ಬಂಟ್ವಾಳ ತಾಲೂಕು ಮಟ್ಟದ ಶ್ರೀ ಕೃಷ್ಣ ಜಯಂತಿ ಆಚರಣೆ - Karavali Times ಬಂಟ್ವಾಳ ತಾಲೂಕು ಮಟ್ಟದ ಶ್ರೀ ಕೃಷ್ಣ ಜಯಂತಿ ಆಚರಣೆ - Karavali Times

728x90

11 August 2020

ಬಂಟ್ವಾಳ ತಾಲೂಕು ಮಟ್ಟದ ಶ್ರೀ ಕೃಷ್ಣ ಜಯಂತಿ ಆಚರಣೆ



 

ಬಂಟ್ವಾಳ (ಕರಾವಳಿ ಟೈಮ್ಸ್) : ಜಗತ್ತಿಗೇ ಅತ್ಯಮೂಲ್ಯವಾದ ಭಗವದ್ಗೀತೆಯನ್ನು ಬೋಧಿಸಿದ ಶ್ರೀ ಕೃಷ್ಣ ಜಗದ್ಗುರುವಾಗಿದ್ದಾನೆ. ಭಾರತೀಯರಾದ ನಾವೆಲ್ಲರೂ ಗೀತೆಯ ಸಾರವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕೇಂದ್ರ ಸ್ಥಾನೀಯ ಶಿರಸ್ತೇದಾರ್ ರಾಧಾಕೃಷ್ಣ ಹೇಳಿದರು.

ಬಿ.ಸಿ.ರೋಡಿನ ಮಿನಿ ವಿಧಾನಸೌಧ ಸಭಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಮಂಗಳವಾರ ನಡೆದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿರಸ್ತೇದಾರ್ ರಾಜೇಶ್ ನಾಯ್ಕ್ ಮಾತನಾಡಿ, ಶ್ರೀ ಕೃಷ್ಣ ಚಿಕ್ಕವರಿಂದ ಹಿಡಿದು ದೊಡ್ಡವರವರೆಗೆ ಎಲ್ಲರೂ ಇಷ್ಟಪಡುವಂತಹ ವ್ಯಕ್ತಿತ್ವವನ್ನು ಹೊಂದಿರುವವನು. ಧರ್ಮಕ್ಕೆ ಜಯ ದೊರಕುತ್ತಿದೆ ಎಂದು ತೋರಿಸಿದ ಇವನ ಜೀವನ ಎಲ್ಲರಿಗೂ ಆದರ್ಶವಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್, ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಭಾಗವಹಿಸಿದ್ದರು. ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಸ್ವಾಗತಿಸಿ, ಪಾಣೆಮಂಗಳೂರು ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು.








  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ತಾಲೂಕು ಮಟ್ಟದ ಶ್ರೀ ಕೃಷ್ಣ ಜಯಂತಿ ಆಚರಣೆ Rating: 5 Reviewed By: karavali Times
Scroll to Top