ಮೋದಿ ಆದರೂ ಲಾಕ್ ಡೌನ್ ನಿಯಮ‌ ಪಾಲಿಸಲೇಬೇಕು : ಮನ್ ಕಿ ಬಾತ್ ನಲ್ಲಿ ಪ್ರಧಾನಿ ತಾಕೀತು - Karavali Times ಮೋದಿ ಆದರೂ ಲಾಕ್ ಡೌನ್ ನಿಯಮ‌ ಪಾಲಿಸಲೇಬೇಕು : ಮನ್ ಕಿ ಬಾತ್ ನಲ್ಲಿ ಪ್ರಧಾನಿ ತಾಕೀತು - Karavali Times

728x90

30 June 2020

ಮೋದಿ ಆದರೂ ಲಾಕ್ ಡೌನ್ ನಿಯಮ‌ ಪಾಲಿಸಲೇಬೇಕು : ಮನ್ ಕಿ ಬಾತ್ ನಲ್ಲಿ ಪ್ರಧಾನಿ ತಾಕೀತುಗರೀಬ್ ಕಲ್ಯಾಣ್ ಯೋಜನೆಯಡಿ ಅನ್ನ ಯೋಜನೆ ನವೆಂಬರ್ ವರೆಗೂ ವಿಸ್ತರಣೆ : ಮೋದಿ ಘೋಷಣೆ


ನವದೆಹಲಿ (ಕರಾವಳಿ ಟೈಮ್ಸ್) : ಬಡವರಿಗೆ ಉಚಿತ ಪಡಿತರ ನೀಡುವ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ನವೆಂಬರ್ ತಿಂಗಳವರೆಗೂ ವಿಸ್ತರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಮಂಗಳವಾರ ದೇಶದ ಜನರನ್ನುದ್ದೇಶಿಸಿ ಮಾತನಾಡಿದ ಅವರು, ಕೊರೋನಾ ಲಾಕ್ ಡೌನ್ ನಿಂದಾಗಿ ದೇಶದಲ್ಲಿ ಬಡವರು ತೀವ್ರ ಸಂಕಷ್ಟಕ್ಕೆ ಸಿಲುಕಿರುವುದರಿಂದ ಗರೀಬ್ ಕಲ್ಯಾಣ್ ಯೋಜನೆಯನ್ನು ಜುಲೈ, ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಲ್ಲೂ ಮುಂದುವರಿಸಲಾಗುದು ಎಂದು ಹೇಳಿದ್ದಾರೆ. ಗರೀಬ್ ಕಲ್ಯಾಣ ಅನ್ನ ಯೋಜನೆ ಅಡಿ ಬಡವರಿಗೆ 5 ಕೆಜಿ ಅಕ್ಕಿ ಅಥವಾ ಗೋಧಿ ಮತ್ತು ಒಂದು ಕೆ.ಜಿ. ಬೇಳೆಯನ್ನು ಉಚಿತವಾಗಿ ನೀಡಲಾಗುತ್ತದೆ. ದೇಶದ 80 ಕೋಟಿ ಜನರಿಗೆ ಇದರ ಲಾಭವಾಗಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.

ಕೊರೋನಾ ವೈರಸ್ ಸೋಂಕನ್ನು ಜನರು ಹಗುರವಾಗಿ ತೆಗೆದುಕೊಳ್ಳಬಾರದು. ಅನ್​ಲಾಕ್ ಘೋಷಣೆ ಆದ ಬಳಿಕ ಜನರು ವೈಯಕ್ತಿಕವಾಗಿ ಬಹಳ ನಿರ್ಲಕ್ಷ್ಯ ವಹಿಸುತ್ತಿರುವುದನ್ನು ಗಮನಿಸಿದ್ದೇನೆ. ಇಂಥ ಧೋರಣೆ ತರವಲ್ಲ. ಜನರು ಕೊರೋನಾ ವೈರಸನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಲಾಕ್​ಡೌನ್ ನಿಯಮಗಳನ್ನು ಎಲ್ಲರೂ ತಪ್ಪದೇ ಪಾಲಿಸಬೇಕು. ಲಾಕ್ ಡೌನ್ ನಿಯಮಗಳಿಂದ ಪ್ರಧಾನಿ ಮೋದಿಯೂ ಹೊರತಲ್ಲ. ಯಾರೇ ಆದರೂ ಲಾಕ್​ಡೌನ್ ನಿಯಮ ಪಾಲಿಸದಿದ್ದರೆ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಪ್ರಧಾನಿ ಎಚ್ಚರಿಕೆ ನೀಡಿದ್ಧಾರೆ.
  • Blogger Comments
  • Facebook Comments

0 comments:

Post a comment

Item Reviewed: ಮೋದಿ ಆದರೂ ಲಾಕ್ ಡೌನ್ ನಿಯಮ‌ ಪಾಲಿಸಲೇಬೇಕು : ಮನ್ ಕಿ ಬಾತ್ ನಲ್ಲಿ ಪ್ರಧಾನಿ ತಾಕೀತು Rating: 5 Reviewed By: karavali Times
Scroll to Top