ಬಕ್ರೀದ್ : ಈದ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ ವಿಧಿಸಿದ ಸರಕಾರ - Karavali Times ಬಕ್ರೀದ್ : ಈದ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ ವಿಧಿಸಿದ ಸರಕಾರ - Karavali Times

728x90

25 July 2020

ಬಕ್ರೀದ್ : ಈದ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ ವಿಧಿಸಿದ ಸರಕಾರ



ಮಾರ್ಗಸೂಚಿಯಂತೆ ಮಸೀದಿಗಳಲ್ಲಿ ಮಾತ್ರ ನಮಾಝ್ ಗೆ ಅವಕಾಶ


ಬೆಂಗಳೂರು (ಕರಾವಳಿ ಟೈಮ್ಸ್) : ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಕ್ರೀದ್ ಹಬ್ಬದ ದಿನ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಸರ್ಕಾರ ಬ್ರೇಕ್ ಹಾಕಿದೆ.
ಮುಸ್ಲಿಂ ಬಾಂಧವರ ಎರಡನೇ ಪ್ರಮುಖ ಹಬ್ಬವಾದ ಬಕ್ರೀದ್ ರಾಜ್ಯದಲ್ಲಿ ಆಗಸ್ಟ್ 1 ರಂದು ಆಚರಿಸಲಾಗುತ್ತಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ಕೊಡಗು ಜಿಲ್ಲೆಯಲ್ಲಿ ಜುಲೈ 31 ರಂದು ಆಚರಿಸಲಾಗುತ್ತಿದೆ.

ಬಕ್ರೀದ್ ಹಬ್ಬದ ದಿನ ಸಾಮಾನ್ಯವಾಗಿ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಸಂಪ್ರದಾಯ ಇದೆ. ಆದರೆ ಕೊರೋನಾ ಹಿನ್ನೆಲೆಯಲ್ಲಿ ಈದ್ಗಾ ಅಥವಾ ಬಯಲು ಪ್ರದೇಶದಲ್ಲಿ ಸಾಮೂಹಿಕ ಪ್ರಾರ್ಥನೆ ಆಯೋಜನೆ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮಸೀದಿಗಳಲ್ಲಿ ಬ್ಯಾಚ್ ಪ್ರಕಾರ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಿದ್ದು, ಗರಿಷ್ಠ 50 ಮಂದಿ ಮಾತ್ರ ಪ್ರಾರ್ಥನೆ ಸಲ್ಲಿಸಬಹುದು.

ಪ್ರಾರ್ಥನಾ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ನಮಾಜ್ ಸಲ್ಲಿಸುವವರ ಮಧ್ಯೆ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳಬೇಕು. 60 ವರ್ಷ ಮೇಲ್ಪಟ್ಟ ವ್ಯಕ್ತಿಗಳು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿ ಪ್ರಾರ್ಥನೆ ಮಾಡಬೇಕು ಎಂದು ಸರ್ಕಾರ ಸೂಚನೆ ನೀಡಿದೆ.








  • Blogger Comments
  • Facebook Comments

0 comments:

Post a Comment

Item Reviewed: ಬಕ್ರೀದ್ : ಈದ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ ವಿಧಿಸಿದ ಸರಕಾರ Rating: 5 Reviewed By: karavali Times
Scroll to Top