ಎಪ್ರಿಲ್ 20ರ ನಂತರ ಪಾಸ್ ಇಲ್ಲದೆ ದ್ವಿಚಕ್ರ ವಾಹನ ಓಡಾಟಕ್ಕೆ ಅವಕಾಶ : ಸಿಎಂ - Karavali Times ಎಪ್ರಿಲ್ 20ರ ನಂತರ ಪಾಸ್ ಇಲ್ಲದೆ ದ್ವಿಚಕ್ರ ವಾಹನ ಓಡಾಟಕ್ಕೆ ಅವಕಾಶ : ಸಿಎಂ - Karavali Times

728x90

18 April 2020

ಎಪ್ರಿಲ್ 20ರ ನಂತರ ಪಾಸ್ ಇಲ್ಲದೆ ದ್ವಿಚಕ್ರ ವಾಹನ ಓಡಾಟಕ್ಕೆ ಅವಕಾಶ : ಸಿಎಂ



ಮದ್ಯದಂಗಡಿ ಓಪನ್ ಇಲ್ಲ

ಐಟಿ-ಬಿಟಿ ಕಂಪನಿಗಳು ಓಪನ್

ಮೇ 3ರತನಕ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ


ಬೆಂಗಳೂರು (ಕರಾವಳಿ ಟೈಮ್ಸ್) : ಎಪ್ರಿಲ್ 20 ರ ಬಳಿಕ ಯಾವುದೇ ಪಾಸ್ ಇಲ್ಲದೆ ದ್ವಿಚಕ್ರ ವಾಹನಗಳನ್ನು ಓಡಿಸಬಹುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಘೋಷಿಸಿದ್ದಾರೆ.

ನಗರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಎಪ್ರಿಲ್ 20ರ ನಂತರ ಜಿಲ್ಲೆಯ ಒಳಗಡೆ ದ್ವಿಚಕ್ರ ವಾಹನ ಓಡಾಟಕ್ಕೆ ಅನುಮತಿ ನೀಡಲಾಗಿದೆ. ಅದಕ್ಕೆ ಯಾವುದೇ ಪಾಸ್ ಅನುಮತಿ ಬೇಕಾಗಿಲ್ಲ. ಆದರೆ ಹೊರ ಜಿಲ್ಲೆಗಳಿಗೆ ಹೋಗುವಂತಿಲ್ಲ. ಕಂಟೈನ್ಮೆಂಟ್ ಝೋನ್‍ಗಳನ್ನ ಹೊರತುಪಡಿಸಿ ಇತರ ವಲಯಗಳಲ್ಲಿ ದ್ವಿಚಕ್ರ ವಾಹನಗಳು, ಇಲ್ಲಿಯವರೆಗೆ ಪಾಸ್ ಪಡೆದಿರುವ ಕಾರುಗಳು ಹಾಗೂ ಸರಕು ಸಾಗಾಟದ ವಾಹನಗಳ ಓಡಾಟಕ್ಕೆ ಅನುಮತಿ ನೀಡಲಾಗುವುದು ಎಂದು ತಿಳಿಸಿದರು.

ಇಲ್ಲಿಯವರೆಗೆ ಪಾಸ್ ಕೊಟ್ಟಿರೋದು ಮೇ 3ರ ವರೆಗೆ ಅನುಮತಿ ಮುಂದೂಡಲಾಗಿದೆ. ಯಾವುದೇ ಕಾರಣಕ್ಕೂ ಹೊಸ ಪಾಸ ವಿತರಣೆ ಇಲ್ಲ. ಅಂತರ್ ಜಿಲ್ಲಾ ಓಡಾಟವಿಲ್ಲ, ಮಾಸ್ಕ್ ಧಾರಣೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಎಪ್ರಿಲ್ 20ರಿಂದ ಐಟಿ-ಬಿಟಿ ಕಂಪನಿಗಳು ಶೇ 33 ಮಂದಿ ಉದ್ಯೋಗಿಗಳೊಂದಿಗೆ ಕಾರ್ಯಾರಂಭ ಆಗುತ್ತದೆ ಎಂದರು.

