ವಿಪಕ್ಷಗಳ ಆಕ್ರೋಶ ಹಾಗೂ ಮಾಧ್ಯಮಗಳ ವರದಿಯಿಂದ ಎಚ್ಚೆತ್ತ ಸರಕಾರ : ಕಾರ್ಮಿಕರಿಗೆ 3 ದಿನ ಉಚಿತ ಪ್ರಯಾಣದ ಗಿಫ್ಟ್ - Karavali Times ವಿಪಕ್ಷಗಳ ಆಕ್ರೋಶ ಹಾಗೂ ಮಾಧ್ಯಮಗಳ ವರದಿಯಿಂದ ಎಚ್ಚೆತ್ತ ಸರಕಾರ : ಕಾರ್ಮಿಕರಿಗೆ 3 ದಿನ ಉಚಿತ ಪ್ರಯಾಣದ ಗಿಫ್ಟ್ - Karavali Times

728x90

2 May 2020

ವಿಪಕ್ಷಗಳ ಆಕ್ರೋಶ ಹಾಗೂ ಮಾಧ್ಯಮಗಳ ವರದಿಯಿಂದ ಎಚ್ಚೆತ್ತ ಸರಕಾರ : ಕಾರ್ಮಿಕರಿಗೆ 3 ದಿನ ಉಚಿತ ಪ್ರಯಾಣದ ಗಿಫ್ಟ್




ಬೆಂಗಳೂರು (ಕರಾವಳಿ ಟೈಮ್ಸ್) : ವಲಸೆ ಕಾರ್ಮಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡಲಾಗುತ್ತಿದೆ ಎಂದು ವಿಪಕ್ಷಗಳು ಹಾರಿಹಾಯ್ದಿದ್ದರಿಂದ ಹಾಗೂ ಈ ಬಗ್ಗೆ ಕರಾವಳಿ ಟೈಮ್ಸ್ ಸಹಿತ ನಾಡಿನ ವಿವಿಧ ಸುದ್ದಿ ಮಾಧ್ಯಮಗಳು ಸರಣಿ ಸುದ್ದಿ ಬಿತ್ತರಿಸಿದ ಪರಿಣಾಮ ಕೊನೆಗೂ ಎಚ್ಚೆತ್ತ ರಾಜ್ಯ ಸರಕಾರ ಇದೀಗ ವಲಸೆ ಕಾರ್ಮಿಕರಿಗಾಗಿ ಉಚಿತವಾಗಿ 3 ದಿನಗಳ ಕಾಲ ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದೆ.

ದುಬಾರಿ ಬಸ್ ದರದಿಂದಾಗಿ ಕೆಲಸವಿಲ್ಲದ ಕೂಲಿ ಕಾರ್ಮಿಕರು ಪರದಾಡುವಂತಾಗಿತ್ತು. ಈ ಬಗ್ಗೆ ನಿನ್ನೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರು ಮೆಜೆಸ್ಟಿಕ್‍ಗೆ ಹೋಗಿ ಅಲ್ಲಿದ್ದ ವಲಸೆ ಕಾರ್ಮಿಕರ ಜೊತೆ ಮಾತುಕತೆಯನ್ನೂ ನಡೆಸಿದ್ದರು. ರಾಜ್ಯ ಸರಕಾರ ಕಾರ್ಮಿಕರ ಬಗ್ಗೆ ನಡೆದುಕೊಂಡ ರೀತಿ ಬಗ್ಗೆ ಹಾರಿಹಾಯ್ದಿದ್ದರು. ಭಿಕ್ಷೆ ಎತ್ತಿ ಬೇಕಾದರೂ ನಾನು ಹಣವನ್ನು ನೀಡುತ್ತೇನೆ. ಕಾರ್ಮಿಕರನ್ನು ಅವರ ಊರುಗಳಿಗೆ ಹೋಗುವುದಕ್ಕೆ ಅನುವು ಮಾಡಿಕೊಡಿ ಎಂದು ಆಗ್ರಹಿಸಿದ್ದರು.

