ವಿಶಾಖಪಟ್ಟಣ ವಿಷಾನಿಲ ಸೋರಿಕೆ ಪ್ರಕರಣ : ಸಾವಿನ ಸಂಖ್ಯೆ 10ಕ್ಕೇರಿಕೆ - Karavali Times ವಿಶಾಖಪಟ್ಟಣ ವಿಷಾನಿಲ ಸೋರಿಕೆ ಪ್ರಕರಣ : ಸಾವಿನ ಸಂಖ್ಯೆ 10ಕ್ಕೇರಿಕೆ - Karavali Times

728x90

7 May 2020

ವಿಶಾಖಪಟ್ಟಣ ವಿಷಾನಿಲ ಸೋರಿಕೆ ಪ್ರಕರಣ : ಸಾವಿನ ಸಂಖ್ಯೆ 10ಕ್ಕೇರಿಕೆ

ಕೇಂದ್ರ ಸಚಿವ ಕಿಶನ್ ರೆಡ್ಡಿ ಸಂತಾಪ

ತನಿಖೆಗೆ ಆದೇಶ


ವಿಶಾಖಪಟ್ಟಣ (ಕರಾವಳಿ ಟೈಮ್ಸ್) : ಆಂಧ್ರ ಪ್ರದೇಶದ ವಿಶಾಖಪಟ್ಟಣ ಜಿಲ್ಲೆಯ ಕಾರ್ಖಾನೆಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೇರಿಕೆಯಾಗಿದೆ.

ಗುರುವಾರ ಬೆಳಗ್ಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ವಿಶಾಖಪಟ್ಟಣಂನ ಗೋಪಾಲಪಟ್ಟಣದ, ನಾಯ್ಡು ತೋಟಾ ಸಮೀಪದ ಆರ್.ಆರ್. ವೆಂಕಟಪುರಂನಲ್ಲಿರುವ ಎಲ್.ಜಿ. ಪಾಲಿಮರ್ಸ್ ಇಂಡಸ್ಟ್ರಿಯಲ್ಲಿ ವಿಷಾನಿಲ ಸೋರಿಕೆಯಾಗಿದ್ದು, ಗಾಳಿಯಲ್ಲಿ ವಿಷಾನಿಲ ಸುತ್ತಮುತ್ತಲ ಪ್ರದೇಶಗಳಿಗೆ ಹರಡಿದೆ. ಪರಿಣಾಮ ಬೆಳಗ್ಗೆ ವಾಕಿಂಗ್  ಮತ್ತು ಇತರೆ ಕಾರ್ಯಗಳಿಗೆ ಬಂದವರು ವಿಷಾನಿಲವನ್ನು ಉಸಿರಾಡಿ ಕೂಡಲೇ ಅಸ್ವಸ್ಥರಾಗಿದ್ದಾರೆ. ಈ ದುರ್ಘಟನೆಯಲ್ಲಿ ಇದುವರೆಗೂ ಇಬ್ಬರು ವೃದ್ಧರು, 7 ವರ್ಷದ ಬಾಲಕಿ ಸೇರಿದಂತೆ ಒಟ್ಟು 10  ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಐದು ಮಂದಿ ಆಸ್ಪತ್ರೆಗೆ ಸೇರಿಸುವ ಮುನ್ನವೇ ಸಾವನ್ನಪ್ಪಿದ್ದರು ಎಂದು ತಿಳಿದುಬಂದಿದೆ.

