ಪೊಲೀಸರು, ಮಾಧ್ಯಮ ಪ್ರತಿನಿಧಿಗಳು ಕೊರೋನಾ ಪರೀಕ್ಷೆ ಮಾಡಿಕೊಳ್ಳಿ : ಸಚಿವ ಡಾ ಸುಧಾಕರ್ ಕಿವಿ ಮಾತು - Karavali Times ಪೊಲೀಸರು, ಮಾಧ್ಯಮ ಪ್ರತಿನಿಧಿಗಳು ಕೊರೋನಾ ಪರೀಕ್ಷೆ ಮಾಡಿಕೊಳ್ಳಿ : ಸಚಿವ ಡಾ ಸುಧಾಕರ್ ಕಿವಿ ಮಾತು - Karavali Times

728x90

20 April 2020

ಪೊಲೀಸರು, ಮಾಧ್ಯಮ ಪ್ರತಿನಿಧಿಗಳು ಕೊರೋನಾ ಪರೀಕ್ಷೆ ಮಾಡಿಕೊಳ್ಳಿ : ಸಚಿವ ಡಾ ಸುಧಾಕರ್ ಕಿವಿ ಮಾತು



ಬೆಂಗಳೂರು (ಕರಾವಳಿ ಟೈಮ್ಸ್) : ಕೊರೊನಾ ಭೀತಿಯ ಸಂದರ್ಭದಲ್ಲಿ ಸದಾ ಸಮಾಜದ ಬಾಹ್ಯ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸರು ಹಾಗೂ ಮಾಧ್ಯಮ ಪ್ರತಿನಿಧಿಗಳು ಆರೋಗ್ಯದ ದೃಢಪಡಿಸಿಕೊಳ್ಳುವ  ಉದ್ದೇಶದಿಂದ ಕೊರೋನಾ ವೈರಾಣು ಸೋಂಕಿನ ಪರೀಕ್ಷೆ ಮಾಡಿಸಿಕೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೊರೊನಾ ಬಿಕ್ಕಟ್ಟಿನ ಸವಾಲಿನ ಸನ್ನಿವೇಶಗಳಲ್ಲೂ ಸದಾ ಮನೆಯಿಂದ ಹೊರಗಿದ್ದು, ಕಾರ್ಯನಿರ್ವಹಿಸುತ್ತಿರುವ ಪೊಲೀಸರು, ಮಾಧ್ಯಮ ಪ್ರತಿನಿಧಿಗಳು ತಮ್ಮ ಆರೋಗ್ಯವನ್ನು ಖಚಿತಪಡಿಸಿಕೊಳ್ಳಲು ಸರಕಾರದ ಯಾವುದೇ ಪರೀಕ್ಷಾ ಕೇಂದ್ರದಲ್ಲಿ ತಕ್ಷಣ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಕೊರೊನಾ ಸೋಂಕು ಹರಡುವಿಕೆ ನಿಯಂತ್ರಿಸಲು ದೇಶಾದ್ಯಂತ ಲಾಕ್‍ಡೌನ್ ವಿಧಿಸಲಾಗಿದೆ. ಪರಿಣಾಮ ಜನರೆಲ್ಲಾ ಮನೆಯಲ್ಲೇ ಕಾಲ ಕಳೆಯುತ್ತಿದ್ದಾರೆ. ಆದರೆ, ಇಂಥ ಪರಿಸ್ಥಿತಿಯಲ್ಲೂ ಪೊಲೀಸರು ಹಾಗೂ ಮಾಧ್ಯಮ ಪ್ರತಿನಿಧಿಗಳು ಸದಾ ಓಡಾಡಿ ಹೊರಗೆ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ಇವರಿಗೂ ಸೋಂಕು ಹರಡುವ ಭೀತಿ ಎದುರಾಗಿದೆ. ಈಗಾಗಲೇ ಮುಂಬೈಯಲ್ಲಿ 53 ಪತ್ರಕರ್ತರಲ್ಲಿ ಕೊರೊನಾ ಪಾಸಿಟಿವ್ ಧೃಡಪಟ್ಟಿದೆ. ಹೀಗಾಗಿ ರಾಜ್ಯದಲ್ಲಿರುವ ಪೊಲೀಸ್ ಇಲಾಖೆಯ ಮಂದಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಸಚಿವ ಡಾ. ಕೆ. ಸುಧಾಕರ್ ಟ್ವೀಟ್‍ನಲ್ಲಿ ಮನವಿ ಮಾಡಿದ್ದಾರೆ.
  • Blogger Comments
  • Facebook Comments

0 comments:

Post a Comment

Item Reviewed: ಪೊಲೀಸರು, ಮಾಧ್ಯಮ ಪ್ರತಿನಿಧಿಗಳು ಕೊರೋನಾ ಪರೀಕ್ಷೆ ಮಾಡಿಕೊಳ್ಳಿ : ಸಚಿವ ಡಾ ಸುಧಾಕರ್ ಕಿವಿ ಮಾತು Rating: 5 Reviewed By: karavali Times
Scroll to Top