ಮಂಗಳೂರು (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರೋನಾ ವೈರಸ್ ಸೋಂಕು ತಡೆಗಟ್ಟುವಲ್ಲಿ ತೊಡಗಿರುವ ರಾಜ್ಯ ಸರ್ಕಾರಿ ಸಿಬ್ಬಂದಿ ವಿರುದ್ಧ ದುರುದ್ದೇಶಪೂರಿತ ಆರೋಪಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಡಿದ ಆರೋಪದ ಮೇಲೆ ಪೆÇಲೀಸರು ನಿಝಾಂ ಅಲಿಯಾಸ್ ನೀಝಾ ಎಂಬಾತನನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
‘ಇದು ನಮ್ಮ ಧ್ವನಿ’ ಎಂಬ ವೇದಿಕೆ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ದುರುದ್ದೇಶಪೂರಿತ ವಿಷಯವನ್ನು ಹರಡಿದ ಆರೋಪದ ಮೇಲೆ ಈತನನ್ನು ಬಂಧಿಸಲಾಗಿದ್ದು, ಈತನನ್ನು ನ್ಯಾಯಾಲಯದ ಆದೇಶದ ಮೇರೆಗೆ ನ್ಯಾಯಾಂಗ ಕಸ್ಟಡಿಗೆ ಕಳುಹಿಸಲಾಗಿದೆ ಎಂದು ನಗರ ಪೆÇಲೀಸ್ ಆಯುಕ್ತ ಡಾ. ಹರ್ಷ ತಿಳಿಸಿದ್ದಾರೆ.
ಆರೋಪಿ ಕೋವಿಡ್-19 ಸೋಂಕು ಹರಡುವಿಕೆ ತಡೆಯುವಿಕೆ ಕೆಲಸದಲ್ಲಿ ತೊಡಗಿರುವ ವಿವಿಧ ಸರ್ಕಾರಿ ಕಾರ್ಯಕರ್ತರ ಕಾರ್ಯದ ಬಗ್ಗೆ ಟೀಕಿಸಿ, ವದಂತಿಗಳನ್ನು ಹರಡಿದ್ದಾನೆ ಎಂಬ ಮಾಹಿತಿಯನ್ನು ಪೊಲೀಸ್ ಆಯುಕ್ತ ಡಾ. ಹರ್ಷ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.










0 comments:
Post a Comment