ಬಸ್ತಿಪಡ್ಪು : ಪೀಠೋಪಕರಣ ಮಳಿಗೆಯಲ್ಲಿ ಬೆಂಕಿ ಅವಘಡ - Karavali Times ಬಸ್ತಿಪಡ್ಪು : ಪೀಠೋಪಕರಣ ಮಳಿಗೆಯಲ್ಲಿ ಬೆಂಕಿ ಅವಘಡ - Karavali Times

728x90

13 July 2020

ಬಸ್ತಿಪಡ್ಪು : ಪೀಠೋಪಕರಣ ಮಳಿಗೆಯಲ್ಲಿ ಬೆಂಕಿ ಅವಘಡಬಂಟ್ವಾಳ (ಕರಾವಳಿ ಟೈಮ್ಸ್) : ಇಲ್ಲಿನ ಬಸ್ತಿಪಡ್ಪು ಬಳಿಯ ಪೀಠೋಪಕರಣ ಮಳಿಗೆಗೆ ಸೋಮವಾರ ಮುಂಜಾನೆ ಬೆಂಕಿ ಹೊತ್ತಿಕೊಂಡ ಪರಿಣಾಮ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದ್ದು ಪೀಠೋಪಕರಣ ತಯಾರಿಗಾಗಿ ತಂದು ಹಾಕಲಾಗಿದ್ದ ಮರಗಳು ಹಾಗೂ ಕೆಲವು ತಯಾರು ಮಾಡಿಟ್ಟಿದ್ದ ಪೀಠೋಪಕರಣಗಳಿಗೂ ಬೆಂಕಿ ವ್ಯಾಪಿಸಿದೆ. ಸ್ಥಳಕ್ಕೆ ಬಂಟ್ವಾಳ ಅಗ್ನಿ ಶಾಮಕ ಸಿಬ್ಬಂದಿಗಳು ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರಾದರೂ ಅದಾಗಲೇ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
  • Blogger Comments
  • Facebook Comments

0 comments:

Post a Comment

Item Reviewed: ಬಸ್ತಿಪಡ್ಪು : ಪೀಠೋಪಕರಣ ಮಳಿಗೆಯಲ್ಲಿ ಬೆಂಕಿ ಅವಘಡ Rating: 5 Reviewed By: karavali Times
Scroll to Top