ಕಲಬುರಗಿ, ಸೆ. 27, 2020 (ಕರಾವಳಿ ಟೈಮ್ಸ್) : ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಕಾರು ನಿಂತಿದ್ದ ಲಾರಿಗೆ ಡಿಕ್ಕಿಯಾದ ಪರಿಣಾಮ ಗರ್ಭಿಣಿ ಸೇರಿ 7 ಮಂದಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಕಲಬುರಗಿ ಹೊರವಲಯದ ಆಳಂದ ರಸ್ತೆಯ ಸಾವಳಗಿ ಬಳಿ ನಡೆದಿದೆ.
ಮೃತರನ್ನು ಗರ್ಭಿಣಿ ಇರ್ಫಾನಾ ಬೇಗಂ (25), ರುಬಿಯಾ ಬೇಗಂ (50), ಅಬೇದಾಬಿ ಬೇಗಂ (50), ಮುನೀರ್ (28), ಮಹಮ್ಮದ್ ಅಲಿ (38), ಶೌಕತ್ ಅಲಿ (29) ಹಾಗೂ ಜಯಚುನಬಿ (60) ಎಂದು ಹೆಸರಿಸಲಾಗಿದೆ. ಮೃತರೆಲ್ಲರೂ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.
ಗರ್ಭಿಣಿಯನ್ನು ಹೆರಿಗೆಗಾಗಿ ಕಲಬುರಗಿಗೆ ಕರೆದುಕೊಂಡು ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಈ ಬಗ್ಗೆ ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




























0 comments:
Post a Comment