ಈ ಎಲ್ಲ ಹಿನ್ನಲೆಯಿಂದ ಇದೀಗ ರಾಜ್ಯ ಸರಕಾರ 3 ದಿನಗಳ ಕಾಲ ಅಂದರೆ ಮಂಗಳವಾರದವರೆಗೆ  ಉಚಿತವಾಗಿ ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ಪ್ರಯಾಣಿಸಲು ಆದೇಶಿಸಿದೆ. ಅಲ್ಲದೆ ಕಾರ್ಮಿಕರಿಗೆ ಉಚಿತವಾಗಿ ಊಟದ ವ್ಯವಸ್ಥೆಯನ್ನು ಮಾಡುತ್ತಿದೆ. ಇದೇ ವೇಳೆ ಕಾರ್ಮಿಕರ ಆರೋಗ್ಯವನ್ನು ತಪಾಸಣೆ ನಡೆಸಿ ಅವರ ಊರುಗಳಿಗೆ ಕಳುಹಿಸಿಕೊಡಲಾಗುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕೆಎಸ್‍ಆರ್‍ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಎಂ ಕಳಸದ್, ಸಾರಿಗೆ ನಿಗಮದಿಂದ ಕಾರ್ಮಿಕರಿಗೆ ಇಂದಿನಿಂದ 3 (ಮಂಗಳವಾರ) ದಿನಗಳವರೆಗೆ ಮೂರು ದಿನಗಳ ಕಾಲ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಹಾಗೂ ರಾಜ್ಯ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್‍ಭಾಸ್ಕರ್ ಅವರ ನಿರ್ದೇಶನದ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಬಸ್‍ಗಳಲ್ಲಿ ಸಂಚರಿಸುವ ಎಲ್ಲರೂ ಕಾರ್ಮಿಕರೆಂದು ನಾವು ಭಾವಿಸಿದ್ದೇವೆ. ಉಚಿತ ಪ್ರಯಾಣ ನೀಡಿರುವುದು ಸಿಹಿ ಸುದ್ದಿಯಾಗಿದೆ. ಕಾರ್ಮಿಕರು ಯಾವುದೇ ಆತಂಕವಿಲ್ಲದೆ ಸುಖಕರವಾಗಿ ಪ್ರಯಾಣಿಸಬಹುದು. ಈಗಾಗಲೇ ಹಣ ಪಾವತಿಸಿ ಪ್ರಯಾಣಿಸುತ್ತಿರುವ ಕಾರ್ಮಿಕರಿಗೆ ಹಣ ಮರುಪಾವತಿ ಮಾಡಲಾಗುತ್ತದೆ ಎಂದು ಕಳಸದ್ ತಿಳಿಸಿದರು.

ಸಿಎಂ ಪತ್ರಿಕಾ ಪ್ರಕಟಣೆ 


ಕಾರ್ಮಿಕರು ಮತ್ತು ಬಡ ಕೂಲಿ ಕಾರ್ಮಿಕರ ಪರಿಸ್ಥಿತಿಯನ್ನು ಗಮನಿಸಿ ಇಂದಿ£ಂದ 3 (ಮಂಗಳವಾರ) ದಿನಗಳವರೆಗೆ ಜಿಲ್ಲಾ ಕೇಂದ್ರಗಳಿಂದ ಮತ್ತು ರಾಜಧಾನಿ ಬೆಂಗಳೂರಿನಿಂದ ಕರ್ನಾಟಕದಲ್ಲಿನ ತಮ್ಮ ತಮ್ಮ ಊರುಗಳಿಗೆ ಹೋಗುವ ಎಲ್ಲರಿಗೂ ಉಚಿತವಾಗಿ ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ತೆರಳಲು ಅನುವು ಮಾಡಿಕೊಡಲಾಗಿದೆ. ಇದರ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ನನ್ನ ಕಳಕಳಿಯ ಮನವಿ ಯಾವುದೇ ಬಸ್ ನಿಲ್ದಾಣಗಳಲ್ಲಿ ಯಾರು ನೂಕುನುಗ್ಗಲು ಮಾಡಬಾರದು. ಜನರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಿಎಂ ಯಡಿಯೂರಪ್ಪ ಅವರು ಮನವಿ ಮಾಡಿಕೊಂಡಿದ್ದಾರೆ.

ಮೆಜೆಸ್ಟಿಕ್‍ನಲ್ಲಿ ಸಾವಿರಾರೂ ಕಾರ್ಮಿಕರು ಜಮಾಯಿಸಿದ್ದಾರೆ. ಹೀಗಾಗಿ ಕೆಎಸ್‍ಆರ್‍ಟಿಸಿ 200ಕ್ಕೂ ಹೆಚ್ಚು ಬಸ್ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಅಧಿಕಾರಿಗಳು ಮುಂದೆ ನಿಂತು ಕಾರ್ಯನಿರ್ವಹಿಸುತ್ತಿದ್ದಾರೆ. ಇಂದು ಬಸ್ ನಿಲ್ದಾಣದಲ್ಲಿ ಸೇರಿರುವ ಎಲ್ಲರನ್ನೂ ತಮ್ಮ ಜಿಲ್ಲೆಗಳಿಗೆ ಕಳಿಸಿಕೊಡಲು ಸಿದ್ಧತೆ ನಡೆದಿದೆ. ಅಷ್ಟೇ ಅಲ್ಲದೆ ದಾಖಲೆಗಳನ್ನು ತೋರಿಸಲೇ ಬೇಕು ಎಂದು ಸರ್ಕಾರ ಈ ಹಿಂದೆ ಸೂಚನೆ ನೀಡಿತ್ತು. ಆದರೆ ಈಗ ಯಾವುದೇ ದಾಖಲೆ ತೋರಿಸುವ ಅಗತ್ಯವಿಲ್ಲ ಎಂದು ತಿಳಿಸಲಾಗಿದೆ. 
  • Blogger Comments
  • Facebook Comments

0 comments:

Post a Comment

Item Reviewed: ವಿಪಕ್ಷಗಳ ಆಕ್ರೋಶ ಹಾಗೂ ಮಾಧ್ಯಮಗಳ ವರದಿಯಿಂದ ಎಚ್ಚೆತ್ತ ಸರಕಾರ : ಕಾರ್ಮಿಕರಿಗೆ 3 ದಿನ ಉಚಿತ ಪ್ರಯಾಣದ ಗಿಫ್ಟ್ Rating: 5 Reviewed By: karavali Times
Scroll to Top