರುತ್ತವೆ. ಸಾರಿಗೆ ಸಂಚಾರಗಳು ಸಹ ಎಂದಿನಂತೆ ಇರಲಿವೆ ಎಂದರು.
  • Blogger Comments
  • Facebook Comments

0 comments:

Post a Comment

Item Reviewed: ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಸಹಿತ ಎಲ್ಲ ಪರೀಕ್ಷೆಗಳು ಮುಂದೂಡಿಕೆ : ಸಿ.ಎಂ. ಘೋಷಣೆ Rating: 5 Reviewed By: karavali Times
Scroll to Top