ಸೂರಿಕುಮೇರು : ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರಿನ ಮೇಲೆ ಉರುಳಿದ ಮರ - Karavali Times ಸೂರಿಕುಮೇರು : ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರಿನ ಮೇಲೆ ಉರುಳಿದ ಮರ - Karavali Times

728x90

4 August 2020

ಸೂರಿಕುಮೇರು : ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರಿನ ಮೇಲೆ ಉರುಳಿದ ಮರ




ಬಂಟ್ವಾಳ (ಕರಾವಳಿ ಟೈಮ್ಸ್) : ತಾಲೂಕಿನ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ಮಂಗಳವಾರ ಸಂಜೆ ಹೆದ್ದಾರಿ ಬದಿಯ ಬೃಹತ್ ಆಲದ ಮರ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರಿನ ಮೇಲೆ ಬಿದ್ದು ಜಖಂಗೊಂಡಿದೆ. 

ಇಲ್ಲಿನ ಹೆದ್ದಾರಿ ಬದಿಯಲ್ಲಿ ಹಳೆಯ ಕಾಲದ ಬೃಹತ್ ಆಲದ ಮರ ಮಂಗಳವಾರ ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಏಕಾಏಕಿ ಹೆದ್ದಾರಿಗೆ ಉರುಳಿ ಬಿದ್ದಿದೆ. ಈ ಸಂದರ್ಭ ಹೆದ್ದಾರಿಯಲ್ಲಿ ಬರುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಜಖಂಗೊಂಡಿದ್ದು, ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. 

ಘಟನೆಯಿಂದ ಕೆಲ ಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಟ ನಡೆಸುವಂತಾಯಿತು. ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.
  • Blogger Comments
  • Facebook Comments

0 comments:

Post a Comment

Item Reviewed: ಸೂರಿಕುಮೇರು : ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರಿನ ಮೇಲೆ ಉರುಳಿದ ಮರ Rating: 5 Reviewed By: karavali Times
Scroll to Top