ಐವನ್ ಡಿ’ಸೋಜಾಗೆ ಕೊರೋನಾ ಪಾಸಿಟಿವ್ ದೃಢಪಟ್ಟ ಬಳಿಕ ಸೆಲ್ಫ್ ಕ್ವಾರಂಟೈನ್ ಆದ ಶಾಸಕ ಖಾದರ್ - Karavali Times ಐವನ್ ಡಿ’ಸೋಜಾಗೆ ಕೊರೋನಾ ಪಾಸಿಟಿವ್ ದೃಢಪಟ್ಟ ಬಳಿಕ ಸೆಲ್ಫ್ ಕ್ವಾರಂಟೈನ್ ಆದ ಶಾಸಕ ಖಾದರ್ - Karavali Times

728x90

2 August 2020

ಐವನ್ ಡಿ’ಸೋಜಾಗೆ ಕೊರೋನಾ ಪಾಸಿಟಿವ್ ದೃಢಪಟ್ಟ ಬಳಿಕ ಸೆಲ್ಫ್ ಕ್ವಾರಂಟೈನ್ ಆದ ಶಾಸಕ ಖಾದರ್ಮಂಗಳೂರು (ಕರಾವಳಿ ಟೈಮ್ಸ) :
ವಿಧಾನ ಪರಿಷತ್ ಮಾಜಿ ಶಾಸಕ ಐವನ್ ಡಿ’ಸೋಜ ಅವರಿಗೆ ಕೊರೋನಾ ಸೋಂಕು ದೃಢಪಟ್ಟ ಬಳಿಕ ಶಾಸಕ ಯು.ಟಿ. ಖಾದರ್ ಸ್ವಯಂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿ ಸ್ಪಷ್ಟಪಡಿಸಿರುವ ಖಾದರ್, ‘ಮಾಜಿ ಶಾಸಕ ಐವನ್ ಡಿ’ಸೋಜ ಹಾಗೂ ಲಕ್ಷಾಂತರ ಮಂದಿ ಕೋವಿಡ್ ಸೋಂಕಿತರಾಗಿರಾಗಿದ್ದಾರೆ. ಇವರೆಲ್ಲರೂ ಶೀಘ್ರದಲ್ಲೇ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಕೆಲ ದಿನಗಳಿಂದ ಐವನ್ ಡಿ’ಸೋಜ ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಕಾರಣ ನಾನು ಕೆಲವು ದಿನಗಳ ಕಾಲ ಸ್ವಯಂ ನಿರ್ಬಂಧ ಹಾಕಿಕೊಂಡಿದ್ದೇನೆ’ ಎಂದು ಒಂದು ಟ್ವೀಟ್ ಮಾಡಿದ್ದಾರೆ.

    ಮತ್ತೊಂದು ಟ್ವೀಟ್ ಮಾಡಿರುವ ಶಾಸಕ ಖಾದರ್, ‘ಹೀಗಾಗಿ ಇಂದು ನಿಗದಿಯಾಗಿದ್ದ ಜನಸಾಮಾನ್ಯರ ಭೇಟಿ, ಕ್ಷೇತ್ರದ ಅಭಿವೃದ್ದಿ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆಗಿನ ಸಭೆ, ಕ್ಷೇತ್ರದಲ್ಲಿ ನಿಗದಿಯಾಗಿದ್ದ ವಿವಿಧ ಕಾರ್ಯಕ್ರಮಗಳು ಮುಂದೂಡಲ್ಪಟ್ಟಿದ್ದೆ. ಜನ ಸಾಮಾನ್ಯರ ಸೇವೆಗೆ ದೂರವಾಣಿ ಮೂಲಕ ಲಭ್ಯವಿದ್ದು, ಅಗತ್ಯವಿದ್ದಲ್ಲಿ ನೇರವಾಗಿ ದೂರವಾಣಿ ಮೂಲಕ ನನ್ನನ್ನು ಎಂದಿನಂತೆ ಸಂಪರ್ಕಿಸಬಹುದಾಗಿದೆ’ ಎಂದು ತಿಳಿಸಿದ್ದಾರೆ.

     ಇನ್ನೊಂದು ಟ್ವೀಟ್ ಮೂಲಕ ‘ಇದೇ ವೇಳೆ ಐವನ್ ಡಿಸೋಜ ಜೊತೆಗೆ ಪ್ರಾಥಮಿಕ ಸಂಪರ್ಕಿತದಲ್ಲಿದ್ದವರು ಕೆಮ್ಮು, ಜ್ವರ ಮುಂತಾದ ಲಕ್ಷಣ ಕಂಡು ಬಂದಲ್ಲಿ ತಕ್ಷಣ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡುತ್ತೇನೆ’ ಎಂದು ಕೇಳಿಕೊಂಡಿದ್ದಾರೆ.  • Blogger Comments
  • Facebook Comments

0 comments:

Post a Comment

Item Reviewed: ಐವನ್ ಡಿ’ಸೋಜಾಗೆ ಕೊರೋನಾ ಪಾಸಿಟಿವ್ ದೃಢಪಟ್ಟ ಬಳಿಕ ಸೆಲ್ಫ್ ಕ್ವಾರಂಟೈನ್ ಆದ ಶಾಸಕ ಖಾದರ್ Rating: 5 Reviewed By: karavali Times
Scroll to Top