ಲಾಕ್‍ಡೌನ್ ಉಲ್ಲಂಘನೆ : ಜಿಲ್ಲೆಯಾದ್ಯಂತ 154 ವಾಹನ ಸೀಝ್ - Karavali Times ಲಾಕ್‍ಡೌನ್ ಉಲ್ಲಂಘನೆ : ಜಿಲ್ಲೆಯಾದ್ಯಂತ 154 ವಾಹನ ಸೀಝ್ - Karavali Times

728x90

2 April 2020

ಲಾಕ್‍ಡೌನ್ ಉಲ್ಲಂಘನೆ : ಜಿಲ್ಲೆಯಾದ್ಯಂತ 154 ವಾಹನ ಸೀಝ್



ಮಂಗಳೂರು (ಕರಾವಳಿ ಟೈಮ್ಸ್) : ಲಾಕ್‍ಡೌನ್ ನಿಯಮ ಉಲ್ಲಂಘಿಸಿ ರಸ್ತೆಗಿಳಿದ 154 ವಾಹನಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪೆÇಲೀಸರು ಗುರುವಾರ ಜಪ್ತಿ ಮಾಡಿದ್ದಾರೆ.

    ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಡಾ. ಪಿ.ಎಸ್. ಹರ್ಷ ಅವರು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಲಾಕ್‍ಡೌನ್‍ನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು, ಮಂಗಳೂರು ನಗರ ಕಮಿಷನರ್ ವ್ಯಾಪ್ತಿಯಲ್ಲಿ ಇಂದು ಕೊರೊನಾ ಲಾಕ್‍ಡೌನ್ ಆದೇಶ ಉಲ್ಲಂಘಿಸಿದ 154 ವಾಹನಗಳನ್ನು ಸೀಝ್ ಮಾಡಲಾಗಿದೆ ಎಂದಿದ್ದಾರೆ.

    ಲಾಕ್ ಡೌನ್ ಹಿನ್ನಲೆಯಲ್ಲಿ ದ.ಕ. ಜಿಲ್ಲಾದ್ಯಂತ ದಿನಬಳಕೆ ವಸ್ತು ಖರೀದಿಗೆ ಅವಕಾಶ ನೀಡಲಾಗಿದ್ದು, ಬೆಳಿಗ್ಗೆ 7ರಿಂದ 12ರವರೆಗೂ ಖರೀದಿಗಾಗಿ ವಾಹನಗಳಿಗೂ ಅವಕಾಶ ನೀಡಲಾಗಿತ್ತು. ಆದರೆ ಮಧ್ಯಾಹ್ನ 12 ಗಂಟೆಯ ಬಳಿಕವೂ ಕೆಲವು ವಾಹನ ಸವಾರರು ರಸ್ತೆಯಲ್ಲಿ ಸಂಚಾರ ನಡೆಸಿ ಕೊರೊನಾ ಲಾಕ್‍ಡೌನ್ ಆದೇಶ ಉಲ್ಲಂಘನೆ ಮಾಡಿದ್ದರು. ಪೆÇಲೀಸ್ ಆಯುಕ್ತರು ಮೊದಲೇ ಎಚ್ಚರಿಕೆ ನೀಡಿದ್ದರೂ ಆದೇಶ ಧಿಕ್ಕರಿಸಿದ ರಸ್ತೆಗಿಳಿದ ವಾಹನಗಳನ್ನು ಕಮಿಷನರ್ ಆದೇಶದಂತೆ ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ.
  • Blogger Comments
  • Facebook Comments

0 comments:

Post a Comment

Item Reviewed: ಲಾಕ್‍ಡೌನ್ ಉಲ್ಲಂಘನೆ : ಜಿಲ್ಲೆಯಾದ್ಯಂತ 154 ವಾಹನ ಸೀಝ್ Rating: 5 Reviewed By: karavali Times
Scroll to Top