ಸೋಮವಾರದಿಂದ ಆರೆಂಜ್, ಗ್ರೀನ್ ಝೋನ್ ಗಳಲ್ಲಿ ಸರಕಾರಿ ಕಛೇರಿಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ : ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಆದೇಶ - Karavali Times ಸೋಮವಾರದಿಂದ ಆರೆಂಜ್, ಗ್ರೀನ್ ಝೋನ್ ಗಳಲ್ಲಿ ಸರಕಾರಿ ಕಛೇರಿಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ : ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಆದೇಶ - Karavali Times

728x90

2 May 2020

ಸೋಮವಾರದಿಂದ ಆರೆಂಜ್, ಗ್ರೀನ್ ಝೋನ್ ಗಳಲ್ಲಿ ಸರಕಾರಿ ಕಛೇರಿಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ : ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಆದೇಶಬೆಂಗಳೂರು (ಕರಾವಳಿ ಟೈಮ್ಸ್) : ಮೇ 4ರಿಂದ ರಾಜ್ಯದ ಕಿತ್ತಳೆ ಮತ್ತು ಹಸಿರು ವಲಯಗಳಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳು  ಪೂರ್ಣ ಪ್ರಮಾಣದಲ್ಲಿ ಕೆಲಸ ನಿರ್ವಹಿಸಲಿವೆ.
ಈ ಎರಡೂ ವಲಯಗಳ ಸರ್ಕಾರಿ ಕಚೇರಿಗಳಲ್ಲಿ ಶೇ.100 ರಷ್ಟು ಗ್ರೂಪ್‌ ಎ, ಬಿ, ಸಿ ಹಾಗೂ ಡಿ ವೃಂದದ ಅಧಿಕಾರಿ ಹಾಗೂ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್‌ ಶನಿವಾರ ಆದೇಶ ಹೊರಡಿಸಿದ್ದಾರೆ.

ಕೊರೋನಾ ವೈರಸ್‌ ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಹೊರಡಿಸಿರುವ ಮಾರ್ಗಸೂಚಿಗಳ ಅನ್ವಯ ಆರೋಗ್ಯ ಇಲಾಖೆಯು ಕೆಂಪು, ಹಸಿರು ಹಾಗೂ ಕಿತ್ತಲೆ ವಲಯಗಳನ್ನಾಗಿ ವಿಂಗಡಿಸಿ ಅಧಿಸೂಚನೆ ಹೊರಡಿಸಿದೆ.
ಅದರಂತೆ ಮೇ 4 ರಿಂದ 17ರ ಅವಧಿಯಲ್ಲಿ ಕೆಂಪು ವಲಯದಲ್ಲಿರುವ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಅವಶ್ಯಕ ಸೇವೆಗಳನ್ನು ಒದಗಿಸುತ್ತಿರುವ ಇಲಾಖೆಗಳ ಸರ್ಕಾರಿ ಕಚೇರಿಗಳಲ್ಲಿ ಶೇ. 100 ರಷ್ಟು ಗ್ರೂಪ್‌ ಎ,ಬಿ, ಸಿ ಹಾಗೂ ಡಿ ವೃಂದದ ಅಧಿಕಾರಿಗಳು, ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಬೇಕು. ಉಳಿದ ಇಲಾಖೆಗಳಲ್ಲಿನ ಗ್ರೂಪ್‌ ಎ ಮತ್ತು ಬಿ ವೃಂದದ ಎಲ್ಲಾ ಅಧಿಕಾರಿಗಳು, ಗ್ರೂಪ್‌ ಸಿ ಮತ್ತು ಡಿ ವೃಂದದ ಶೇ. 33 ರಷ್ಟು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಬೇಕೆಂದು ಸೂಚಿಸಲಾಗಿದೆ.
  • Blogger Comments
  • Facebook Comments

0 comments:

Post a Comment

Item Reviewed: ಸೋಮವಾರದಿಂದ ಆರೆಂಜ್, ಗ್ರೀನ್ ಝೋನ್ ಗಳಲ್ಲಿ ಸರಕಾರಿ ಕಛೇರಿಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ : ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಆದೇಶ Rating: 5 Reviewed By: karavali Times
Scroll to Top