ಜಾಲತಾಣಗಳಲ್ಲಿ ರಾಜಕೀಯ ನಾಯಕರ ಕುರಿತು ಅವಹೇಳನಕಾರಿ ಹೇಳಿಕೆ ನೀಡದಿರಿ : ಕೈ ಕಾರ್ಯಕರ್ತರಿಗೆ ಡಿಕೆಶಿ ಮನವಿ - Karavali Times ಜಾಲತಾಣಗಳಲ್ಲಿ ರಾಜಕೀಯ ನಾಯಕರ ಕುರಿತು ಅವಹೇಳನಕಾರಿ ಹೇಳಿಕೆ ನೀಡದಿರಿ : ಕೈ ಕಾರ್ಯಕರ್ತರಿಗೆ ಡಿಕೆಶಿ ಮನವಿ - Karavali Times

728x90

3 August 2020

ಜಾಲತಾಣಗಳಲ್ಲಿ ರಾಜಕೀಯ ನಾಯಕರ ಕುರಿತು ಅವಹೇಳನಕಾರಿ ಹೇಳಿಕೆ ನೀಡದಿರಿ : ಕೈ ಕಾರ್ಯಕರ್ತರಿಗೆ ಡಿಕೆಶಿ ಮನವಿಬೆಂಗಳೂರು (ಕರಾವಳಿ‌ ಟೈಮ್ಸ್) : ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ನಾಯಕರ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಂಗಳವಾರ ಮನವಿ ಮಾಡಿಕೊಂಡಿದ್ದಾರೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಜಕೀಯ ನಾಯಕರ ಆರೋಗ್ಯ ಹಾಗೂ ಇತರೆ ವಿಚಾರಗಳ ಕುರಿತು ಸಾಮಾಜಿಕ ಜಾಲತಾಣದಂತಹ ವೇದಿಕೆಗಳಲ್ಲಿ ಅವಹೇಳನಕಾರಿ ಹೇಳಿಕೆ ನೀಡದಿರಿ. ಇತರರಿಗೆ ಕೆಟ್ಟದ್ದು ಬಯಸುವ ಸಂಸ್ಕೃತಿ ನಮ್ಮದಲ್ಲ. ನಮ್ಮ ಪಕ್ಷ ಸಹೋದರತ್ವ ಹಾಗೂ ಮಾನವೀಯತೆಗೆ ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ. 

ಇದೇ ವೇಳೆ ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಲ್ಲೂ ಕೊರೋನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಶೀಘ್ರಗತಿಯಲ್ಲಿ ಗುಣಮುಖರಾಗಲೆಂದು ಡಿಕೆಶಿ ಹಾರೈಸಿದ್ದಾರೆ. 
  • Blogger Comments
  • Facebook Comments

0 comments:

Post a Comment

Item Reviewed: ಜಾಲತಾಣಗಳಲ್ಲಿ ರಾಜಕೀಯ ನಾಯಕರ ಕುರಿತು ಅವಹೇಳನಕಾರಿ ಹೇಳಿಕೆ ನೀಡದಿರಿ : ಕೈ ಕಾರ್ಯಕರ್ತರಿಗೆ ಡಿಕೆಶಿ ಮನವಿ Rating: 5 Reviewed By: karavali Times
Scroll to Top