ಮೆಡಿಕಲ್ ಕಿಟ್ ಭ್ರಷ್ಟಾಚಾರವನ್ನು ನ್ಯಾಯಾಂಗ ತನಿಖೆಗೆ ವಹಿಸದಿದ್ದಲ್ಲಿ ಬೀದಿಗಿಳಿದು ಹೋರಾಟ ರಮಾನಾಥ ರೈ ಎಚ್ಚರಿಕೆ - Karavali Times ಮೆಡಿಕಲ್ ಕಿಟ್ ಭ್ರಷ್ಟಾಚಾರವನ್ನು ನ್ಯಾಯಾಂಗ ತನಿಖೆಗೆ ವಹಿಸದಿದ್ದಲ್ಲಿ ಬೀದಿಗಿಳಿದು ಹೋರಾಟ ರಮಾನಾಥ ರೈ ಎಚ್ಚರಿಕೆ - Karavali Times

728x90

1 August 2020

ಮೆಡಿಕಲ್ ಕಿಟ್ ಭ್ರಷ್ಟಾಚಾರವನ್ನು ನ್ಯಾಯಾಂಗ ತನಿಖೆಗೆ ವಹಿಸದಿದ್ದಲ್ಲಿ ಬೀದಿಗಿಳಿದು ಹೋರಾಟ ರಮಾನಾಥ ರೈ ಎಚ್ಚರಿಕೆ


ಮಡಿಕೇರಿ ಪಕ್ಷದ ಕಛೇರಿಯಲ್ಲಿ ರೈ ಸುದ್ದಿಗೋಷ್ಠಿ


ಮಡಿಕೇರಿ (ಕರಾವಳಿ ಟೈಮ್ಸ್) :
ಮೆಡಿಕಲ್ ಕಿಟ್‍ಗಳ ಖರೀದಿಯಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ರಾಜ್ಯ ಸರಕಾರ ನ್ಯಾಯಾಂಗ ತನಿಖೆಗೆ ವಹಿಸಿದ್ದರೆ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಎಚರಿಸಿದ್ದಾರೆ.

    ಮಡಿಕೇರಿ ನಗರದ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸುವಂತೆ ವಿರೋಧ ಪಕ್ಷದವರು ಒತ್ತಾಯಿಸಿದರೂ ಸದನ ಸಮಿತಿಯಲ್ಲಿ ಸ್ಪೀಕರ್ ತನಿಖೆಗೆ ಅವಕಾಶ ಕೊಟ್ಟಿಲ್ಲ. ಈ ಹಿಂದೆ ಆಡಳಿತದಲ್ಲಿದ್ದ ಕಾಂಗ್ರೆಸ್ ಪಕ್ಷದ ವಿರುದ್ಧ ಆರೋಪಗಳು ಕೇಳಿ ಬಂದಾಗ ಕೇಂದ್ರದಲ್ಲಿ ಎನ್‍ಡಿಎ ಸರಕಾರ ಇದ್ದಾಗಲೂ ಕಾಂಗ್ರೆಸ್ 7 ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿತ್ತು. ಆಡಳಿತ ಸರಕಾರದ ಮೇಲೆ ಜನತೆಗೆ ಅಪ ನಂಬಿಕೆಗಳು ಬರಬಾರದು. ಆದ್ದರಿಂದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಿಂದ ನ್ಯಾಯಾಂಗ ತನಿಖೆಗೆ ವಹಿಸಬೇಕು. ಸತ್ಯ-ಅಸತ್ಯತೆಗಳು ರಾಜ್ಯದ ಜನತೆಗೆ ಗೊತ್ತಾಗಬೇಕು ಎಂದರು.    

    ಸರಕಾರ ಕೊರೊನಾ ಮತ್ತು ರೋಗಿಯ ಹೆಸರಲ್ಲಿ ಹಣ ಮಾಡುತ್ತಿದೆ. ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ದುಪ್ಪಟ್ಟು ಹಣ ಕೊಟ್ಟು ಉಪಕರಣಗಳನ್ನು ಖರೀಸಿದಿಸಲಾಗಿದೆ. ಇದರ ಬಗ್ಗೆ ಕಾಂಗ್ರೆಸ್ ಧ್ವನಿ ಎತ್ತಿದ ಬಳಿಕ ಮುಖ್ಯಮಂತ್ರಿ ಸಹಿತ ಮಂತ್ರಿಗಳು ವಿವಿಧ ದ್ವಂದ್ವ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ರಮಾನಾಥ ರೈ ಭ್ರಷ್ಟಾಚಾರದ ಬಗ್ಗೆ ಸುಪ್ರಿಂ ಕೋರ್ಟ್ ಛೀಮಾರಿ ಹಾಕಿದೆ ಎಂದರು.

    ಕೇಂದ್ರದಲ್ಲಿರುವುದು ಒಂದು ಮೊಂಡ ಹಾಗೂ ಭಂಡ ಸರ್ಕಾರ. ಅವರು ಅಧಿಕಾರಕ್ಕಾಗಿ ಏನನ್ನು ಬೇಕಾದರೂ ಮಾಡುತ್ತಾರೆ. ಇವರಿಗೆ ಜನತೆಯ ಹಿತ ಬೇಕಾಗಿಲ್ಲ. ಭಾವನಾತ್ಮಕವಾಗಿ ಜನರನ್ನು ಹಿಡಿದಿಟ್ಟುಕೊಳ್ಳುವ ತಂತ್ರಗಾರಿಕೆಯನ್ನು ಬಿಜೆಪಿ ಮಾಡುತ್ತಿದೆ ಎಂದು ರೈ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


  • Blogger Comments
  • Facebook Comments

0 comments:

Post a Comment

Item Reviewed: ಮೆಡಿಕಲ್ ಕಿಟ್ ಭ್ರಷ್ಟಾಚಾರವನ್ನು ನ್ಯಾಯಾಂಗ ತನಿಖೆಗೆ ವಹಿಸದಿದ್ದಲ್ಲಿ ಬೀದಿಗಿಳಿದು ಹೋರಾಟ ರಮಾನಾಥ ರೈ ಎಚ್ಚರಿಕೆ Rating: 5 Reviewed By: karavali Times
Scroll to Top