ಕರ್ನಾಟಕದ ಶಿರಾ, ಆರ್.ಆರ್. ನಗರ ಸಹಿತ 56 ವಿಧಾನಸಭಾ ಕ್ಷೇತ್ರ ಹಾಗೂ ಬಿಹಾರ 1 ಲೋಕಸಭಾ ಕ್ಷೇತ್ರದ ಉಪ ಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ - Karavali Times ಕರ್ನಾಟಕದ ಶಿರಾ, ಆರ್.ಆರ್. ನಗರ ಸಹಿತ 56 ವಿಧಾನಸಭಾ ಕ್ಷೇತ್ರ ಹಾಗೂ ಬಿಹಾರ 1 ಲೋಕಸಭಾ ಕ್ಷೇತ್ರದ ಉಪ ಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ - Karavali Times

728x90

30 September 2020

ಕರ್ನಾಟಕದ ಶಿರಾ, ಆರ್.ಆರ್. ನಗರ ಸಹಿತ 56 ವಿಧಾನಸಭಾ ಕ್ಷೇತ್ರ ಹಾಗೂ ಬಿಹಾರ 1 ಲೋಕಸಭಾ ಕ್ಷೇತ್ರದ ಉಪ ಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ



ನವೆಂಬರ್ 3 ರಂದು ಮತದಾನ, 10ಕ್ಕೆ ಫಲಿತಾಂಶ


ಬೆಂಗಳೂರು, ಸೆ. 30, 2020 (ಕರಾವಳಿ ಟೈಮ್ಸ್) : ರಾಜ್ಯದ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಸಹಿತ ದೇಶದ 56 ವಿಧಾನಸಭಾ ಕ್ಷೇತ್ರಗಳು, ಬಿಹಾರದ ಲೋಕಸಭೆಯ 1 ಕ್ಷೇತ್ರಕ್ಕೆ ಉಪ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಉಪ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಿದೆ.  ರಾಜ್ಯದ ಎರಡು ವಿಧಾನ ಸಭಾ ಕ್ಷೇತ್ರಗಳಾದ ತುಮಕೂರು ಜಿಲ್ಲೆಯ ಶಿರಾ ಮತ್ತು ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ನವೆಂಬರ್ 3ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 9ರಂದು ಅಧಿಸೂಚನೆ ಹೊರಬೀಳಲಿದೆ.

ಅಕ್ಟೋಬರ್ 16ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಅಕ್ಟೋಬರ್ 17ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ.  ಅಕ್ಟೋಬರ್ 19ಕ್ಕೆ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ನವೆಂಬರ್ 3 ರಂದು ರಾಜ್ಯ ಸೇರಿದಂತೆ 56 ಕ್ಷೇತ್ರಗಳ ಪೈಕಿ ಕೆಲವು ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ನ. 10 ರಂದು ಮತ ಎಣಿಕೆ ನಡೆಯಲಿದೆ. ನ. 12ಕ್ಕೆ ಚುನಾವಣೆ ಪ್ರಕ್ರಿಯೆಗಳು ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ತುಮಕೂರು ಜಿಲ್ಲೆಯ ಶಿರಾ ಮತ್ತು ಬೆಂಗಳೂರಿನ ರಾಜರಾಜೇಶ್ವರಿನಗರ, ಛತ್ತೀಸ್ ಗಡದ 1, ಗುಜರಾತ್  8, ಹರ್ಯಾಣ 1, ಜಾರ್ಖಂಡ್ 2, ಮಧ್ಯಪ್ರದೇಶ 28, ಮಣಿಪುರ 2, ನಾಗಲ್ಯಾಂಡ್ 2, ಒಡಿಸ್ಸಾ 2, ತೆಲಂಗಾಣ 1, ಉತ್ತರ ಪ್ರದೇಶದ 7 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ.










  • Blogger Comments
  • Facebook Comments

0 comments:

Post a Comment

Item Reviewed: ಕರ್ನಾಟಕದ ಶಿರಾ, ಆರ್.ಆರ್. ನಗರ ಸಹಿತ 56 ವಿಧಾನಸಭಾ ಕ್ಷೇತ್ರ ಹಾಗೂ ಬಿಹಾರ 1 ಲೋಕಸಭಾ ಕ್ಷೇತ್ರದ ಉಪ ಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ Rating: 5 Reviewed By: karavali Times
Scroll to Top