ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಉಳ್ಳಾಲ ಡಿವೈಎಫ್‍ಐ ಪ್ರತಿಭಟನೆ - Karavali Times ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಉಳ್ಳಾಲ ಡಿವೈಎಫ್‍ಐ ಪ್ರತಿಭಟನೆ - Karavali Times

728x90

26 August 2020

ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಉಳ್ಳಾಲ ಡಿವೈಎಫ್‍ಐ ಪ್ರತಿಭಟನೆ


ಮಂಗಳೂರು (ಕರಾವಳಿ ಟೈಮ್ಸ್) : ಸರಕಾರಿ ಆಸ್ಪತ್ರೆ ಬಲಪಡಿಸಿ, ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸಿ, ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸಿ ಎಂದು ಆಗ್ರಹಿಸಿ ಹಾಗೂ ಕೊರೋನಾ ಹೆಸರಲ್ಲಿ ಆಸ್ಪತ್ರೆಗಳ ಲೂಟಿಕೋರ ನೀತಿಯನ್ನು ಖಂಡಿಸಿ, ಸರಕಾರಿ ಆಸ್ಪತ್ರೆಯ ಅವ್ಯವಸ್ಥೆಯನ್ನು ವಿರೋಧಿಸಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಬಲಪಡಿಸುವಂತೆ ಒತ್ತಾಯಿಸಿ, ಎಲ್ಲರಿಗೂ ಸಮಾನ ಗುಣಮಟ್ಟದ ಉಚಿತ ಚಿಕಿತ್ಸೆಗಾಗಿ ಒತ್ತಾಯಿಸಿ ಡಿವೈಎಫ್‍ಐ ಉಳ್ಳಾಲ ವಲಯ ಸಮಿತಿ ವತಿಯಿಂದ ಮುಡಿಪು ಜಂಕ್ಷನ್ನಿನಲ್ಲಿ ಬುಧವಾರ ಪ್ರತಿಭಟನಾ ಸಭೆ ನಡೆಯಿತು. 

ಸಭೆಯನ್ನುದ್ದೇಶಿಸಿ ಡಿವೈಎಫ್‍ಐ ಮಾಜಿ ರಾಜ್ಯಾಧ್ಯಕ್ಷ, ಕಾರ್ಮಿಕ ಮುಖಂಡ ಸುನಿಲ್ ಕುಮಾರ್ ಬಜಾಲ್ ಹಾಗೂ ಡಿವೈಎಫ್‍ಐ ಉಳ್ಳಾಲ ವಲಯ ಸಮಿತಿ ಅಧ್ಯಕ್ಷ ಅಶ್ರಫ್ ಕೆ ಸಿ ರೋಡ್ ಮಾತನಾಡಿದರು. 

ಡಿವೈಎಫ್‍ಐ ಜಿಲ್ಲಾ ಉಪಾಧ್ಯಕ್ಷ ರಫೀಕ್ ಹರೇಕಳ, ಡಿವೈಎಫ್‍ಐ ಉಳ್ಳಾಲ ವಲಯ ಸಮಿತಿ ಉಪಾಧ್ಯಕ್ಷ ರಝಾಕ್ ಮೊಂಟೆಪದವು, ಕೋಶಾಧಿಕಾರಿ ಅಶ್ರಫ್ ಹರೇಕಳ, ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘದ ಅಧ್ಯಕ್ಷ ಅಲ್ತಾಫ್ ಮುಡಿಪು, ಕಾರ್ಯದರ್ಶಿ ಜಗದೀಶ್ ದೇರಳಕಟ್ಟೆ, ಡಿವೈಎಫ್‍ಐ ಮುಡಿಪು ಘಟಕದ ಅಧ್ಯಕ್ಷ ರಝಾಕ್ ಮುಡಿಪು, ಕಾರ್ಯದರ್ಶಿ ರಿಯಾಜ್, ಬಾಳೆಪುಣಿ ಕೈರಂಗಳ ಘಟಕಾಧ್ಯಕ್ಷ ಅಲಿ ಕಾಯಾರ್, ಕಾರ್ಯದರ್ಶಿ ಖಲಂದರ್, ದೇರಳಕಟ್ಟೆ ಘಟಕಾಧ್ಯಕ್ಷ ನವಾಝ್ ಉರುಮಣೆ, ಕೊಲ್ಲರಕೋಡಿ ಘಟಕಾಧ್ಯಕ್ಷ ಆಸಿಫ್ ಕೊಲ್ಲರಕೋಡಿ, ಪ್ರಮುಖರಾದ ಶರೀಫ್ ವಿದ್ಯಾನಗರ, ನಿಝಾರ್ ಮುಡಿಪು, ಶಾಫಿ ಮುಡಿಪು, ನಝೀರ್ ಟಿ ಮೊದಲಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. 
  • Blogger Comments
  • Facebook Comments

0 comments:

Post a Comment

Item Reviewed: ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಉಳ್ಳಾಲ ಡಿವೈಎಫ್‍ಐ ಪ್ರತಿಭಟನೆ Rating: 5 Reviewed By: karavali Times
Scroll to Top