ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಎಚ್ಚರಿಕೆ - Karavali Times ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಎಚ್ಚರಿಕೆ - Karavali Times

728x90

2 July 2020

ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಎಚ್ಚರಿಕೆ



ಬೆಂಗಳೂರು (ಕರಾವಳಿ ಟೈಮ್ಸ್) : ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜುಲೈ 2, 4 ಮತ್ತು 5 ರಂದು ಭಾರೀ ಮಳೆಯಾಗುವ ಎಚ್ಚರಿಕೆ ನೀಡಿರುವ ಭಾರತೀಯ ಹವಾಮಾನ ಇಲಾಖೆ  ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಭಾರತೀಯ ಹವಾಮಾನ ಇಲಾಖೆ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್ ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ನಾಳೆ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗುವುದು ಎಂದಿದ್ದಾರೆ. ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಸಾಧಾರಾಣ ಮಳೆಯಾಗುವ ಸಾಧ್ಯತೆ ಇರುವುದಾಗಿಯೂ ಅವರು ತಿಳಿಸಿದ್ದಾರೆ.









  • Blogger Comments
  • Facebook Comments

0 comments:

Post a Comment

Item Reviewed: ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಎಚ್ಚರಿಕೆ Rating: 5 Reviewed By: karavali Times
Scroll to Top