ಅಯೋಧ್ಯೆ ಶ್ರೀರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಮುಖ್ಯಸ್ಥರಿಗೆ ಕೊರೊನಾ ಪಾಸಿಟಿವ್ - Karavali Times ಅಯೋಧ್ಯೆ ಶ್ರೀರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಮುಖ್ಯಸ್ಥರಿಗೆ ಕೊರೊನಾ ಪಾಸಿಟಿವ್ - Karavali Times

728x90

13 August 2020

ಅಯೋಧ್ಯೆ ಶ್ರೀರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಮುಖ್ಯಸ್ಥರಿಗೆ ಕೊರೊನಾ ಪಾಸಿಟಿವ್


 ಭೂಮಿ ಪೂಜೆಯಲ್ಲಿ ಭಾಗಿಯಾದವರಿಗೆ ಆತಂಕ


ಲಕ್ನೋ (ಕರಾವಳಿ ಟೈಮ್ಸ್) : ಶ್ರೀರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಮುಖ್ಯಸ್ಥ ಮಹಾಂತ್ ನಿತ್ಯ ಗೋಪಾಲದಾಸ್ ಅವರಿಗೆ ಕೊರೊನಾ ಪಾಸಿಟಿವ್ ಧೃಢಪಟ್ಟಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಸ್ವತಃ ಯೋಗಿ ಆದಿತ್ಯನಾಥ್ ಈ ಮಾಹಿತಿಯನ್ನು ಖಚಿತಪಡಿಸಿದ್ದಾರೆ.

ಮಹಾಂತ್ ನಿತ್ಯ ಗೋಪಾಲದಾಸ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆರೋಗ್ಯ ಮೇಲ್ವಿಚಾರಣೆ ನೋಡಿಕೊಳ್ಳುವಂತೆ ಮಥುರಾ ಜಿಲ್ಲಾಧಿಕಾರಿಗಳಿಗೆ ಯೋಗಿ ಆದಿತ್ಯನಾಥ್ ಸೂಚನೆ ನೀಡಿದ್ದಾರೆ. ಅಲ್ಲದೇ ಮಹಾಂತ್ ನಿತ್ಯ ಗೋಪಾಲದಾಸ್ ಆರೋಗ್ಯ ಸಂಬಂಧಿಸಿದ ಎಲ್ಲ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ಮಹಾಂತ್ ಗೋಪಾಲದಾಸ್ ಅವರು ಅಗಸ್ಟ್ 5 ರಂದು ನಡೆದ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆಯಲ್ಲಿ ಭಾಗಿಯಾಗಿದ್ದರು. ಇದೇ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡಾ ಉಪಸ್ಥಿತರಿದ್ದರು. ಇದೀಗ ಕೊರೋನಾ ಪಾಸಿಟಿವ್ ಹಿನ್ನಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾದವರಿಗೆ ಆತಂಕ ಆರಂಭವಾಗಿದೆ. 






  • Blogger Comments
  • Facebook Comments

0 comments:

Post a Comment

Item Reviewed: ಅಯೋಧ್ಯೆ ಶ್ರೀರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಮುಖ್ಯಸ್ಥರಿಗೆ ಕೊರೊನಾ ಪಾಸಿಟಿವ್ Rating: 5 Reviewed By: karavali Times
Scroll to Top