ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೋವಿಡ್ ಪಾಸಿಟಿವ್ ವರದಿ - Karavali Times ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೋವಿಡ್ ಪಾಸಿಟಿವ್ ವರದಿ - Karavali Times

728x90

5 August 2020

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೋವಿಡ್ ಪಾಸಿಟಿವ್ ವರದಿ



ಮಂಗಳೂರು (ಕರಾವಳಿ ಟೈಮ್ಸ್) : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

 ಈ ಬಗ್ಗೆ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿರುವ ಶಾಸಕ ಪೂಂಜಾ, ಸಣ್ಣ ಮಟ್ಟಿನ ಜ್ವರ ಇದ್ದ ಕಾರಣ ಮಾಡಿಸಿದ ಕೋವಿಡ್-19 ಪರೀಕ್ಷೆಯಲ್ಲಿ ನನಗೆ ಕೊರೊನಾ ಪಾಸಿಟಿವ್ ಎಂದು ವರದಿ ಬಂದಿದೆ. ಸಣ್ಣ ಮಟ್ಟಿನ ಜ್ವರ ಹೊರತುಪಡಿಸಿ ಬೇರೆ ಯಾವುದೇ ಲಕ್ಷಣಗಳಿಲ್ಲದೆ ಇರುವುದರಿಂದ ಮನೆಯಲ್ಲಿಯೇ ಇದ್ದು ಶುಶ್ರೂಷೆ ಪಡೆಯುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್‍ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದಿದ್ದಾರೆ.

ಇತ್ತೀಚೆಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದ ಸಿಎಂ ಯಡಿಯೂರಪ್ಪ ಅವರ ಜೊತೆ ಹರೀಶ್ ಪೂಂಜಾ ಅವರು ಪ್ರಾಥಮಿಕ ಸಂಪರ್ಕದಲ್ಲಿದ್ದರು. ಬೆಂಗಳೂರಿಗೆ ಬಂದಿದ್ದ ಹರೀಶ್ ಪೂಂಜಾ ಸಿಎಂ ಅವರ ಜೊತೆಗೆ ಇದ್ದ ಕಾರಣ ಸಿಎಂಗೆ ಕೊರೊನಾ ಪಾಸಿಟಿವ್ ಬಂದ ನಂತರ ಶಾಸಕ ಹರೀಶ್ ಪೂಂಜಾ ಕ್ವಾರೆಂಟೈನ್ ಆಗಿದ್ದರು.






  • Blogger Comments
  • Facebook Comments

0 comments:

Post a Comment

Item Reviewed: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೋವಿಡ್ ಪಾಸಿಟಿವ್ ವರದಿ Rating: 5 Reviewed By: karavali Times
Scroll to Top