ಲಾಕ್‍ಡೌನ್ ಎಫೆಕ್ಟ್ : ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳ ರಜೆ ವಿಸ್ತರಣೆ - Karavali Times ಲಾಕ್‍ಡೌನ್ ಎಫೆಕ್ಟ್ : ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳ ರಜೆ ವಿಸ್ತರಣೆ - Karavali Times

728x90

16 May 2020

ಲಾಕ್‍ಡೌನ್ ಎಫೆಕ್ಟ್ : ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳ ರಜೆ ವಿಸ್ತರಣೆ



ಬೆಂಗಳೂರು (ಕರಾವಳಿ ಟೈಮ್ಸ್) : ಕೊರೋನಾ ವೈರಸ್ ಪ್ರಯುಕ್ತ ದೇಶಾದ್ಯಂತ ಹೇರಲ್ಪಟ್ಟ ಲಾಕ್‍ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳ ರಜೆ ವಿಸ್ತರಣೆ ಮಾಡಲಾಗಿದೆ.

ಈ ಹಿಂದೆ ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ವಿಚಾರಣಾ ಹಾಗೂ ಜಿಲ್ಲಾ ನ್ಯಾಯಾಲಯಗಳಿಗೆ ಮೇ 16 ರವರೆಗೆ ನೀಡಲಾಗಿದ್ದ ರಜೆಯನ್ನು ಜೂನ್ 6 ರವರೆಗೆ ವಿಸ್ತರಿಸಲಾಗಿದೆ. ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಅವರ ಆದೇಶದ ಮೇರೆಗೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಾಜೇಂದ್ರ ಬದಾಮಿಕರ್ ಅವರು ಈ ಬಗ್ಗೆ ನೋಟಿಫಿಕೇಷನ್ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಹೈಕೋರ್ಟ್ ಬೆಂಗಳೂರು ಪ್ರಧಾನ ಪೀಠ, ಕಲಬುರಗಿ ಹಾಗೂ ಧಾರವಾಡ ಸಂಚಾರಿ ಪೀಠಗಳು ಸೇರಿ ಎಲ್ಲ ಜಿಲ್ಲಾ, ವಿಚಾರಣಾ, ಕೌಟುಂಬಿಕ, ಕಾರ್ಮಿಕ ನ್ಯಾಯಾಲಯಗಳು ಮತ್ತು ಕೈಗಾರಿಕಾ ನ್ಯಾಯಾಧೀಕರಣಗಳಿಗೆ ಜೂನ್ 6 ರವರೆಗೆ ಈ ರಜೆ ಅನ್ವಯಿಸಲಿದೆ. 
  • Blogger Comments
  • Facebook Comments

0 comments:

Post a Comment

Item Reviewed: ಲಾಕ್‍ಡೌನ್ ಎಫೆಕ್ಟ್ : ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳ ರಜೆ ವಿಸ್ತರಣೆ Rating: 5 Reviewed By: karavali Times
Scroll to Top