ಮೀನುಗಾರರ ಸಾಲಮನ್ನಾಕ್ಕಾಗಿ ಸರಕಾರದಿಂದ 60 ಕೋಟಿ ರೂಪಾಯಿ ಬಿಡುಗಡೆ : ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ - Karavali Times ಮೀನುಗಾರರ ಸಾಲಮನ್ನಾಕ್ಕಾಗಿ ಸರಕಾರದಿಂದ 60 ಕೋಟಿ ರೂಪಾಯಿ ಬಿಡುಗಡೆ : ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ - Karavali Times

728x90

27 April 2020

ಮೀನುಗಾರರ ಸಾಲಮನ್ನಾಕ್ಕಾಗಿ ಸರಕಾರದಿಂದ 60 ಕೋಟಿ ರೂಪಾಯಿ ಬಿಡುಗಡೆ : ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ



ಮಂಗಳೂರು (ಕರಾವಳಿ ಟೈಮ್ಸ್) : ರಾಜ್ಯ ಸರ್ಕಾರ ಘೋಷಣೆ ಮಾಡಿದ ಮೀನುಗಾರರ ಸಾಲಮನ್ನಾ ಯೋಜನೆಯಡಿ 23 ಸಾವಿರ ಜನ ಫಲಾನುಭವಿಗಳಿಗೆ 60 ಕೋಟಿ ರೂಪಾಯಿಗಳನ್ನು ರಾಜ್ಯ ಹಣಕಾಸು ಇಲಾಖೆ ಅಧಿಕೃತವಾಗಿ ಬಿಡುಗಡೆ ಮಾಡಿದೆ ಎಂದು ರಾಜ್ಯ ಮೀನುಗಾರಿಕೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು ಸಾಲ ಮನ್ನಾದ ಹಣ ಭೂಮಿ ಕೋಶದ ಮೂಲಕ ಸಾಲಗಾರರ ಖಾತೆಗೆ ಜಮಾ ಮಾಡಲು ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಕೊರೋನಾ ಸಂಕಷ್ಟದ ದಿನಗಳಲ್ಲೂ ಕೂಡ ಮೀನುಗಾರರ ಹಿತರಕ್ಷಣೆಗಾಗಿ 60 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಹಕಾರ ನೀಡಿದ ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ರಾಜ್ಯದ ಸಮಸ್ತ ಮೀನುಗಾರರ ಪರವಾಗಿ ಧನ್ಯವಾದ ಅರ್ಪಿಸುವುದಾಗಿ ಮೀನುಗಾರಿಕೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a comment

Item Reviewed: ಮೀನುಗಾರರ ಸಾಲಮನ್ನಾಕ್ಕಾಗಿ ಸರಕಾರದಿಂದ 60 ಕೋಟಿ ರೂಪಾಯಿ ಬಿಡುಗಡೆ : ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ Rating: 5 Reviewed By: karavali Times
Scroll to Top