ದ್ವೇಷಪೂರಿತ ಹೇಳಿಕೆ ನೀಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ : ಡಿಕೆಶೀ - Karavali Times ದ್ವೇಷಪೂರಿತ ಹೇಳಿಕೆ ನೀಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ : ಡಿಕೆಶೀ - Karavali Times

728x90

10 April 2020

ದ್ವೇಷಪೂರಿತ ಹೇಳಿಕೆ ನೀಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ : ಡಿಕೆಶೀಬೆಂಗಳೂರು (ಕರಾವಳಿ ಟೈಮ್ಸ್) : ಕೊರೋನಾ ವೈರಸ್ ಕುರಿತಂತೆ ದ್ವೇಷಪೂರಿತ ಹೇಳಿಕೆ ನೀಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

ಈ ಕುರಿತು ಕರ್ನಾಟಕ ಡಿಜಿ ಹಾಗೂ ಐಜಿಪಿಗಳಿಗೆ ಪತ್ರ ಬರೆದಿರುವ ಶಿವಕುಮಾರ್ ಅವರು, ದ್ವೇಷ ಪೂರಿತ ಹೇಳಿಕೆ ನೀಡುತ್ತಿರುವ ಇಬ್ಬರು ಬಿಜೆಪಿ ಸಂಸದರು ಹಾಗೂ ಇಬ್ಬರು ಶಾಸಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದಾರೆ.

ಎಪ್ರಿಲ್ 8 ರಂದು ಹೇಳಿಕೆ ನೀಡಿದ್ದ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಕೋರೋನಾ ವೈರಸ್ ಹಿಂದೆ ಜಿಹಾದಿಗಳಿದ್ದಾರೆಂದು ಹೇಳಿದ್ದರು. ಸಂಸದ ಹಾಗೂ ಮಾಜಿ ಸಚಿವ ಅನಂತ್ ಕುಮಾರ್ ಅವರು, ದೆಹಲಿಯಲ್ಲಿ ನಿಝಾಮುದ್ದೀನ್ ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳಿದ್ದವರನ್ನು ಗುಂಡಿಟ್ಟು ಕೊಲ್ಲಬೇಕೆಂದು ಹೇಳಿದ್ದರು.
  • Blogger Comments
  • Facebook Comments

0 comments:

Post a Comment

Item Reviewed: ದ್ವೇಷಪೂರಿತ ಹೇಳಿಕೆ ನೀಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ : ಡಿಕೆಶೀ Rating: 5 Reviewed By: karavali Times
Scroll to Top