ಅಸ್ವಸ್ಥರನ್ನು ವಿಶಾಖಪಟ್ಟದ ಕಿಂಗ್ ಜಾರ್ಜ್ ವೈದ್ಯಕೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇದೊಂದೇ ಆಸ್ಪತ್ರೆಯಲ್ಲಿ ಸುಮಾರು 180ಕ್ಕೂ ಅಧಿಕ ಮಂದಿ ಅಸ್ವಸ್ಥರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ವಿಷಾನಿಲ ಸೋರಿಕೆಯಿಂದಾಗಿ ಕಾರ್ಖಾನೆಯ ಸುಮಾರು 5 ಕಿ.ಮೀ ವ್ಯಾಪ್ತಿಯಲ್ಲಿ ಆತಂಕ  ಸೃಷ್ಟಿಯಾಗಿದ್ದು, ಗೋಪಾಲಪಟ್ಟಣಂ ಸುತ್ತಲಿನ ಐದು ಗ್ರಾಮಗಳಲ್ಲಿನ ಜನರಿಗೆ ಉಸಿರಾಟದ ತೊಂದರೆ ಮತ್ತು ಗಂಟಲು ಕೆರೆತ ಸಮಸ್ಯೆ ಆರಂಭವಾಗಿದೆ. ನೂರಾರು ಮಂದಿ ಉಸಿರಾಟದ ಸಮಸ್ಯೆ, ಗಂಟಲು ನೋವು, ಕಣ್ಣಿನ ಉರಿ, ಹೊಟ್ಟೆ ನೋವು, ಇತರೆ ಸಮಸ್ಯೆಗಳಿಂದಾಗಿ ಆಸ್ಪತ್ರೆಗೆ  ದಾಖಲಾಗುತ್ತಿದ್ದಾರೆ. ಅಸ್ವಸ್ಥರನ್ನು ಆಸ್ಪತ್ರೆಗೆ ರವಾನಿಸಲು ಆಂಬುಲೆನ್ಸ್‍ಗಳನ್ನು ಮತ್ತು ಸರಕಾರಿ ಸಾರಿಗೆ ಬಸ್‍ಗಳನ್ನು ಕೂಡ ನಿಯೋಜನೆ ಮಾಡಲಾಗಿದೆ.

ಕೇಂದ್ರ ಸಚಿವ ಕಿಶನ್ ರೆಡ್ಡಿ ಸಂತಾಪ


ವಿಶಾಖಪಟ್ಟಣಂ ವಿಷಾನಿಲ ಸೋರಿಕೆ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಕೇಂದ್ರ ಸಚಿವ ಕಿಶನ್ ರೆಡ್ಡಿ ಸಂತಾಪ ಸೂಚಿಸಿದ್ದು, ದುರಂತದ ಕುರಿತು ತನಿಖೆಗೆ ಆದೇಶಿಸಿದ್ದಾರೆ. ಈ ಕುರಿತಂತೆ ನಾನು ಆಂಧ್ರಪ್ರದೇಶ ಮುಖ್ಯ ಕಾರ್ಯದರ್ಶಿಗಳು ಮತ್ತು ಆಂಧ್ರಪ್ರದೇಶ  ಪೆÇಲೀಸ್ ಡಿಜಿಪಿ ಅವರೊಂದಿಗೆ ಮಾತನಾಡಿದ್ದೇನೆ. ಪರಿಸ್ಥಿತಿ ನಿಯಂತ್ರಿಸಲು ಬೇಕಾದ ಎಲ್ಲ ನೆರವು ಕೇಂದ್ರ ಸರಕಾರದಿಂದ ದೊರೆಯಲಿದೆ ಎಂದು ಹೇಳಿದ್ದೇನೆ ಎಂದು ಪ್ರತಿಕ್ರಯಿಸಿದ್ದಾರೆ.

ಅಂತೆಯೇ ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಿಜಕ್ಕೂ ಈ ದುರಂತ ದುರದೃಷ್ಟಕರವಾದದ್ದು ಎಂದು ಹೇಳಿದ್ದಾರೆ.
  • Blogger Comments
  • Facebook Comments

0 comments:

Post a Comment

Item Reviewed: ವಿಶಾಖಪಟ್ಟಣ ವಿಷಾನಿಲ ಸೋರಿಕೆ ಪ್ರಕರಣ : ಸಾವಿನ ಸಂಖ್ಯೆ 10ಕ್ಕೇರಿಕೆ Rating: 5 Reviewed By: karavali Times
Scroll to Top