ರಾಜ್ಯದ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ - Karavali Times ರಾಜ್ಯದ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ - Karavali Times

728x90

17 June 2020

ರಾಜ್ಯದ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ



 ಜೂನ್ 25 ರಿಂದ ನಿಗದಿಯಾಗಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಅಬಾಧಿತ


ನವದೆಹಲಿ (ಕರಾವಳಿ ಟೈಮ್ಸ್) : ಕರ್ನಾಟಕದಲ್ಲಿ ಜೂನ್ 25ರಿಂದ ನಿಗದಿಯಾಗಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದುಗೊಳಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಈ ಮೂಲಕ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಬಂಧ ಎದುರಾಗಿದ್ದ ಕಾನೂನು ತೊಡಕು ನಿವಾರಣೆಯಾಗಿದೆ.

ಪರೀಕ್ಷೆ ರದ್ದುಪಡಿಸುವಂತೆ ಕೋರಿ ಬೆಳಗಾವಿಯ ರಾಜಶ್ರೀ ಎಂಬುವರು ಸಲ್ಲಿಸಿದ್ದ ವಿಶೇಷ ಮೇಲ್ಮನವಿಯನ್ನು ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್, ಕೃಷ್ಣ ಮುರಾರಿ ಹಾಗೂ ಎಸ್. ರವೀಂದ್ರ ಭಟ್ ಅವರಿದ್ದ ತ್ರಿಸದಸ್ಯ ಸುಪ್ರೀಂ ಕೋರ್ಟ್ ಪೀಠ ವಜಾ ಮಾಡಿದೆ.
  • Blogger Comments
  • Facebook Comments

0 comments:

Post a comment

Item Reviewed: ರಾಜ್ಯದ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ Rating: 5 Reviewed By: karavali Times
Scroll to Top