ಗಣೇಶೋತ್ಸವ ಆಚರಣೆಗೆ ಅಡ್ಡಿಯಾಗಿದ್ದ ಮಾರ್ಗಸೂಚಿ ಪರಿಷ್ಕರಣೆ : ಸಿಎಂ ಯಡಿಯೂರಪ್ಪ - Karavali Times ಗಣೇಶೋತ್ಸವ ಆಚರಣೆಗೆ ಅಡ್ಡಿಯಾಗಿದ್ದ ಮಾರ್ಗಸೂಚಿ ಪರಿಷ್ಕರಣೆ : ಸಿಎಂ ಯಡಿಯೂರಪ್ಪ - Karavali Times

728x90

18 August 2020

ಗಣೇಶೋತ್ಸವ ಆಚರಣೆಗೆ ಅಡ್ಡಿಯಾಗಿದ್ದ ಮಾರ್ಗಸೂಚಿ ಪರಿಷ್ಕರಣೆ : ಸಿಎಂ ಯಡಿಯೂರಪ್ಪ


ಬೆಂಗಳೂರು (ಕರಾವಳಿ ಟೈಮ್ಸ್) : ಗಣೇಶೋತ್ಸವ ಆಚರಣೆಗೆ ಅಡ್ಡಿಯಾಗಿದ್ದ ಮಾರ್ಗಸೂಚಿ ಪರಿಷ್ಕರಣೆ ಮಾಡಲಾಗಿದ್ದು, ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಕೊರೋನಾ ಹಿನ್ನೆಲೆಯಲ್ಲಿ ಗಣೇಶೋತ್ಸವ ಆಚರಣೆಗೆ ಅಡ್ಡಿಯುಂಟಾಗಲಿದೆ ಎಂದು ಸಾರ್ವಜನಿಕರಿಂದ ವ್ಯಕ್ತವಾದ ಆಕ್ಷೇಪಗಳ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮಾರ್ಗಸೂಚಿಗಳನ್ನು ಪರಿಷ್ಕರಿಸಿದೆ. ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಪೂಜೆ ಪುನಸ್ಕಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟರ್ ಮಾಡ ಮಾಹಿತಿ ಹಂಚಿಕೊಂಡಿರುವ ಸಿಎಂ, ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರಕಾರ ಮಾರ್ಗಸೂಚಿಗಳನ್ನು ರೂಪಿಸಿದೆ. ಕೊರೋನಾ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿಯಾಗಿ ಗಣೇಶೋತ್ಸವ ಆಚರಿಸಲು ಮತ್ತೊಮ್ಮೆ ವಿನಯ ಪೂರ್ವಕ ಮನವಿ ಮಾಡುತ್ತಿದ್ದೇನೆಂದು ಅವರು ತಿಳಿಸಿದ್ದಾರೆ.

ಪರಿಷ್ಕೃತ ಮಾರ್ಗಸೂಚಿಯಲ್ಲಿ 7 ಷರತ್ತುಗಳ ವಿಧಿಸಿ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಅನುವು ಮಾಡಿಕೊಡಲಾಗಿದೆ. 

ಗಣೇಶ ಚತುರ್ಥಿಯನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ತಮ್ಮ ಮನೆಗಳಲ್ಲಿ/ ಸರಕಾರಿ/ ಖಾಸಗಿ /ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಟ ಸಂಖ್ಯೆಯಲ್ಲಿ ಆಚರಿಸಬಹುದು., ಸಾರ್ವಜನಿಕ ಸ್ಥಳದಲ್ಲಿ ಕನಿಷ್ಟ 4 ಅಡಿಗೆ ಮೀರದಂತೆ ಹಾಗೂ ಮನೆಗಳಲ್ಲಿ 2 ಅಡಿಗೆ ಮೀರದಂತೆ ಮೂರ್ತಿಯನ್ನು ಪ್ರತಿಷ್ಠಾಪಿಸುವುದು., ಪಾರಂಪರಿಕ ಗಣೇಶೋತ್ಸವ, ಸಮಿತಿಗಳು, ಮಂಡಳಿಗಳು ಮೂರ್ತಿ ಪ್ರತಿಷ್ಠಾಪನೆಗೆ ಸ್ಥಳೀಯ ಆಡಳಿತ / ಕಾರ್ಪೊರೇಷನ್/ಮುನಿಸಿಪಲ್‍ಗಳಿಂದ ಪೂರ್ವಾನುಮತಿ ಪಡೆದು ಉತ್ಸವ ಆಚರಣೆಗೆ ಅವಕಾಶ ನೀಡಲಾಗಿದೆ. ಪ್ರತಿ ವಾರ್ಡ್‍ಗೆ, ಗ್ರಾಮಕ್ಕೆ ಒಂದರಂತೆ ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಉತ್ಸವ ಆಚರಿಸಬಹುದು., ಗಣೇಶೋತ್ಸವ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಮನೋರಂಜನೆ, ಸಾಂಸ್ಕೃತಿಕ ಕಾರ್ಯಕ್ರಮ, ಸಂಗೀತ, ನೃತ್ಯ ಕಾರ್ಯಕ್ರಮ ಆಯೋಜನೆಗೆ ನಿಷೇzಧ ಹೇರಲಾಗಿದೆ., ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ಸ್ಥಳದಲ್ಲಿ 20 ಜನಕ್ಕೆ ಸೀಮಿತವಾಗಿ ಆವರಣ ನಿರ್ಮಿಸುವುದು. 20ಕ್ಕಿಂತ ಹೆಚ್ಚಿನ ಭಕ್ತರು/ ಜನರು ಸೇರುವುದಕ್ಕೆ ಅವಕಾಶವಿಲ್ಲ., ಗಣೇಶ ಮೂರ್ತಿ ತುರುವಾಗ ಹಾಗೂ ವಿಸರ್ಜನೆ ವೇಳೆ ಮೆರವಣಿಗೆ, ಡಿಜೆ ಸೇರಿದಂತೆ ಯಾವುದೇ ರೀತಿಯ ಆಡಂಬರ, ಗದ್ದಲಕ್ಕೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ.

ಮನೆಯಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿದವರು ಮನೆಯಲ್ಲೇ ಮೂರ್ತಿಯನ್ನು ವಿಸರ್ಜಿಸಿ. ಸಾರ್ವಜನಿಕವಾಗಿ ಪ್ರತಿಷ್ಠಾಪಿಸಿದವರು ಸಮೀಪದ ಮೊಬೈಲ್ ಟ್ಯಾಂಕರ್‍ಗಳು, ಕೃತಕ ವಿಸರ್ಜನಾ ಟ್ಯಾಂಕರ್‍ಗಳಲ್ಲಿ ಸ್ಥಳೀಯ ಸಂಸ್ಥೆಗಳು ನಿರ್ಮಿಸಿರುವ ಹೊಂಡಗಳಲ್ಲಿ ಮೂರ್ತಿ ವಿಸರ್ಜನೆ ಮಾಡಬಹುದು ಎಂದು ಮುಖ್ಯಮಂತ್ರಿ ಅವರು ಮಾರ್ಗಸೂಚಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






  • Blogger Comments
  • Facebook Comments

0 comments:

Post a Comment

Item Reviewed: ಗಣೇಶೋತ್ಸವ ಆಚರಣೆಗೆ ಅಡ್ಡಿಯಾಗಿದ್ದ ಮಾರ್ಗಸೂಚಿ ಪರಿಷ್ಕರಣೆ : ಸಿಎಂ ಯಡಿಯೂರಪ್ಪ Rating: 5 Reviewed By: karavali Times
Scroll to Top