ಅಹ್ಮದಾಬಾದ್ ಆಸ್ಪತ್ರೆಯಲ್ಲಿ‌ ಭಾರೀ ಅಗ್ನಿ ಅವಘಡ : 8 ಮಂದಿ‌ ರೋಗಿಗಳ ಸಜೀವ ದಹನ - Karavali Times ಅಹ್ಮದಾಬಾದ್ ಆಸ್ಪತ್ರೆಯಲ್ಲಿ‌ ಭಾರೀ ಅಗ್ನಿ ಅವಘಡ : 8 ಮಂದಿ‌ ರೋಗಿಗಳ ಸಜೀವ ದಹನ - Karavali Times

728x90

6 August 2020

ಅಹ್ಮದಾಬಾದ್ ಆಸ್ಪತ್ರೆಯಲ್ಲಿ‌ ಭಾರೀ ಅಗ್ನಿ ಅವಘಡ : 8 ಮಂದಿ‌ ರೋಗಿಗಳ ಸಜೀವ ದಹನಅಹಮದಾಬಾದ್ (ಕರಾವಳಿ‌ ಟೈಮ್ಸ್) : ಗುಜರಾತ್ ರಾಜ್ಯದ ಅಹಮದಾಬಾದ್ ನಗರದ  ನವರಂಗಪುರದಲ್ಲಿರುವ ಶ್ರೇಯ್ ಕೋವಿಡ್ ಆಸ್ಪತ್ರೆಯಲ್ಲಿ ಬುಧವಾರ ತಡ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 8 ಮಂದಿ ರೋಗಿಗಳು ಸಜೀವ ದಹನವಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

 ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಘಟನೆ ಬಳಿಕ ಆಸ್ಪತ್ರೆಯಲ್ಲಿದ್ದ 35 ಮಂದಿ ರೋಗಿಗಳನ್ನು ಸ್ಥಳಾಂತರಿಸುವಲ್ಲಿ ಆಡಳಿತ ಮಂಡಳಿ ಯಶಸ್ವಿಯಾಗಿದೆ. 
ಆಸ್ಪತ್ರೆಯ ಇಂಟೆನ್ಸಿವ್ ಕೇರ್ ಯುನಿಟ್ (ಐಸಿಯು)ವಿನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಮಗಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದರು. ಅದಾಗ್ಯೂ 8 ಮಂದಿ ರೋಗಿಗಳು ಸಜೀವ ದಹನಗೊಂಡಿದ್ದಾರೆ. 

ಕೆಲ ದಿನಗಳ ಹಿಂದಷ್ಟೇ ಶ್ರೇಯ್ ಆಸ್ಪತ್ರೆಯನ್ನು ಕೋವಿಡ್ 19 ಚಿಕಿತ್ಸಾ ಕೇಂದ್ರವಾಗಿ ಮಾರ್ಪಡಿಸಲಾಗಿತ್ತು, ಅಗ್ನಿ ದುರಂತಕ್ಕೆ ನಿಖರ ಕಾರಣಗಳು ತಿಳಿದುಬಂದಿಲ್ಲ, ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಈ‌ ಮಧ್ಯೆ ದುರಂತದ ಬಗ್ಗೆ ಗುಜರಾತ್ ಸಿಎಂ 
 ವಿಜಯ್ ರುಪಾನಿ ತನಿಖೆಗೆ ಆದೇಶ ನೀಡಿದ್ದಾರೆ. ರಾಜ್ಯ ಗೃಹ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಸಂಗೀತಾ ಸಿಂಗ್ ಅವರು ತನಿಖೆಯ ನೇತೃತ್ವ ವಹಿಸಲಿದ್ದು, ಮೂರು ದಿನಗಳೊಳಗಾಗಿ ವರದಿ ಸಲ್ಲಿಸುವಂತೆ ಸಿಎಂ‌ ಸೂಚಿಸಿದ್ದಾರೆ.

ಮೃತರ ಕುಟುಂಬಕ್ಕೆ ಗುಜರಾತ್ ಸಿಎಂ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ 4 ಲಕ್ಷ ಹಾಗೂ ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಸಿಎಂ ವಿಜಯ್ ರುಪಾನಿ ಹೇಳಿದ್ದಾರೆ. 


  • Blogger Comments
  • Facebook Comments

0 comments:

Post a Comment

Item Reviewed: ಅಹ್ಮದಾಬಾದ್ ಆಸ್ಪತ್ರೆಯಲ್ಲಿ‌ ಭಾರೀ ಅಗ್ನಿ ಅವಘಡ : 8 ಮಂದಿ‌ ರೋಗಿಗಳ ಸಜೀವ ದಹನ Rating: 5 Reviewed By: karavali Times
Scroll to Top