ಮೇ 1 ರವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು (ಕರಾವಳಿ ಟೈಮ್ಸ್) : ಸಿಲಿಕಾನ್ ಸಿಟಿಯ ಬಹುತೇಕ ಪ್ರದೇಶಗಳಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಗುಡುಗು ಸಹಿತ ಭಾರೀ ಮಳೆಯಾಗಿದೆ. ಬೆಳಗ್ಗೆ 5.30ರ ಸುಮಾರಿಗೆ ಆರಂಭವಾದ ಮಳೆ ನಿರಂತರವಾಗಿ ಸುರಿದಿದೆ. ಮೈಸೂರು ರಸ್ತೆ, ಕೆಂಗೇರಿ, ಉತ್ತರಹಳ್ಳಿ, ವಿಜಯನಗರ, ಜಯನಗರ, ಮಲ್ಲೇಶ್ವರಂ, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ.
ಮೇ. 1 ರವರೆಗೂ ರಾಜ್ಯದಲ್ಲಿ ಇದೇ ರೀತಿ ಮಳೆ ಮುಂದುವರೆಯಲಿಗೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆ ಕೂಡ ರಾಮನಗರ, ಎಚ್.ಡಿ. ಕೋಟೆಯಲ್ಲಿ ಮಳೆಯಾಗಿತ್ತು. ದಕ್ಷಿಣ ಒಳನಾಡಿನಲ್ಲಿಯೂ ಮುಂದಿನ ದಿನಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ಉತ್ತರ ಒಳನಾಡು, ಕರಾವಳಿ ಪ್ರದೇಶಗಳಲ್ಲಿ ತಾಪಮಾನ ಮುಂದುರೆಯಲಿದೆ ಎಂದು ಇಲಾಖೆ ತಿಳಿಸಿದೆ.










0 comments:
Post a Comment