ಗ್ರಾಮ ಪಂಚಾಯತ್ ಚುನಾವಣೆಗೆ ಕೋವಿಡ್ ಮಾರ್ಗಸೂಚಿ ಪ್ರಕಟಿಸಿದ ಚುನಾವಣಾ ಆಯೋಗ : ಶೀಘ್ರ ಚುನಾವಣೆ ನಡೆಯುವುದು ಸನ್ನಿಹಿತ! - Karavali Times ಗ್ರಾಮ ಪಂಚಾಯತ್ ಚುನಾವಣೆಗೆ ಕೋವಿಡ್ ಮಾರ್ಗಸೂಚಿ ಪ್ರಕಟಿಸಿದ ಚುನಾವಣಾ ಆಯೋಗ : ಶೀಘ್ರ ಚುನಾವಣೆ ನಡೆಯುವುದು ಸನ್ನಿಹಿತ! - Karavali Times

728x90

4 September 2020

ಗ್ರಾಮ ಪಂಚಾಯತ್ ಚುನಾವಣೆಗೆ ಕೋವಿಡ್ ಮಾರ್ಗಸೂಚಿ ಪ್ರಕಟಿಸಿದ ಚುನಾವಣಾ ಆಯೋಗ : ಶೀಘ್ರ ಚುನಾವಣೆ ನಡೆಯುವುದು ಸನ್ನಿಹಿತ!



ಬೆಂಗಳೂರು (ಕರಾವಳಿ ಟೈಮ್ಸ್) : ಗ್ರಾಮ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗ ನೂತನ ಮಾರ್ಗಸೂಚಿ ಪ್ರಕಟಿಸಿದ್ದು, ಶೀಘ್ರದಲ್ಲೇ ಚುನಾವಣೆ ನಡೆಯುವುದು ಸನ್ನಿಹಿತವಾಗಿದೆ. ಆಯೋಗದ ಮಾರ್ಗಸೂಚಿಯಂತೆ ಕೋವಿಡ್ ಪೀಡಿತರಿಗೂ ಸ್ಪರ್ಧೆಗೆ ಅವಕಾಶ ನೀಡಲಾಗಿದೆ. ಪ್ರಚಾರದ ವೇಳೆ ಅಭ್ಯರ್ಥಿ ಜತೆ 5 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯವಾಗಿ ಧರಿಸುವುದು, ವಿಜಯೀ ಅಭ್ಯರ್ಥಿಗಳ ವಿಜಯೋತ್ಸವಕ್ಕೆ ನಿರ್ಬಂಧ ಮೊದಲಾದ ನಿಯಮಗಳನ್ನು ಚುನಾವಣಾ ಆಯೋಗ ಪ್ರಕಟಿಸಿರುವ ಪ್ರಮಾಣಿತ ಕಾರ್ಯನಿರ್ವಹಣಾ ವಿಧಾನ (ಎಸ್‍ಒಪಿ) ಯಲ್ಲಿ ಪ್ರಕಟಿಸಿದೆ. 

ಚುನಾವಣಾ ಕರ್ತವ್ಯದಲ್ಲಿರುವ ಪ್ರತಿಯೊಬ್ಬ ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಚುನಾವಣೆ ಕೊಠಡಿ ಪ್ರವೇಶಿಸುವ ಮುನ್ನ ಸ್ಯಾನಿಟೈಸ್ ಮಾಡಿಕೊಳ್ಳಬೇಕು. ಜೊತೆಗೆ ದೈಹಿಕ ಉಷ್ಣಾಂಶ ಪರೀಕ್ಷೆ ಮಾಡಿಸಿಕೊಳ್ಳುವ ಜೊತೆಗೆ ಸಾಧ್ಯವಾದಷ್ಟು ವಿಶಾಲವಾದ ಕೊಠಡಿಯಲ್ಲಿ ಚುನಾವಣಾ ಕೆಲಸ ನಡೆಯಬೇಕು ಎಂದು ಮಾರ್ಗಸೂಚಿ ತಿಳಿಸಿದೆ. ಚುನಾವಣೆಗೆ ಸಂಬಂಧಿಸಿದ ಕಡತಗಳು, ದಸ್ತಾವೇಜುಗಳು ಸಂಪೂರ್ಣವಾಗಿ ಸೋಂಕು ನಿವಾರಕ ಕೊಠಡಿಯಲ್ಲಿ ಇಡಬೇಕು ಮತ್ತು ಅದರ ಜೊತೆಗೆ ಕರ್ತವ್ಯಕ್ಕೆ ಸಿಬ್ಬಂದಿಯನ್ನು ನಿಯೋಜಿಸಬೇಕು. ಅವರಿಗೆ ಮಾತ್ರ ಒಳಗೆ ಹೋಗಲು ಅವಕಾಶ ಕಲ್ಪಿಸಲಾಗಿದೆ. 

ಚುನಾವಣಾಧಿಕಾರಿಗಳು ನಾಮಪತ್ರ ಸ್ವೀಕರಿಸುವ ವೇಳೆ ಫೇಸ್ ಮಾಸ್ಕ್ ಧರಿಸಬೇಕು. ಕೈಗಳಿಗೆ ಗ್ಲೌಸ್ ಕಡ್ಡಾಯವಾಗಿ ಧರಿಸಬೇಕು. ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ಅಭ್ಯರ್ಥಿ ಮತ್ತು ಒಬ್ಬ ಸೂಚಕನಿಗೆ ಮಾತ್ರ ಚುನಾವಣಾಧಿಕಾರಿ ಕೊಠಡಿ ಪ್ರವೇಶಿಸಲು ಅವಕಾಶವಿರುತ್ತದೆ. ಕೊರೋನಾ ಪಾಸಿಟಿವ್ ವ್ಯಕ್ತಿ  ನಾಮಪತ್ರ ಸಲ್ಲಿಸಲು ಇಚ್ಛಿಸಿದರೆ ಸೂಚಕರ ಮೂಲಕ ನಾಮಪತ್ರ ಸಲ್ಲಿಸಬಹುದು ಎಂದು ಮಾರ್ಗಸೂಚಿ ತಿಳಿಸಿದೆ.

