ಆಹಾರ ವಿತರಣೆಯಲ್ಲಿ ಬಿಜೆಪಿ ರಾಜಕೀಯ ವಿರೋಧಿಸಿ ಕಾಂಗ್ರೆಸ್ ಮಹಿಳಾ ನಾಯಕಿಯರ ಪ್ರತಿಭಟನೆ - Karavali Times ಆಹಾರ ವಿತರಣೆಯಲ್ಲಿ ಬಿಜೆಪಿ ರಾಜಕೀಯ ವಿರೋಧಿಸಿ ಕಾಂಗ್ರೆಸ್ ಮಹಿಳಾ ನಾಯಕಿಯರ ಪ್ರತಿಭಟನೆ - Karavali Times

728x90

4 May 2020

ಆಹಾರ ವಿತರಣೆಯಲ್ಲಿ ಬಿಜೆಪಿ ರಾಜಕೀಯ ವಿರೋಧಿಸಿ ಕಾಂಗ್ರೆಸ್ ಮಹಿಳಾ ನಾಯಕಿಯರ ಪ್ರತಿಭಟನೆ



ಬೆಂಗಳೂರು (ಕರಾವಳಿ ಟೈಮ್ಸ್) : ಅಂಗನವಾಡಿ ಆಹಾರವನ್ನು ಅಕ್ರಮವಾಗಿ ಸಾಗಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅಕ್ರಮ ಹೊಣೆ ಹೊತ್ತು ಸಚಿವರು ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಕರ್ತೆಯರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಅಂಗನವಾಡಿ ಮಕ್ಕಳಿಗೆ, ಗರ್ಭಿಣಿಯರಿಗೆ, ಬಾಣಂತಿಯರಿಗೆ ಸಲ್ಲಬೇಕಾದ ಸರ್ಕಾರದ ಸೌಲಭ್ಯವಾದ ಸಕ್ಕರೆ, ಬೇಳೆ ಮುಂತಾದ ಆಹಾರ ಸಾಮಗ್ರಿಗಳನ್ನು ಬಿಜೆಪಿಗರು ಅಕ್ರಮವಾಗಿ ತಮ್ಮ ಚಿಹ್ನೆ, ಹೆಸರು ಮುದ್ರಿಸಿ ಹಂಚಿಕೆಗೆ ಸಾಗಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲೆಂದು ರೇಸ್‍ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಿಂದ ಹೊರಟಿದ್ದ ಕಾರ್ಯಕರ್ತೆಯರನ್ನು ಶಿವಾನಂದ ವೃತ್ತದಲ್ಲೇ ಪೆÇಲೀಸರು ತಡೆದರು. ಮಕ್ಕಳು, ಮಹಿಳೆಯರಿಗೆ ಸೇರಬೇಕಾದ ಆಹಾರವನ್ನು ದುರುಪಯೋಗಪಡಿಸಿಕೊಂಡ ಬಿಜೆಪಿ ಕಾರ್ಯಕರ್ತರ ವಿರುದ್ಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. ಪ್ರತಿಭಟನೆ ನಡೆಸಬಾರದು ಎಂದು ಪೆÇಲೀಸರು ಮನವಿ ಮಾಡಿದರು. ಆದರೆ ಇದಕ್ಕೆ ಜಗ್ಗದ ಕಾರ್ಯಕರ್ತೆಯರು, ಮುಖ್ಯಮಂತ್ರಿ ಮನೆಯತ್ತ ಹೊರಡಲು ಮುಂದಾದರು. ಈ ವೇಳೆ 20ಕ್ಕೂ ಹೆಚ್ಚು ಕಾರ್ಯಕರ್ತೆಯರನ್ನು ಪೆÇಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆಗೊಳಿಸಿದರು.

ಕಾಂಗ್ರೆಸ್ ನಾಯಕರಿರುವ ವಿಧಾನಸಭೆ ಕ್ಷೇತ್ರಗಳಾದ ಚಾಮರಾಜಪೇಟೆ, ಬಿಟಿಎಂ ಲೇಔಟ್, ಜಯನಗರ, ವಿಜಯನಗರಗಳಲ್ಲಿ ಸರಿಯಾಗಿ ಆಹಾರ ಪದಾರ್ಥ ಹಂಚುತ್ತಿಲ್ಲ ಎಂದು ಇದೇ ವೇಳೆ ಪ್ರತಿಭಟನಾಕಾರರು ಆರೋಪಿಸಿದರು.

ಶಾಸಕರಾದ ಎನ್.ಎ. ಹ್ಯಾರಿಸ್, ಝಮೀರ್ ಅಹ್ಮದ್ ಖಾನ್, ರಾಮಲಿಂಗ ರೆಡ್ಡಿ, ಸೌಮ್ಯಾ ರೆಡ್ಡಿ ಮತ್ತು ಎಂ. ಕೃಷ್ಣಪ್ಪ ಎಲ್ಲರೂ ತಮ್ಮ ಸ್ವಂತ ಹಣ ಖರ್ಚು ಮಾಡಿ ಪಡಿತರ ಮತ್ತು ಆಹಾರ ಕಿಟ್‍ಗಳನ್ನು ವಿತರಿಸುತ್ತಿದ್ದಾರೆ ಎಂದ ಪ್ರತಿಭಟನಾಕಾರರು ನಗರದ ಈ ನಾಲ್ಕು ಕ್ಷೇತ್ರಗಳಲ್ಲಿ ಸುಮಾರು 30,000-50,000 ಆಹಾರ ಪ್ಯಾಕೆಟ್‍ಗಳು ಮತ್ತು ಪಡಿತರ ಕಿಟ್‍ಗಳನ್ನು ವಿತರಿಸಲಾಗುತ್ತಿದ್ದು, ದೈನಂದಿನ ಕೂಲಿ ಕಾರ್ಮಿಕರು, ಆಟೋ ಚಾಲಕರು, ಗೃಹಿಣಿಯರು, ಎಲೆಕ್ಟ್ರಿಷಿಯನ್,ಸೇರಿದಂತೆ ಹಲವರಿಗೆ ಸಹಾಯವಾಗುತ್ತಿದೆ ಎಂದರು.

ಕಾಂಗ್ರೆಸ್ ನಾಯಕಿಯರಾದ ಸೌಮ್ಯಾ ರೆಡ್ಡಿ, ಅಂಜಲಿ ನಿಂಬಾಳ್ಕರ್, ಉಮಾಶ್ರಿ, ಜಯಮಾಲಾ, ರಾಣಿ ಸತೀಶ್, ಮೋಟಮ್ಮ ಸೇರಿದಂತೆ ಹಲವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. 
  • Blogger Comments
  • Facebook Comments

0 comments:

Post a Comment

Item Reviewed: ಆಹಾರ ವಿತರಣೆಯಲ್ಲಿ ಬಿಜೆಪಿ ರಾಜಕೀಯ ವಿರೋಧಿಸಿ ಕಾಂಗ್ರೆಸ್ ಮಹಿಳಾ ನಾಯಕಿಯರ ಪ್ರತಿಭಟನೆ Rating: 5 Reviewed By: karavali Times
Scroll to Top