ಸೆಪ್ಟೆಂಬರ್ 10ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಎಚ್ಚರಿಕೆ - Karavali Times ಸೆಪ್ಟೆಂಬರ್ 10ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಎಚ್ಚರಿಕೆ - Karavali Times

728x90

6 September 2020

ಸೆಪ್ಟೆಂಬರ್ 10ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಎಚ್ಚರಿಕೆ

 


ಬೆಂಗಳೂರು (ಕರಾವಳಿ ಟೈಮ್ಸ್) : ಸೆಪ್ಟೆಂಬರ್ 10ರವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. 

ಈ ಬಗ್ಗೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಎಲ್ಲೊ ಆಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡು ಭಾಗದಲ್ಲೂ ಸಾಧಾರಣ  ಮಳೆಯಾಗುವ ಸಾಧ್ಯತೆಯಿರುವುದಾಗಿ ಅವರು ತಿಳಿಸಿದ್ದಾರೆ.

ಬೆಳಗಾವಿ, ಧಾರಾವಾಡ, ಗದಗ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಸೆಪ್ಚೆಂಬರ್ 8ರವರೆಗೂ ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ  ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.











  • Blogger Comments
  • Facebook Comments

0 comments:

Post a comment

Item Reviewed: ಸೆಪ್ಟೆಂಬರ್ 10ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಎಚ್ಚರಿಕೆ Rating: 5 Reviewed By: karavali Times
Scroll to Top