ಸೆ. 4 ರಂದು ಮಂಗಳೂರು ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್ - Karavali Times ಸೆ. 4 ರಂದು ಮಂಗಳೂರು ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್ - Karavali Times

728x90

26 August 2020

ಸೆ. 4 ರಂದು ಮಂಗಳೂರು ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್



ಮಂಗಳೂರು (ಕರಾವಳಿ ಟೈಮ್ಸ್) : ಮಂಗಳೂರು ಅಂಚೆ ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್ ಸೆಪ್ಟೆಂಬರ್ 4 ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ಅಂಚೆ ವಿಭಾಗದ ಬಲ್ಮಠದಲ್ಲಿರುವ ಹಿರಿಯ ಅಂಚೆ ಅಧೀಕ್ಷರ ಕಛೇರಿಯಲ್ಲಿ ನಡೆಯಲಿದೆ.

ಅದಾಲತ್ ನಲ್ಲಿ ಮಂಗಳೂರು ಅಂಚೆ ವಿಭಾಗಕ್ಕೆ ಸಂಬಂಧಿಸಿದ ಸಾರ್ವಜನಿಕರ ಎಲ್ಲಾ ಕುಂದು ಕೊರತೆಗಳನ್ನು, ತಕರಾರುಗಳನ್ನು ಪರಿಶೀಲಿಸಲಾಗುವುದು.

ಸಾರ್ವಜನಿಕರು ಸಂಬಂಧಪಟ್ಟ ದೂರುಗಳಿದ್ದಲ್ಲಿ ಪತ್ರ ಮೂಲಕ "ಅಂಚೆ ಅದಾಲತ್" ತಲೆ ಬರಹದಡಿ ಸೆ. 3 ರೊಳಗೆ "ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗ,  ಬಲ್ಮಠ, ಮಂಗಳೂರು - 575 002" ವಿಳಾಸಕ್ಕೆ ಅಂಚೆ ಮೂಲಕ ಅಥವಾ ವಾಟ್ಸಪ್ ಸಂಖ್ಯೆ 9448291072 ಗೆ ಕಳುಹಿಸಬಹುದು. ಮಂಗಳೂರು ಅಂಚೆ ವಿಭಾಗಕ್ಕೆ ಸೇರಿದ ದೂರುಗಳನ್ನು ಕಳುಹಿಸುವಂತೆ ಮಂಗಳೂರು ಹಿರಿಯ ಅಂಚೆ ಅಧೀಕ್ಷಕರ ಕಛೇರಿ ಪ್ರಕಟಣೆ ತಿಳಿಸಿದೆ.








  • Blogger Comments
  • Facebook Comments

0 comments:

Post a Comment

Item Reviewed: ಸೆ. 4 ರಂದು ಮಂಗಳೂರು ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್ Rating: 5 Reviewed By: karavali Times
Scroll to Top