ನಾಮಪತ್ರ ಪರಿಶೀಲನೆ ವೇಳೆ ಕ್ಷೇತ್ರವಾರು ಹಾಜರಿರುವ ಅಭ್ಯರ್ಥಿಗಳ ಸಮ್ಮುಖದಲ್ಲಿ ಮಾಡಬೇಕು. ಚುನಾವಣಾ ಪ್ರಚಾರದ ವೇಳೆ ಸಾಮಾಜಿಕ ಅಂತರ ಕಾಯ್ದುಕೊಂಡು ಐದು ಮಂದಿಗೆ ಮಾತ್ರ ಪ್ರಚಾರ ಮಾಡಲು ಅವಕಾಶವಿರುತ್ತದೆ. ಪ್ರಚಾರದ ವೇಳೆ ಫೇಸ್ ಮಾಸ್ಕ್ ಧರಿಸಬೇಕು. ಅಭ್ಯರ್ಥಿಗಳು ಪ್ರಚಾರಕ್ಕಾಗಿ ನಿಯಮಾನುಸಾರ ಮುದ್ರಿಸಿದ ಕರಪತ್ರಗಳನ್ನು ಹಂಚುವಾಗ ಕಡ್ಡಾಯವಾಗಿ ಫೇಸ್ ಮಾಸ್ಕ್ ಧರಿಸಬೇಕು ಎನ್ನುವ ನಿರ್ಬಂಧ ವಿದಿಸಲಾಗಿದೆ.

ಮತದಾನದ ದಿನ ಮತಗಟ್ಟೆ ಅಧಿಕಾರಿಗಳು ಫೇಸ್ ಮಾಸ್ಕ್, ಹ್ಯಾಂಡ್ ಗ್ಲೌಸ್ ಧರಿಸಬೇಕು. ಮತದಾರರು ಫೇಸ್ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಮತದಾನ ಮಾಡಬೇಕು. ಮತದಾನ ಕೊಠಡಿ ಪ್ರವೇಶಿಸುವ ವೇಳೆ ಕೋವಿಡ್ ಥರ್ಮಲ್ ಜ್ವರ ತಪಾಸಣೆ ಕಡ್ಡಾಯ ಮಾಡಬೇಕು ಎಂದು ರಾಜ್ಯ ಚುನಾವಣಾ ಆಯೋಗ ತನ್ನ  ಹತ್ತು ಪುಟಗಳ ಸುದೀರ್ಘ ಮಾರ್ಗಸೂಚಿಯಲ್ಲಿ ತಿಳಿಸಿದೆ.

ರಾಜ್ಯ ಚುನಾವಣಾ ಆಯೋಗ ದಿನಾಂಕ ಪ್ರಕಟಿಸುತ್ತಿದ್ದಂತೆ ತಾವು ಚುನಾವಣೆಯನ್ನು ನಡೆಸಲು ಸಿದ್ಧವಿರುವುದಾಗಿ ಈಗಾಗಲೇ ಸರಕಾರ ಪ್ರಕಟಿಸಿದ್ದು, Á್ರಮ ಪಂಚಾಯತ್ ಚುನಾವಣೆ ಶೀಘ್ರ ನಡೆಯುವ ಸಾಧ್ಯತೆ ಇದೆ. ಕೇಂದ್ರ ಗೃಹ ಸಚಿವಾಲಯ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಕೋವಿಡ್ ನಿಯಂತ್ರಣಕ್ಕೆ ಕಾಲ ಕಾಲಕ್ಕೆ ಮಾರ್ಗಸೂಚಿಗಳನ್ನು ಹೊರಡಿಸುತ್ತದೆ. ಅದರಂತೆ ಗ್ರಾ.ಪಂ. ಸಾರ್ವತ್ರಿಕ ಚುನಾವಣೆ ನಡೆಸುವ ನಿಟ್ಟಿನಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತಾಂತ್ರಿಕ ತಜ್ಞರೊಂದಿಗೆ 2020ರ ಆ. 18ರಂದು ಚರ್ಚಿಸಿದ್ದು, ಅವರ ಸಲಹೆಗಳನ್ನು ಪರಿಗಣಿಸಿ ಎಸ್‍ಒಪಿ ರಚಿಸಲಾಗಿದೆ ಎಂದು ಆಯೋಗ ತಿಳಿಸಿದೆ.












  • Blogger Comments
  • Facebook Comments

0 comments:

Post a Comment

Item Reviewed: ಗ್ರಾಮ ಪಂಚಾಯತ್ ಚುನಾವಣೆಗೆ ಕೋವಿಡ್ ಮಾರ್ಗಸೂಚಿ ಪ್ರಕಟಿಸಿದ ಚುನಾವಣಾ ಆಯೋಗ : ಶೀಘ್ರ ಚುನಾವಣೆ ನಡೆಯುವುದು ಸನ್ನಿಹಿತ! Rating: 5 Reviewed By: karavali Times
Scroll to Top