ಬಂಟ್ವಾಳ ತಾಲೂಕು ಕಛೇರಿಯಲ್ಲಿ ಆಧಾರ್ ಅವ್ಯವಸ್ಥೆ : ಸಾರ್ವಜನಿಕ ದೂರಿಗೆ ಸ್ಪಂದಿಸಿ ಮಾಜಿ ಸಚಿವ ಅಧಿಕಾರಿಗಳ ಭೇಟಿ - Karavali Times ಬಂಟ್ವಾಳ ತಾಲೂಕು ಕಛೇರಿಯಲ್ಲಿ ಆಧಾರ್ ಅವ್ಯವಸ್ಥೆ : ಸಾರ್ವಜನಿಕ ದೂರಿಗೆ ಸ್ಪಂದಿಸಿ ಮಾಜಿ ಸಚಿವ ಅಧಿಕಾರಿಗಳ ಭೇಟಿ - Karavali Times

728x90

16 September 2020

ಬಂಟ್ವಾಳ ತಾಲೂಕು ಕಛೇರಿಯಲ್ಲಿ ಆಧಾರ್ ಅವ್ಯವಸ್ಥೆ : ಸಾರ್ವಜನಿಕ ದೂರಿಗೆ ಸ್ಪಂದಿಸಿ ಮಾಜಿ ಸಚಿವ ಅಧಿಕಾರಿಗಳ ಭೇಟಿ


ಬಂಟ್ವಾಳ, ಸೆ. 16, 2020 (ಕರಾವಳಿ ಟೈಮ್ಸ್) : ಬಂಟ್ವಾಳ ತಾಲೂಕು ಕಚೇರಿಯಲ್ಲಿ ಆಧಾರ್ ಕಾರ್ಡ್ ಅವ್ಯವಸ್ಥೆ ಬಗ್ಗೆ ಸಾರ್ವಜನಿಕರು ದೂರಿಕೊಂಡ ಹಿನ್ನಲೆಯಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ಅವರು ಬುಧವಾರ ಮಿನಿ ವಿಧಾನಸೌಧಕ್ಕೆ ಭೇಟಿ ನೀಡಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಸ್ಯೆ ಪರಿಹಾರದ ಬಗ್ಗೆ ಮಾತುಕತೆ ನಡೆಸಿದರು. 

ಈ ಸಂದರ್ಭ ಮಾಜಿ ಸಚಿವರೊಂದಿಗೆ ಮಾತುಕತೆ ನಡೆಸಿದ ಅಧಿಕಾರಿಗಳು ಸಮಸ್ಯೆಗೆ ಶೀಘ್ರ ಪರಿಹಾರ ಕಲ್ಪಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬೇಬಿ ಕುಂದರ್, ಕೋಶಾಧಿಕಾರಿ ತಿಲಕ್ ಪೂಜಾರಿ, ಭೂಅಭಿವೃದ್ದಿ ಬ್ಯಾಂಕ್ ಮಾಜಿ ಅಧ್ಯಕ್ಷ ಸುದರ್ಶನ್ ಜೈನ್ ಮೊದಲಾದವರು ಜೊತೆಗಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ತಾಲೂಕು ಕಛೇರಿಯಲ್ಲಿ ಆಧಾರ್ ಅವ್ಯವಸ್ಥೆ : ಸಾರ್ವಜನಿಕ ದೂರಿಗೆ ಸ್ಪಂದಿಸಿ ಮಾಜಿ ಸಚಿವ ಅಧಿಕಾರಿಗಳ ಭೇಟಿ Rating: 5 Reviewed By: karavali Times
Scroll to Top