ಎಸ್ಸೆಸ್ಸೆಲ್ಸಿ ಪರೀಕ್ಷೆ : ಮೇ 29ರವರೆಗೆ ಪರೀಕ್ಷಾ ಕೇಂದ್ರ ಬದಲಾವಣೆಗೆ ಅವಕಾಶ - Karavali Times ಎಸ್ಸೆಸ್ಸೆಲ್ಸಿ ಪರೀಕ್ಷೆ : ಮೇ 29ರವರೆಗೆ ಪರೀಕ್ಷಾ ಕೇಂದ್ರ ಬದಲಾವಣೆಗೆ ಅವಕಾಶ - Karavali Times

728x90

23 May 2020

ಎಸ್ಸೆಸ್ಸೆಲ್ಸಿ ಪರೀಕ್ಷೆ : ಮೇ 29ರವರೆಗೆ ಪರೀಕ್ಷಾ ಕೇಂದ್ರ ಬದಲಾವಣೆಗೆ ಅವಕಾಶ



ಬೆಂಗಳೂರು (ಕರಾವಳಿ ಟೈಮ್ಸ್) : ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರ ಬದಲಾವಣೆ ಮಾಡಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮೇ 29ರವರೆಗೆ ಅವಕಾಶ ನೀಡಿದೆ.

ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದ ಶಾಲೆಯ ಮುಖ್ಯ ಶಿಕ್ಷಕರನ್ನು ದೂರವಾಣಿಯ ಮೂಲಕ ಸಂಪರ್ಕಿಸಿ ತಾವು ಸದ್ಯ ವಾಸ ಮಾಡುತ್ತಿರುವ ಮನೆಯ ಹತ್ತಿರದ ಪರೀಕ್ಷಾ ಕೇಂದ್ರವನ್ನು ಗುರುತಿಸಿ ಮುಖ್ಯ ಶಿಕ್ಷಕರ ಲಾಗಿನ್ ಮೂಲಕ ಬದಲಿಸಿಕೊಳ್ಳಬಹುದು. ನಿಗದಿತ ದಿನಾಂಕದೊಳಗೆ ಬದಲಾವಣೆ ಮಾಡಿಕೊಳ್ಳದಿದ್ದರೆ ಮೂಲ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಬೇಕು.

ಪರೀಕ್ಷಾ ಕೇಂದ್ರ ಬದಲಾವಣೆ ಮಾಡಿಕೊಂಡರೂ ಹಳೆಯ ಪರೀಕ್ಷಾ ನೋಂದಣಿ ಸಂಖ್ಯೆ ಇರಲಿದೆ. ಮೊದಲಿಗೆ ತಾವು ಓದಿದ ಶಾಲಾ ಮುಖ್ಯ ಶಿಕ್ಷಕರ ಬಳಿ ತೆರಳಿ ಕೇಂದ್ರ ಬದಲಾವಣೆ ಬಗ್ಗೆ ಮಾಹಿತಿ ನೀಡಬೇಕು. ಶಾಲಾ ಮುಖ್ಯಸ್ಥರು ಬದಲಾವಣೆ ಮಾಡಿದ ಕೇಂದ್ರದ ಮಾಹಿತಿಯನ್ನು ಎಸ್ಸೆಸ್ಸೆಲ್ಸಿ ಬೋರ್ಡಿಗೆ ಮಾಹಿತಿ ಕೊಡಬೇಕಾಗುತ್ತದೆ.

ಶಿಕ್ಷಣ ಇಲಾಖೆ ಮಾರ್ಗಸೂಚಿ

* ಈಗ ವಿದ್ಯಾರ್ಥಿಗಳು ಇರುವ ತಾಲೂಕು ಕೇಂದ್ರದಲ್ಲಿ ಪರೀಕ್ಷಾ ಕೇಂದ್ರ ಆಯ್ಕೆ ಮಾಡಿಕೊಳ್ಳಬಹುದು.
* ಒಂದು ಬಾರಿ ಪರೀಕ್ಷಾ ಕೇಂದ್ರ ಬದಲಾವಣೆ ಮಾಡಿಕೊಂಡರೆ ಮತ್ತೆ ಬದಲಾವಣೆಗೆ ಅವಕಾಶ ಇಲ್ಲ.
* ಹೊಸ ಕೇಂದ್ರ ಬದಲಾವಣೆ ನಂತರ ಹಳೆ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ಇರುವುದಿಲ್ಲ.
* ವಿದ್ಯಾರ್ಥಿಗಳ ರಿಜಿಸ್ಟರ್ ನಂಬರ್‍ನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. 
* ಕೇಂದ್ರ ಮಾತ್ರ ಬದಲಾವಣೆ ಮಾಡಿಕೊಳ್ಳಬಹುದು.
* ಕೇಂದ್ರ ಬದಲಾವಣೆ ಯಾವುದೇ ಶುಲ್ಕ ಇರುದಿಲ್ಲ.
* ಕೇಂದ್ರ ಬದಲಾವಣೆ ಬಳಿಕ ಪ್ರವೇಶ ಪತ್ರ ಡೌನ್‍ಲೋಡ್‍ಗೆ ಅವಕಾಶ.
* ಶಾಲಾ ಮುಖ್ಯ ಶಿಕ್ಷಕರು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ತಾಲೂಕಿನ ಬಿಇಓಗಳ ಮೂಲಕ ಪ್ರವೇಶ ಪತ್ರ ಡೌನ್‍ಲೋಡ್ ಮಾಡಿಕೊಳ್ಳಲು ಅವಕಾಶ ನೀಡಿ ಎಸ್ಸೆಸ್ಸೆಲ್ಸಿ ಬೋರ್ಡ್ ಅಧಿಕೃತವಾಗಿ ಮಾಹಿತಿ ಬಿಡುಗಡೆ ಮಾಡಿದೆ.
  • Blogger Comments
  • Facebook Comments

0 comments:

Post a Comment

Item Reviewed: ಎಸ್ಸೆಸ್ಸೆಲ್ಸಿ ಪರೀಕ್ಷೆ : ಮೇ 29ರವರೆಗೆ ಪರೀಕ್ಷಾ ಕೇಂದ್ರ ಬದಲಾವಣೆಗೆ ಅವಕಾಶ Rating: 5 Reviewed By: karavali Times
Scroll to Top