ದಕ್ಷಿಣ ಕನ್ನಡ ಜಿಲ್ಲೆಯ 3 ಪ್ರದೇಶಗಳು ಕಂಟೈನ್ಮೆಂಟ್ ವಲಯದಿಂದ ಹೊರಕ್ಕೆ : ಡಿಸಿ ಘೋಷಣೆ - Karavali Times ದಕ್ಷಿಣ ಕನ್ನಡ ಜಿಲ್ಲೆಯ 3 ಪ್ರದೇಶಗಳು ಕಂಟೈನ್ಮೆಂಟ್ ವಲಯದಿಂದ ಹೊರಕ್ಕೆ : ಡಿಸಿ ಘೋಷಣೆ - Karavali Times

728x90

27 April 2020

ದಕ್ಷಿಣ ಕನ್ನಡ ಜಿಲ್ಲೆಯ 3 ಪ್ರದೇಶಗಳು ಕಂಟೈನ್ಮೆಂಟ್ ವಲಯದಿಂದ ಹೊರಕ್ಕೆ : ಡಿಸಿ ಘೋಷಣೆ




ಮಂಗಳೂರು (ಕರಾವಳಿ ಟೈಮ್ಸ್) : ಕಳೆದ 28 ದಿನಗಳಿಂದ ಹೊಸ ಕೊರೋನಾ ಸೋಂಕು ಪ್ರಕರಣ ಪತ್ತೆಯಾಗದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂರು ಪ್ರದೇಶಗಳನ್ನು ಕಂಟೈನ್ಮೆಂಟ್ ವಲಯದಿಂದ ಮುಕ್ತಗೊಳಿಸಲಾಗಿದೆ  ಎಂದು ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಘೋಷಿಸಿದ್ದಾರೆ.

ಜಿಲ್ಲಾಧಿಕಾರಿ ಎಪ್ರಿಲ್ 27 ರಂದು ಸೋಮವಾರ ಹೊರಡಿಸಿದ ಅಧಿಸೂಚನೆಯ ಪ್ರಕಾರ ಬಂಟ್ವಾಳದ ಸಜಿಪನಡು, ಬೆಳ್ತಂಗಡಿಯ ಕರಾಯ ಗ್ರಾಮದ ಜನಪಥ್ ಕಾಲೋನಿ ಹಾಗೂ ಸುಳ್ಯದ ಅಜ್ಜಾವರ ಗ್ರಾಮಗಳನ್ನು ಕಂಟೈನ್ಮೆಂಟ್ ವಲಯದಿಂದ ಮುಕ್ತಗೊಳಿಸಿದ್ದಾರೆ.

ಕಳೆದ 28 ದಿನಗಳಿಂದ ಯಾವುದೇ ಹೊಸ ಕೊರೋನಾ ಫಾಸಿಟಿವ್ ಪ್ರಕರಣಗಳು ಈ ಪ್ರದೇಶ ವ್ಯಾಪ್ತಿಯಲ್ಲಿ ಕಂಡು ಬಂದಿಲ್ಲ. ಅಲ್ಲದೆ ಇಲ್ಲಿನ ಎಲ್ಲಾ ಕೊರೋನಾ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಮನೆಗೆ ಮರಳಿದ್ದಾರೆ ಎಂದು ಡೀಸಿ ಘೋಷಣೆಯಲ್ಲಿ ತಿಳಿಸಿದ್ದಾರೆ. ಇನ್ನು ದಕ್ಷಿಣ ಕನ್ನಡದಲ್ಲಿ ಪ್ರಸ್ತುತ ಎಂಟು ಕಂಟೈನ್ಮೆಂಟ್ ವಲಯಗಳಿದೆ ಎನ್ನಲಾಗಿದೆ. 
  • Blogger Comments
  • Facebook Comments

0 comments:

Post a Comment

Item Reviewed: ದಕ್ಷಿಣ ಕನ್ನಡ ಜಿಲ್ಲೆಯ 3 ಪ್ರದೇಶಗಳು ಕಂಟೈನ್ಮೆಂಟ್ ವಲಯದಿಂದ ಹೊರಕ್ಕೆ : ಡಿಸಿ ಘೋಷಣೆ Rating: 5 Reviewed By: karavali Times
Scroll to Top