ಜುಲೈ 1 ರಿಂದ ಶಾಲೆ ತೆರೆಯುವುದಿಲ್ಲ, ಆತಂಕ ಬೇಡ : ಸಚಿವ ಸುರೇಶ್ ಕುಮಾರ್ ಯೂ ಟರ್ನ್ - Karavali Times ಜುಲೈ 1 ರಿಂದ ಶಾಲೆ ತೆರೆಯುವುದಿಲ್ಲ, ಆತಂಕ ಬೇಡ : ಸಚಿವ ಸುರೇಶ್ ಕುಮಾರ್ ಯೂ ಟರ್ನ್ - Karavali Times

728x90

4 June 2020

ಜುಲೈ 1 ರಿಂದ ಶಾಲೆ ತೆರೆಯುವುದಿಲ್ಲ, ಆತಂಕ ಬೇಡ : ಸಚಿವ ಸುರೇಶ್ ಕುಮಾರ್ ಯೂ ಟರ್ನ್



ಬೆಂಗಳೂರು (ಕರಾವಳಿ ಟೈಮ್ಸ್) : ಸದ್ಯಕ್ಕೆ ನಾವು ಶಾಲೆ ಆರಂಭಿಸುವುದಿಲ್ಲ. ಪೆÇೀಷಕರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಫೇಸ್‍ಬುಕ್ ನೇರಪ್ರಸಾರದಲ್ಲಿ ಮಾತನಾಡಿದ ಸಚಿವರು, ಕೇಂದ್ರ ಸರಕಾರ ಮೇ 30 ರಂದು ಶಾಲೆಗಳನ್ನು ಆರಂಭಿಸುವ ಬಗ್ಗೆ ಪೆÇೀಷಕರ ಅಭಿಪ್ರಾಯವನ್ನು ಕೇಳಿ ಎಂದು ರಾಜ್ಯ ಸರಕಾರಗಳಿಗೆ ನಿರ್ದೇಶನ ನೀಡಿದ ಹಿನ್ನಲೆಯಲ್ಲಿ ನಾವು ರಾಜ್ಯದಲ್ಲಿ ಶಾಲೆಗಳಿಗೆ ಸುತ್ತೋಲೆ ಕಳುಹಿಸಿ ಪೆÇೀಷಕರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿರುವುದಷ್ಟೆ ಎಂದು ಸ್ಪಷ್ಟಪಡಿಸಿದರು.
ಜೂನ್ 10, 11, 12 ರಂದು ಎಲ್ಲ ಶಾಲೆಗಳಲ್ಲಿ ಪೆÇೀಷಕರ ಸಭೆ ನಡೆಯಲಿದೆ. ಪೆÇೀಷಕರ ಅಭಿಪ್ರಾಯಗಳು ಕ್ರೋಢೀಕರಣಗೊಳಿಸಿ ಜೂನ್ 15ಕ್ಕೆ ಸರಕಾರಕ್ಕೆ ವರದಿ ಒಪ್ಪಿಸಲಿದ್ದಾರೆ. ಆ ಬಳಿಕ ಶಾಲೆ ಆರಂಭಿಸಬೇಕೋ ಬೇಡವೋ ಎಂಬ ಬಗ್ಗೆ ಸ್ಪಷ್ಟ ನಿರ್ಧಾರಕ್ಕೆ ಬರಲಾಗುವುದು. ಜುಲೈ 1ರಿಂದ ಶಾಲೆ ತೆರೆಯುವುದಿಲ್ಲ. ಅಭಿಪ್ರಾಯ ಸಂಗ್ರಹವಷ್ಟೇ ನಡೆಯುತ್ತದೆ ಎಂದರು.

ಇದೀಗ  ಎರಡು ಅಭಿಪ್ರಾಯಗಳು ವ್ಯಕ್ತವಾಗಿದೆ. ಕೊರೊನಾ ದೀರ್ಘ ಕಾಲ ಇದ್ದರೆ ಅಲ್ಲಿಯವರೆಗೆ ಶಾಲೆಯನ್ನು ಮುಂದೂಡಬೇಕೇ ಅಥವಾ ಕೊರೊನಾದ ಜೊತೆಗೆ ನಾವು ಬದುಕಬೇಕೇ ಎಂಬ ಪ್ರಶ್ನೆ ಎದ್ದಿದೆ. ಈಗಾಗಲೇ ಚಿಕನ್ ಗುನ್ಯಾ ಮೊದಲಾದ ಕಾಯಿಲೆಗಳ ಜೊತೆ ನಾವು ಬದುಕುತ್ತಿದ್ದೇವೆ. ಇದೇ ರೀತಿಯಾಗಿ ಕೊರೊನಾ ಜೊತೆ ಬದುಕಲು ಸಾಧ್ಯವಿಲ್ಲವೇ ಎಂಬ ಪ್ರಶ್ನೆಯೂ ಎದ್ದಿದೆ. ಇದರ ಜೊತೆಯಲ್ಲಿ ಶಾಲೆಯಲ್ಲಿ ಸಾಮಾಜಿಕ ಅಂತರವನ್ನು ಕಾಪಾಡುವುದು ಹೇಗೆ ಎಂಬ ಬಗ್ಗೆ ನಾವು ಚರ್ಚಿಸಬೇಕಿದೆ ಎಂದರು.

ಶಿಕ್ಷಣ ಇಲಾಖೆ ಖಾಸಗಿ ಶಾಲೆಗಳ ಲಾಬಿಗೆ ಮಣಿದಿದೆ ಎಂಬ ಪ್ರಚಾರ ಮಾಡಲಾಗುತ್ತಿದೆ. ಸರಕಾರ ಯಾವ ಲಾಬಿಗೂ ಮಣಿದಿಲ್ಲ. ತರಾತುರಿಯಲ್ಲಿ ನಾವು ಶಾಲೆಯನ್ನು ತೆರೆಯುವುದಿಲ್ಲ. ಮಕ್ಕಳ ಸುರಕ್ಷತೆ ಜೊತೆಗೆ ಮಕ್ಕಳ ಕಲಿಕೆ, ಭವಿಷ್ಯವನ್ನು ಗಮನದಲ್ಲಿಟ್ಟು ನಿರ್ಧಾರವನ್ನು ಕೈಗೊಳ್ಳುತ್ತೇವೆ. ಸದ್ಯಕ್ಕೆ ಪೂರ್ವ ಪ್ರಾಥಮಿಕ, ಪ್ರಾಥಮಿಕ ಶಾಲೆ ಪ್ರಾರಂಭ ಬೇಡ ಎಂಬ ಅಭಿಪ್ರಾಯ ಬಂದಿದೆ. ಪೆÇೀಷಕರ ಅಭಿಪ್ರಾಯ ಪಡೆದ ಬಳಿಕ ನಾವು ಶಾಲೆ ಆರಂಭಿಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.
  • Blogger Comments
  • Facebook Comments

0 comments:

Post a Comment

Item Reviewed: ಜುಲೈ 1 ರಿಂದ ಶಾಲೆ ತೆರೆಯುವುದಿಲ್ಲ, ಆತಂಕ ಬೇಡ : ಸಚಿವ ಸುರೇಶ್ ಕುಮಾರ್ ಯೂ ಟರ್ನ್ Rating: 5 Reviewed By: karavali Times
Scroll to Top