ಬೆಂಗಳೂರಿನಲ್ಲಿ ತಕ್ಷಣದಿಂದ ಕನಿಷ್ಟ 20 ದಿನ ಸಂಪೂರ್ಣ ಲಾಕ್‍ಡೌನ್ ಮಾಡಿ : ಕುಮಾರಸ್ವಾಮಿ - Karavali Times ಬೆಂಗಳೂರಿನಲ್ಲಿ ತಕ್ಷಣದಿಂದ ಕನಿಷ್ಟ 20 ದಿನ ಸಂಪೂರ್ಣ ಲಾಕ್‍ಡೌನ್ ಮಾಡಿ : ಕುಮಾರಸ್ವಾಮಿ - Karavali Times

728x90

23 June 2020

ಬೆಂಗಳೂರಿನಲ್ಲಿ ತಕ್ಷಣದಿಂದ ಕನಿಷ್ಟ 20 ದಿನ ಸಂಪೂರ್ಣ ಲಾಕ್‍ಡೌನ್ ಮಾಡಿ : ಕುಮಾರಸ್ವಾಮಿಪ್ಯಾಕೇಜ್ ಘೋಷಣೆ ಮಾಡಿದರೆ ಸಾಲದು, ಅನುಷ್ಠಾನಕ್ಕೆ ಕ್ರಮ ಆಗಬೇಕು

ಸರಕಾರ ಅಂಗೈಯಲ್ಲಿ ಅರಮನೆ ತೋರಿಸಬಾರದು


ಬೆಂಗಳೂರು (ಕರಾವಳಿ ಟೈಮ್ಸ್) : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನಲೆಯಲ್ಲಿ ಕೆ.ಆರ್. ಮಾರುಕಟ್ಟೆ, ಕಲಾಸಿಪಾಳ್ಯ, ಚಿಕ್ಕಪೇಟೆ ಮತ್ತು ಚಾಮರಾಜಪೇಟೆ ಏರಿಯಾಗಳನ್ನು ಜೂನ್ 30 ರವರೆಗೆ ಸೀಲ್‍ಡೌನ್ ಮಾಡಲು ಸರಕಾರ ಮುಂದಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್‍ಡೌನ್, ಲಾಕ್‍ಡೌನ್ ಮಾಡಿದರೆ ಪ್ರಯೋಜನವಿಲ್ಲ. ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ತಕ್ಷಣ ಕನಿಷ್ಟ 20 ದಿನ ಸಂಪೂರ್ಣ ಲಾಕ್‍ಡೌನ್ ಮಾಡಿ. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ. ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಬಡವರು, ಕಾರ್ಮಿಕರಿಗೆ ಕೂಡಲೇ ಪಡಿತರ ವಿತರಿಸಿ. ರಾಜ್ಯದ 50 ಲಕ್ಷ ಮಂದಿ ಶ್ರಮಿಕ ವರ್ಗಕ್ಕೆ ತಲಾ ಐದು ಸಾವಿರ ರೂಪಾಯಿ ಪರಿಹಾರ ನೀಡಬೇಕು. ಚಾಲಕರು, ನೇಕಾರರು, ಮಡಿವಾಳರು ಸೇರಿದಂತೆ ವಿವಿಧ ವರ್ಗಕ್ಕೆ ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿರುವ ಪರಿಹಾರ ದಕ್ಕಿಲ್ಲ. ಬರೀ ಪ್ಯಾಕೇಜ್ ಘೋಷಣೆ ಮಾಡಿದರೆ ಸಾಲದು. ಅದರ ಅನುಷ್ಠಾನಕ್ಕೆ ತಕ್ಷಣ ಕಾರ್ಯೋನ್ಮುಖವಾಗಬೇಕು. ಪ್ಯಾಕೇಜ್ ಘೋಷಣೆ ಮಾಡಿ, ಸರಕಾರ ಅಂಗೈಯಲ್ಲಿ ಅರಮನೆ ತೋರಿಸಬಾರದು ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
  • Blogger Comments
  • Facebook Comments

0 comments:

Post a Comment

Item Reviewed: ಬೆಂಗಳೂರಿನಲ್ಲಿ ತಕ್ಷಣದಿಂದ ಕನಿಷ್ಟ 20 ದಿನ ಸಂಪೂರ್ಣ ಲಾಕ್‍ಡೌನ್ ಮಾಡಿ : ಕುಮಾರಸ್ವಾಮಿ Rating: 5 Reviewed By: karavali Times
Scroll to Top