ಕೊರೋನಾ ಎಫೆಕ್ಟ್ : ಈ ಬಾರಿ ಸರಳ ದಸರಾ ಆಚರಣೆಗೆ ಸರಕಾರ ತೀರ್ಮಾನ - Karavali Times ಕೊರೋನಾ ಎಫೆಕ್ಟ್ : ಈ ಬಾರಿ ಸರಳ ದಸರಾ ಆಚರಣೆಗೆ ಸರಕಾರ ತೀರ್ಮಾನ - Karavali Times

728x90

8 September 2020

ಕೊರೋನಾ ಎಫೆಕ್ಟ್ : ಈ ಬಾರಿ ಸರಳ ದಸರಾ ಆಚರಣೆಗೆ ಸರಕಾರ ತೀರ್ಮಾನ



ಬೆಂಗಳೂರು ಸೆ. 08, 2020 (ಕರಾವಳಿ ಟೈಮ್ಸ್) : ಕೋವಿಡ್-19 ವೈರಸ್ ಹಿನ್ನೆಲೆಯಲ್ಲಿ ಈ ಬಾರಿ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರೆ ನೀಡಿದ್ದಾರೆ.

ಮಂಗಳವಾರ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದ ಸಿಎಂ ಕೊರೊನಾ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಆಚರಣೆಯನ್ನು ಕೈ ಬಿಡದೆ, ವೈಭವಕ್ಕೆ ಕಡಿವಾಣ ಹಾಕುವುದು ಸೂಕ್ತ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿರುವುದರಿಂದ ಹೆಚ್ಚಿನ ಜನಸಂದಣಿ ಸೇರದಂತೆ ಸಾಂಕೇತಿಕ ಆಚರಣೆಗೆ ಮಾತ್ರ ಅವಕಾಶ ನೀಡಲಾಗುವುದು ಎಂದರು. 

ದಸರಾ ಆಚರಣೆಗೆ 10 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆ ಮಾಡಲಾಗುವುದು. ಆಹಾರ ಮೇಳ, ಕ್ರೀಡೆ, ಯುವ ದಸರಾ ಮುಂತಾದ ಕಾರ್ಯಕ್ರಮಗಳನ್ನು ಈ ಬಾರಿ ಕೈಬಿಡಲಾಗುವುದು. ಗಜಪಡೆಯನ್ನು  ಕೂಡಾ ಕನಿಷ್ಟ 5ಕ್ಕೆ ಸೀಮಿತಗೊಳಿಸಲು ಸಭೆ ತೀರ್ಮಾನಿಸಿದೆ. 

ನಾಡದೇವತೆ ಚಾಮುಂಡೇಶ್ವರಿಯ ಅಗ್ರಪೂಜೆ ಮತ್ತು ದಸರಾ ಉದ್ಘಾಟನೆಯನ್ನು ಕೋವಿಡ್‍ಗಾಗಿ ಶ್ರಮಿಸಿರುವ ಕರೊನಾ ಯೋಧರಾದ ವೈದ್ಯರು, ನರ್ಸ್, ಆಶಾ ಕಾರ್ಯಕರ್ತರು, ಪೌರ ಕಾರ್ಮಿಕರು ಹಾಗೂ ಪೆÇಲೀಸರಿಂದ  ನೆರವೇರಿಸಲಾಗುವುದು ಎಂದು ತೀರ್ಮಾನಿಸಲಾಗಿದೆ. 

ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿದ್ಯುಕ್ತವಾಗಿ ಪೂಜೆ ನೆರವೇರಿಸಿ, 5-6 ಆನೆಗಳನ್ನು ಮಾತ್ರ ಬಳಸಿ, ಜಂಬೂ ಸವಾರಿಯನ್ನು ಅರಮನೆ ಆವರಣದಲ್ಲಿ ಮಾತ್ರ ನಡೆಸುವುದು. ಮೈಸೂರು ನಗರದಲ್ಲಿ  ವಿದ್ಯುತ್ ದೀಪಾಲಂಕಾರ ಮಾಡುವುದು ಎಂದು ತೀರ್ಮಾನಿಸಲಾಯಿತು.  ಪ್ರಧಾನಮಂತ್ರಿಗಳ ಆತ್ಮನಿರ್ಭರ್ ಭಾರತ ಪರಿಕಲ್ಪನೆಯಂತೆ ಚೀನಿ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಬಾರದು. ದೇಶೀ ಉತ್ಪನ್ನಗಳಿಗೆ ಆದ್ಯತೆ ನೀಡಬೇಕೆಂದು ಮುಖ್ಯ ಮಂತ್ರಿಗಳು ಇದೇ ವೇಳೆ ಸೂಚಿಸಿದರು. 

ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ. ಸಿ.ಎಸ್. ಅಶ್ವತ್ಥ್ ನಾರಾಯಣ್, ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ. ರವಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಂಸದರಾದ ಸುಮಲತಾ ಅಂಬರೀಶ್, ಪ್ರತಾಪ್ ಸಿಂಹ, ಶಾಸಕರು, ಕೆ.ಎಸ್.ಟಿ.ಡಿ.ಸಿ ಅಧ್ಯಕ್ಷೆ ಶ್ರುತಿ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮೈಸೂರು ಜಿಲ್ಲಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.












  • Blogger Comments
  • Facebook Comments

0 comments:

Post a Comment

Item Reviewed: ಕೊರೋನಾ ಎಫೆಕ್ಟ್ : ಈ ಬಾರಿ ಸರಳ ದಸರಾ ಆಚರಣೆಗೆ ಸರಕಾರ ತೀರ್ಮಾನ Rating: 5 Reviewed By: karavali Times
Scroll to Top