ಕೊರೋನಾ ವಾರಿಯರ್ಸ್ ಎಂದು ಕರೆದರೆ ಸಾಲದು, ಬೇಡಿಕೆ ಈಡೇರಿಸಿ : ಜನವಾದಿ ಮಹಿಳಾ ಸಂಘಟನೆ ಆಗ್ರಹ - Karavali Times ಕೊರೋನಾ ವಾರಿಯರ್ಸ್ ಎಂದು ಕರೆದರೆ ಸಾಲದು, ಬೇಡಿಕೆ ಈಡೇರಿಸಿ : ಜನವಾದಿ ಮಹಿಳಾ ಸಂಘಟನೆ ಆಗ್ರಹ - Karavali Times

728x90

28 July 2020

ಕೊರೋನಾ ವಾರಿಯರ್ಸ್ ಎಂದು ಕರೆದರೆ ಸಾಲದು, ಬೇಡಿಕೆ ಈಡೇರಿಸಿ : ಜನವಾದಿ ಮಹಿಳಾ ಸಂಘಟನೆ ಆಗ್ರಹ



ಮಂಗಳೂರು (ಕರಾವಳಿ ಟೈಮ್ಸ್) : ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಿ, ಖಾಸಗೀ ಆಸ್ಪತ್ರೆಗಳನ್ನು ನಿಯಂತ್ರಿಸಿ, ಕೋವಿಡೇತರ ಆರೋಗ್ಯ ಸಮಸ್ಯೆಗಳಿಗೆ ಸೂಕ್ತ ಪರ್ಯಾಯ ವ್ಯವಸ್ಥೆ ಕಲ್ಪಿಸಿ, ಹೆರಿಗೆ ಸಂಬಂಧಿತ ಸಮಸ್ಯೆಗಳಿಗೆ ಪ್ರತ್ಯೇಕ ಆಂಬುಲೆನ್ಸ್ ಒದಗಿಸಿ, ಗರ್ಭಿಣಿ-ಬಾಣಂತಿಯರು ಹಾಗೂ ಮಕ್ಕಳ ಪಾಲನೆಗೆ ಅಗತ್ಯವಾದ ಮಾತೃಶ್ರೀ ಯೋಜನೆಯನ್ನು ಮುಂದುವರಿಸಿ, ಪೌಷ್ಠಿಕ ಆಹಾರ ಪದಾರ್ಥಗಳನ್ನು ಕೇರಳ ಮಾದರಿಯಲ್ಲಿ ವಿತರಿಸಿ ಇವೇ ಮೊದಲಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ (ಜೆಎಂಎಸ್) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮಂಗಳವಾರ ಮಂಗಳೂರು ಮಿನಿವಿಧಾನ ಸೌಧದ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಜೆಎಂಎಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷೆ ಜಯಂತಿ ಬಿ ಶೆಟ್ಟಿ, ರಾಜ್ಯ ಹಾಗೂ ಕೇಂದ್ರ ಸರಕಾರಗಳು ಈ ಸಂಧಿಗ್ದ ಸ್ಥಿತಿಯಲ್ಲಿ ಮಹಿಳೆಯರನ್ನು ವಿಶೇಷವಾಗಿ ಪರಿಗಣಿಸಿದ್ದೇ ಇಲ್ಲ ಎಂದು ಆರೋಪಿಸಿದರಲ್ಲದೆ ಮೇಲಿನ ಎಲ್ಲಾ ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕು ಎಂದು ಆಗ್ರಹಿಸಿದರು. 

ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‍ಎಫ್‍ಐ) ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಮಾಧುರಿ ಬೋಳಾರ್ ಮಾತನಾಡಿ, ಆಶಾ ಕಾತರ್ಯಕರ್ತರನ್ನು, ವೈದ್ಯರನ್ನು, ಪೆÇಲೀಸ್ ಸಿಬ್ಬಂದಿಗಳನ್ನು ಕೊರೊನಾ ವಾರಿಯರ್ಸ್ ಎಂದು ಕರೆಯುವ ಸರಕಾರ ಈ ಎಲ್ಲ ಯೋಧರಿಗೆ ವೇತನವನ್ನೇ ಸರಿಯಾದ ಸಮಯದಲ್ಲಿ ನೀಡುತ್ತಿಲ್ಲ ಎಂದು ಆರೋಪಿಸಿದರಲ್ಲದೆ ಈ ಸಂಕಷ್ಟದ ಸಂದರ್ಭದಲ್ಲಿ ಅತಿಥಿ ಶಿಕ್ಷಕರು ಮತ್ತು ಮನೆ ಕೆಲಸಗಾರರ ಕಷ್ಟವನ್ನು ಪರಿಗಣಿಸಿ ಸರಕಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. 

ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಭಾರತಿ ಬೋಳಾರ್, ಜಿಲ್ಲಾ ಮುಖಂಡರಾದ ವಿಲಾಸಿನಿ, ಲೋಲಾಕ್ಷಿ ಬಂಟ್ವಾಳ, ಭವ್ಯ ಕುಪ್ಪೆಪದವು, ರೋಹಿಣಿ ಜಲ್ಲಿಗುಡ್ಡೆ, ಪ್ರತಿಭಾ ಮೊದಲಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. 








  • Blogger Comments
  • Facebook Comments

0 comments:

Post a Comment

Item Reviewed: ಕೊರೋನಾ ವಾರಿಯರ್ಸ್ ಎಂದು ಕರೆದರೆ ಸಾಲದು, ಬೇಡಿಕೆ ಈಡೇರಿಸಿ : ಜನವಾದಿ ಮಹಿಳಾ ಸಂಘಟನೆ ಆಗ್ರಹ Rating: 5 Reviewed By: karavali Times
Scroll to Top