ಅಕ್ರಮ ಕಳ್ಳಭಟ್ಟಿ ತಯಾರಿಕಾ ಸ್ಥಳಕ್ಕೆ ಪುತ್ತೂರು ಪೊಲೀಸರ ದಾಳಿ : ಓರ್ವನ ಬಂಧನ - Karavali Times ಅಕ್ರಮ ಕಳ್ಳಭಟ್ಟಿ ತಯಾರಿಕಾ ಸ್ಥಳಕ್ಕೆ ಪುತ್ತೂರು ಪೊಲೀಸರ ದಾಳಿ : ಓರ್ವನ ಬಂಧನ - Karavali Times

728x90

16 April 2020

ಅಕ್ರಮ ಕಳ್ಳಭಟ್ಟಿ ತಯಾರಿಕಾ ಸ್ಥಳಕ್ಕೆ ಪುತ್ತೂರು ಪೊಲೀಸರ ದಾಳಿ : ಓರ್ವನ ಬಂಧನಪುತ್ತೂರು (ಕರಾವಳಿ ಟೈಮ್ಸ್) : ತಾಲೂಕಿನ ಪಡುವನ್ನೂರು ಗ್ರಾಮದ ಮಾಪಳ ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಕಳ್ಳಭಟ್ಟಿ ತಯಾರಿಕಾ ಕೇಂದ್ರಕ್ಕೆ ದಾಳಿ ನಡೆಸಿದ ಪುತ್ತೂರು ಪುತ್ತೂರು ಗ್ರಾಮಾಂತರ ಠಾಣಾ ಪೆÇಲೀಸರು ಆರೋಪಿ ಪುತ್ತೂರು ತಾಲೂಕು, ಅರಿಯಡ್ಕ ಗ್ರಾಮದ ನಿವಾಸಿ ಶರತ್ ಕುಮಾರ್ (24) ಎಂಬಾತನನ್ನು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ಕೇಶವ ಗೌಡ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ.

ದಾಳಿ ವೇಳೆ ಪೊಲೀಸರು ಸ್ಥಳದಲ್ಲಿ ದೊರೆತ ಅಂದಾಜು 2 ಲೀಟರ್  ಪ್ರಮಾಣದ ಕಳ್ಳಭಟ್ಟಿ ಸಾರಾಯಿ ಹಾಗೂ 200 ಲೀಟರ್ ಸಾಮರ್ಥ್ಯದ ಪ್ಲಾಸ್ಟಿಕ್ ಡ್ರಂ, 100 ಲೀಟರ್ ಹುಳಿರಸ ಹಾಗೂ ಕಳ್ಳಭಟ್ಟಿ ತಯಾರಿಸಲು ಬಳಸಿದ ಪಾತ್ರೆ, ಬಟ್ಟೆ, ಸಾರಾಯಿ ಮಾರಾಟದಿಂದ ಬಂದಿರುವ 360 ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಕಲಂ 13(ಎ ), (ಎಫ್), 32, 34 ಕರ್ನಾಟಕ ಅಬಕಾರಿ ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ.
  • Blogger Comments
  • Facebook Comments

0 comments:

Post a Comment

Item Reviewed: ಅಕ್ರಮ ಕಳ್ಳಭಟ್ಟಿ ತಯಾರಿಕಾ ಸ್ಥಳಕ್ಕೆ ಪುತ್ತೂರು ಪೊಲೀಸರ ದಾಳಿ : ಓರ್ವನ ಬಂಧನ Rating: 5 Reviewed By: karavali Times
Scroll to Top