ವಿದೇಶಗಳಲ್ಲಿರುವ ಕನ್ನಡಿಗರನ್ನು ಕರೆತರುವ ಪ್ರಕ್ರಿಯೆ ಆರಂಭ : ಸಚಿವ ಸುರೇಶ್ ಕುಮಾರ್ - Karavali Times ವಿದೇಶಗಳಲ್ಲಿರುವ ಕನ್ನಡಿಗರನ್ನು ಕರೆತರುವ ಪ್ರಕ್ರಿಯೆ ಆರಂಭ : ಸಚಿವ ಸುರೇಶ್ ಕುಮಾರ್ - Karavali Times

728x90

29 April 2020

ವಿದೇಶಗಳಲ್ಲಿರುವ ಕನ್ನಡಿಗರನ್ನು ಕರೆತರುವ ಪ್ರಕ್ರಿಯೆ ಆರಂಭ : ಸಚಿವ ಸುರೇಶ್ ಕುಮಾರ್

 

 

ಮೊದಲ ಹಂತದಲ್ಲಿ 6,100 ಜನ ವಾಪಸಾತಿಗೆ ಕ್ರಮ


ಬೆಂಗಳೂರು (ಕರಾವಳಿ ಟೈಮ್ಸ್) : ಲಾಕ್‍ಡೌನ್‍ನಿಂದಾಗಿ ವಿದೇಶಗಳಲ್ಲಿ ಬಾಕಿಯಾಗಿರುವ ಕನ್ನಡಿಗರನ್ನು ಕರೆತರುವ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

    ಹೊರದೇಶಗಳಲ್ಲಿರುವ ಭಾರತೀಯರನ್ನು ಕರೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ವಿದೇಶಗಳಲ್ಲಿ 10,823 ಜನ ಕರ್ನಾಟಕದವರು ಇದ್ದಾರೆ. ಮೊದಲ ಹಂತದಲ್ಲಿ 6,100 ಜನ ವಿದೇಶದಿಂದ ವಾಪಸ್ ಆಗಲಿದ್ದಾರೆ. ಸೌದಿ ಅರೇಬಿಯ, ಕೆನಡಾ, ಇಂಗ್ಲೆಂಡ್ ಮುಂತಾದ ದೇಶಗಳಲ್ಲಿ ಕನ್ನಡಿಗರಿದ್ದಾರೆ. ಎಲ್ಲರನ್ನು ಕರೆ ತರಲು ಸರ್ಕಾರ ಮುಂದಾಗಿದ್ದು, ವಾಪಸ್ ಬಂದವರನ್ನು ಕ್ವಾರಂಟೈನ್‍ನಲ್ಲಿರಿಸಿ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗುತ್ತದೆ ಎಂದು ಸಚಿವರು ಹೇಳಿದರು.

    ಹೊರದೇಶಗಳಲ್ಲಿ ದುಸ್ಥಿತಿಯಲ್ಲಿರುವ 10,823 ಕನ್ನಡಿಗರನ್ನು ಕರ್ನಾಟಕಕ್ಕೆ ಕರೆತರುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ಕೇಂದ್ರ ಸರ್ಕಾರ ಸಮನ್ವಯ ಕಾರ್ಯದ ನಿರ್ದೇಶನ ನೀಡಿದೆ ಎಂದ ಸಚಿವ ಸುರೇಶ್ ಕುಮಾರ್ ಈ ಪೈಕಿ 4408 ಪ್ರವಾಸಿಗರು, 3074 ವಿದ್ಯಾರ್ಥಿಗಳು, 2284 ವೃತ್ತಿಪರ ಕೆಲಸ ಮಾಡುವವರೂ ಇದ್ದಾರೆ ಎಂದರು. ಪ್ರಧಾನವಾಗಿ ಕೆನಡಾ (328), ಅಮೆರಿಕಾ (927), ಅರಬ್ ದೇಶಗಳಿಂದ ಹಿಂತಿರುಗುತ್ತಿರುವ ವ್ಯಕ್ತಿಗಳನ್ನು ಏರ್‍ಪೆÇೀರ್ಟ್‍ಗಳಲ್ಲಿ ಸ್ಕ್ರೀನಿಂಗ್ ಮಾಡಿ ಅವರ ದೇಹ ಪರಿಸ್ಥಿತಿಗೆ ಅನುಗುಣವಾಗಿ ಅವರಿಗೆ ಅವಶ್ಯಕ ಸುಶ್ರೂಷೆ ಒದಗಿಸಲಾಗುವುದು ಎಂದು ತಿಳಿಸಿದರು.
  • Blogger Comments
  • Facebook Comments

0 comments:

Post a Comment

Item Reviewed: ವಿದೇಶಗಳಲ್ಲಿರುವ ಕನ್ನಡಿಗರನ್ನು ಕರೆತರುವ ಪ್ರಕ್ರಿಯೆ ಆರಂಭ : ಸಚಿವ ಸುರೇಶ್ ಕುಮಾರ್ Rating: 5 Reviewed By: karavali Times
Scroll to Top