ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಜುಲೈ 15ರ ವರೆಗೆ ಮುಂದುವರಿಕೆ - Karavali Times ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಜುಲೈ 15ರ ವರೆಗೆ ಮುಂದುವರಿಕೆ - Karavali Times

728x90

26 June 2020

ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಜುಲೈ 15ರ ವರೆಗೆ ಮುಂದುವರಿಕೆ



ನವದೆಹಲಿ (ಕರಾವಳಿ ಟೈಮ್ಸ್) : ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿಂದ ರದ್ದುಗೊಂಡಿದ್ದ ಅಂತರಾಷ್ಟ್ರೀಯ ವಿಮಾನ ಸೇವೆಯ ಸ್ಥಗಿತತೆಯನ್ನು ಮತ್ತೆ ಮುಂದುವರಿಸಲಾಗಿದ್ದು, ಜುಲೈ 15ರವರೆಗೆ ಸ್ಥಗಿತಗೊಳಿಸಿ ವಿಸ್ತರಿಸಲಾಗಿದೆ.

ಅಂತಾರಾಷ್ಟ್ರೀಯ ಪ್ರಯಾಣಿಕರ ಸೇವೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಜುಲೈ 15ರವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ತಿಳಿಸಿದೆ. ಈ ನಿರ್ಬಂಧ ಕಾರ್ಗೋ ವಿಮಾನ ಸೇವೆಗೆ ಅನ್ವಯವಾಗುವುದಿಲ್ಲ ಎಂದು ಡಿಜಿಸಿಎ ಸ್ಪಷ್ಟಪಡಿಸಿದೆ.

ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್‍ಡೌನ್ ಘೋಷಿಸಿದ ನಂತರ ಮಾರ್ಚ್ 25ರಂದು ಎಲ್ಲಾ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನ ಸೇವೆಯನ್ನು ರದ್ದುಗೊಳಿಸಲಾಗಿತ್ತು. ಮೇ 25ರಿಂದ ದೇಶಿಯ ವಿಮಾನ ಹಾರಾಟ ಆರಂಭವಾಗಿದೆ. ಆದರೆ ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಮುಂದುವರೆಸಲಾಗಿದೆ.








  • Blogger Comments
  • Facebook Comments

0 comments:

Post a Comment

Item Reviewed: ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಜುಲೈ 15ರ ವರೆಗೆ ಮುಂದುವರಿಕೆ Rating: 5 Reviewed By: karavali Times
Scroll to Top