ಪಬ್, ಬಾರ್, ಹೋಟೆಲ್, ಮಾಲ್ ಯಾವುದೂ ತೆರೆಯಲು ಅನುಮತಿ ಇಲ್ಲ. ವಾಣಿಜ್ಯ ಉದ್ದೇಶದ ಅಂಗಡಿಗಳೂ ಕೂಡಾ ತೆರೆಯಲು ಅವಕಾಶ ಇಲ್ಲ. ಬಸ್‍ಗಳ ಸಂಚಾರಕ್ಕೂ ಅನುಮತಿ ಇಲ್ಲ. ಆದರೆ ಕಂಪನಿಗಳ ಬಸ್ ಸಂಚಾರಕ್ಕೆ ಅವಕಾಶ ಇದೆ. ಲಾಕ್‍ಡೌನ್ ಮುಗಿಯುವ ಮೇ 3ರ ತನಕ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಹೀಗಾಗಿ ಮೇ 3ರ ನಂತರ ಮದ್ಯ ಮಾರಾಟದ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ಇದೇ ವೇಳೆ ಸಿಎಂ ಹೇಳಿದ್ದಾರೆ.

ಕಂಟೈನ್ಮೆಂಟ್ ಝೋನ್ ಬಗ್ಗೆ ಚರ್ಚೆ ನಡೆಸಲಾಯಿತು. ಈ ಪ್ರದೇಶಗಳಲ್ಲಿ ಹೆಚ್ಚಿನ ಕಟ್ಟುನಿಟ್ಟು ಮಾಡಲಾಗುತ್ತೆ. ಈಗಾಗಲೇ ಎಂಟು ಜಿಲ್ಲೆಯಲ್ಲಿ ಮತ್ತು ಬೆಂಗಳೂರಿನಲ್ಲಿ 32 ಸ್ಥಳಗಳನ್ನು ಕಂಟೈನ್ಮೆಂಟ್ ಸ್ಥಳ ಎಂದು ಗುರುತಿಸಲಾಗಿದೆ. ಕಂಟೈನ್ಮೆಂಟ್ ಝೋನ್‍ಗಳಲ್ಲಿ ಪ್ರತ್ಯೇಕ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಆ ಅಧಿಕಾರಿಗಳಿಗೆ ಮ್ಯಾಜಿಸ್ಟ್ರೇಟ್ ಅಧಿಕಾರ ಕೊಟ್ಟಿದ್ದೇವೆ. ಕಂಟೈನ್ಮೆಂಟ್ ಝೋನ್‍ಗಳಲ್ಲಿ ಬಿಗಿಭದ್ರತೆ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದರು.
ನಗರ ಪ್ರದೇಶದಲ್ಲಿ ಕಾರ್ಮಿಕರಿಗೆ ಸ್ಥಳೀಯವಾಗಿ ಉಳಿದುಕೊಳ್ಳುವ ವ್ಯವಸ್ಥೆ ಇರುವಲ್ಲಿ ನಿರ್ಮಾಣ ಚಟುವಟಿಕೆಗಳು ಪ್ರಾರಂಭಿಸಲು ಅನುಮತಿ ನೀಡಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಉತ್ಪಾದನಾ ವಲಯದ ಕೈಗಾರಿಕೆಗಳು, ಕೈಗಾರಿಕಾ ವಸಾಹತುಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗುವುದು ಎಂದರು.

ಬೆಂಗಳೂರಲ್ಲಿ 32 ಕಂಟೈನ್ಮೆಂಟ್ ಝೋನ್ ಗುರುತು ಮಾಡಲಾಗಿದೆ. ಇಲ್ಲಿ ಯಾರೂ ಮನೆಯಿಂದ ಹೊರಬರುವಂತಿಲ್ಲ. ಮನೆಗೆ ನಾವು ಆಹಾರ ವ್ಯವಸ್ಥೆ ಮಾಡುತ್ತೇವೆ. ಅಗತ್ಯ ವಸ್ತುಗಳ ಸರಬರಾಜಿಗೆ ಯಾವುದೇ ತೊಂದರೆ ಇಲ್ಲ ಎಂದರು. ಇದೇ ವೇಳೆ ಗೂಡ್ಸ್ ವಾಹನಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ ಎಂದರು. 
  • Blogger Comments
  • Facebook Comments

0 comments:

Post a Comment

Item Reviewed: ಎಪ್ರಿಲ್ 20ರ ನಂತರ ಪಾಸ್ ಇಲ್ಲದೆ ದ್ವಿಚಕ್ರ ವಾಹನ ಓಡಾಟಕ್ಕೆ ಅವಕಾಶ : ಸಿಎಂ Rating: 5 Reviewed By: karavali Times
Scroll to Top