ಮುತ್ತಪ್ಪ ರೈ ಆರೋಗ್ಯ ಸ್ಥಿತಿ ಗಂಭೀರ : ಆಸ್ಪತ್ರೆಗೆ ದಾಖಲು - Karavali Times ಮುತ್ತಪ್ಪ ರೈ ಆರೋಗ್ಯ ಸ್ಥಿತಿ ಗಂಭೀರ : ಆಸ್ಪತ್ರೆಗೆ ದಾಖಲು - Karavali Times

728x90

30 April 2020

ಮುತ್ತಪ್ಪ ರೈ ಆರೋಗ್ಯ ಸ್ಥಿತಿ ಗಂಭೀರ : ಆಸ್ಪತ್ರೆಗೆ ದಾಖಲು



ಬೆಂಗಳೂರು (ಕರಾವಳಿ ಟೈಮ್ಸ್) : ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಅವರ ಆರೋಗ್ಯ ಸ್ಥಿತಿ ತೀವ್ರ ವಿಷಮತೆಗೆ ತಲುಪಿದ್ದು, ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ಎರಡು ವರ್ಷದಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಅವರ ಆರೋಗ್ಯ ಸ್ಥಿತಿ ಇತ್ತೀಚೆಗೆ ವಿಷಮಗೊಂಡಿದ್ದು ಸಾವು ನೋವಿನ ಮಧ್ಯೆ ಹೋರಾಡುತ್ತಿದ್ದಾರೆ. ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

ಭೂಗತ ಲೋಕವನ್ನು ತೊರೆದು ಹಲವು ವರ್ಷಗಳಿಂದ ಜಯ ಕರ್ನಾಟಕ ಸಂಘಟನೆ ಮೂಲಕ ಮುತ್ತಪ್ಪ ರೈ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. 2013ರಲ್ಲಿ ಇವರ ಪತ್ನಿ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. 2018ರಲ್ಲಿ ಇವರಿಗೆ ಕ್ಯಾನ್ಸರ್ ಇರುವುದು ದೃಢಪಟ್ಟಿತ್ತು. ಇತ್ತೀಚೆಗೆ ಸುದ್ದಿಗೋಷ್ಠಿ ಕರೆದು ಸ್ವತಃ ಅವರೇ ಕ್ಯಾನ್ಸರ್ ಬಗ್ಗೆ ಹೇಳಿಕೊಂಡಿದ್ದರು.
  • Blogger Comments
  • Facebook Comments

0 comments:

Post a Comment

Item Reviewed: ಮುತ್ತಪ್ಪ ರೈ ಆರೋಗ್ಯ ಸ್ಥಿತಿ ಗಂಭೀರ : ಆಸ್ಪತ್ರೆಗೆ ದಾಖಲು Rating: 5 Reviewed By: karavali Times
Scroll to Top