ರಾಜ್ಯ ಕರಾವಳಿ ಜಿಲ್ಲೆಗಳಲ್ಲಿ ಜೂ 23ರವರೆಗೆ ಭಾರಿ ಮಳೆ ಮುನ್ಸೂಚನೆ : ಎಲ್ಲೋ ಅಲರ್ಟ್ ಘೋಷಣೆ - Karavali Times ರಾಜ್ಯ ಕರಾವಳಿ ಜಿಲ್ಲೆಗಳಲ್ಲಿ ಜೂ 23ರವರೆಗೆ ಭಾರಿ ಮಳೆ ಮುನ್ಸೂಚನೆ : ಎಲ್ಲೋ ಅಲರ್ಟ್ ಘೋಷಣೆ - Karavali Times

728x90

19 June 2020

ರಾಜ್ಯ ಕರಾವಳಿ ಜಿಲ್ಲೆಗಳಲ್ಲಿ ಜೂ 23ರವರೆಗೆ ಭಾರಿ ಮಳೆ ಮುನ್ಸೂಚನೆ : ಎಲ್ಲೋ ಅಲರ್ಟ್ ಘೋಷಣೆ



ಬೆಂಗಳೂರು (ಕರಾವಳಿ ಟೈಮ್ಸ್) : ರಾಜ್ಯದ ಕರಾವಳಿ ಭಾಗಗಳಲ್ಲಿ ಮುಂಗಾರು ಚುರುಕುಗೊಂಡಿದೆ. ಇಂದಿನಿಂದ ಮುಂದಿನ ಮಂಗಳವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇದೆ 23ರವರೆಗೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಐದು ದಿನಗಳಲ್ಲೂ ಈ ಪ್ರದೇಶಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಿರುಗಾಳಿ ಸಮೇತ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಕರಾವಳಿ ಪ್ರದೇಶಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಉಡುಪಿ ಜಿಲ್ಲೆಯ ಕಾಪು ಸಮೀಪದ ಮೂಳೂರಿನಲ್ಲಿ ಭಾರೀ ಗಾತ್ರದ ಅಲೆಗಳು ಸಮುದ್ರ ತೀರಕ್ಕೆ ಅಪ್ಪಳಿಸುತ್ತಿದ್ದು, ಕಡಲ ಕೊರೆತದ ಆತಂಕ ಆರಂಭವಾಗಿದೆ.

ಉಡುಪಿ, ಮಡಿಕೇರಿ, ಕಾರವಾರ, ಮಂಗಳೂರು, ಚಿಕ್ಕಮಗಳೂರು, ಕಲಬುರಗಿ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಮಲೆನಾಡಿನಲ್ಲಿ ಸತತ ಮಳೆಯಿಂದ ಶಿವಮೊಗ್ಗ ಜಿಲ್ಲೆಯ ತುಂಗಾ ಜಲಾಶಯ ಭರ್ತಿಯಾಗಿದೆ.








  • Blogger Comments
  • Facebook Comments

0 comments:

Post a comment

Item Reviewed: ರಾಜ್ಯ ಕರಾವಳಿ ಜಿಲ್ಲೆಗಳಲ್ಲಿ ಜೂ 23ರವರೆಗೆ ಭಾರಿ ಮಳೆ ಮುನ್ಸೂಚನೆ : ಎಲ್ಲೋ ಅಲರ್ಟ್ ಘೋಷಣೆ Rating: 5 Reviewed By: karavali Times
Scroll to Top