ವಿವಿಧ ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕ : ರಾಜ್ಯ ಸರಕಾರ ಆದೇಶ - Karavali Times ವಿವಿಧ ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕ : ರಾಜ್ಯ ಸರಕಾರ ಆದೇಶ - Karavali Times

728x90

27 July 2020

ವಿವಿಧ ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕ : ರಾಜ್ಯ ಸರಕಾರ ಆದೇಶ




ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಹೊಣೆ


ದಕ್ಷಿಣ ಕನ್ನಡದ ಏಳು ಮಂದಿ ಶಾಸಕರೂ ಅವಕಾಶ ವಂಚಿತರು 


ಬೆಂಗಳೂರು (ಕರಾವಳಿ ಟೈಮ್ಸ್) : ರಾಜ್ಯದ ವಿವಿಧ ನಿಗಮ ಮಂಡಳಿಗಳಿಗೆ 24 ಶಾಸಕರುಗಳನ್ನು ನೇಮಕ ಮಾಡಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ. 

ಉಡುಪಿ ಜಿಲ್ಲೆಯ ಕಾಪು ಕ್ಷೇತ್ರದ ಶಾಸಕ ಲಾಲಾಜಿ ಆರ್. ಮೆಂಡನ್ ಅವರನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ, ಶಿವಮೊಗ್ಗದ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಅರಗ ಜ್ಞಾನೇಂದ್ರ ಅವರನ್ನು ಕರ್ನಾಟಕ ಗೃಹ ಮಂಡಳಿಗೆ, ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರು ವಿಭಾಗಕ್ಕೆ ಚಿತ್ರದುರ್ಗದ ಹೊಳಲ್ಕೆರೆ ಶಾಸಕ ಎಂ ಚಂದ್ರಪ್ಪ ಅವರನ್ನು ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಸಂಸ್ಥೆಗೆ ಯಾದಗಿರಿ ಶೋರಾಪುರ ಶಾಸಕ ನರಸಿಂಹ ನಾಯಕ್ (ರಾಜುಗೌಡ) ಅವರನ್ನು ನೇಮಕ ಮಾಡಲಾಗಿದೆ.

ಉಳಿದಂತೆ ಹೊಸದಾಗಿ ನೇಮಕ ಮಾಡಲಾಗಿರುವ ನಿಗಮ-ಮಂಡಳಿಗಳ ನೇಮಕ ವಿವರ ಇಲ್ಲಿದೆ : 


1 . ಅರಗ ಜ್ಞಾನೇಂದ್ರ (ತೀರ್ಥಹಳ್ಳಿ) ಕರ್ನಾಟಕ ಗೃಹಮಂಡಳಿ

2. ಎಂ. ಚಂದ್ರಪ್ಪ (ಹೊಳಲ್ಕೆರೆ) ರಾಜ್ಯ ರಸ್ತೆ ಸಾರಿಗೆ ಸಂಸ್ಥೆ

3. ರಾಜುಗೌಡ (ಸುರಪುರ) ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ

4. ಎಂ.ಪಿ. ಕುಮಾರಸ್ವಾಮಿ (ಮೂಡಿಗೆರೆ) ಕರ್ನಾಟಕ ಮಾರುಕಟ್ಟೆ ಕನ್ಸಲ್ಟೆಂಟ್ ಮತ್ತು ಏಜೆನ್ಸಿಸ್ ಲಿಮಿಟೆಡ್

5. ಎ.ಎಸ್. ಪಾಟೀಲ್ ನಡಹಳ್ಳಿ (ಮುದ್ದೆ ಬಿಹಾಳ) ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು £ಗಮ

6. ಎಚ್. ಹಾಲಪ್ಪ (ಸಾಗರ) ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್

7. ಮಾಡಾಳ್ ವಿರೂಪಾಕ್ಷಪ್ಪ (ಚನ್ನಗಿರಿ) ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ

8. ತಿಪ್ಪಾರೆಡ್ಡಿ (ಚಿತ್ರದುರ್ಗ) ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ

9. ಶಿವನಗೌಡ ನಾಯಕ್ (ದೇವದುರ್ಗ) ರಸ್ತೆ ಅಭಿವೃದ್ಧಿ ನಿಗಮ ನಿಯಮಿತ

10. ಕಳಕಪ್ಪ ಬಂಡಿ (ರೋಣ) ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ

11. ಪರಣ್ಣ ಮುನವಳ್ಳಿ (ಗಂಗಾವತಿ) ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ

12. ಸಿದ್ದು ಸವದಿ (ತೇರದಾಳ) ಕರ್ನಾಟಕ ಕೈಮಗ್ಗ, ಅಭಿವೃದ್ಧಿ ನಿಗಮ ನಿಯಮಿತ

13. ಪ್ರೀತಮ್ ಜಿ ಗೌಡ (ಹಾಸನ) ಅರಣ್ಯ, ವಸತಿ ಮತ್ತು ವಿಹಾರ ಧಾಮಗಳ ಸಂಸ್ಥೆ

14. ರಾಜ್‍ಕುಮಾರ್ ಪಾಟೀಲ್ ತೇಲ್ಕೂರ್ (ಸೇಡಂ) ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ, ಕಲಬುರಗಿ

15. ದತ್ತಾತ್ರೇಯ ಪಾಟೀಲ್ ರೇವೂರ (ಗುಲ್ಬರ್ಗ ದಕ್ಷಿಣ) ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ, ಕಲಬುರಗಿ

16. ಶಂಕರ್ ಪಾಟೀಲ್ ಮುನೇನಕೊಪ್ಪ (ನವಲಗುಂದ) ಕರ್ನಾಟಕ ನಗರ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ.

17. ಎಚ್. ನಾಗೇಶ್ (ತಿಪಟೂರು) ಕರ್ನಾಟಕ ತೆಂಗಿನ ನಾರಿನ ಅಭಿವೃದ್ಧಿ ನಿಗಮ

18. ಎಸ್.ವಿ. ರಾಮಚಂದ್ರ (ಜಗಳೂರು) ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ

19. ನೆಹರೂ ಓಲೇಕಾರ್ (ಹಾವೇರಿ) ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ

20. ಐಹೊಳೆ ದುರ್ಯೋಧನ (ರಾಯಭಾಗ) ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ

21. ಲಾಲಾಜಿ ಆರ್. ಮೆಂಡನ್ (ಕಾಪು) ರಾಜ್ಯ ಹಿಂದುಳಿದ ವರ್ಗಗಳ ಆಯೋಗ

22. ಬಸವರಾಜ ದಡೇಸೂರ್ (ಕನಕಗಿರಿ) ರಾಜ್ಯ ಸಮಾಜ ಕಲ್ಯಾಣ ಅಭಿವೃದ್ಧಿ ಮಂಡಳಿ

23. ಡಾ. ಎಸ್. ಶಿವರಾಜ್ ಪಾಟೀಲ್ (ರಾಯಚೂರು) ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ

24. ಸಿ.ಎಸ್. ನಿರಂಜನ್ ಕುಮಾರ್ (ಗುಂಡ್ಲುಪೇಟೆ) ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ








  • Blogger Comments
  • Facebook Comments

0 comments:

Post a Comment

Item Reviewed: ವಿವಿಧ ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕ : ರಾಜ್ಯ ಸರಕಾರ ಆದೇಶ Rating: 5 Reviewed By: karavali Times
Scroll to Top