ಕರಾವಳಿ ಶಾಸಕರ ಸಮ್ಮುಖದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಕುರಿತು ಸಭೆ ನಡೆಸಿದ ಸಚಿವ ಈಶ್ವರಪ್ಪ - Karavali Times ಕರಾವಳಿ ಶಾಸಕರ ಸಮ್ಮುಖದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಕುರಿತು ಸಭೆ ನಡೆಸಿದ ಸಚಿವ ಈಶ್ವರಪ್ಪ - Karavali Times

728x90

10 October 2020

ಕರಾವಳಿ ಶಾಸಕರ ಸಮ್ಮುಖದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಕುರಿತು ಸಭೆ ನಡೆಸಿದ ಸಚಿವ ಈಶ್ವರಪ್ಪ





ಬೆಂಗಳೂರು, ಅ. 10, 2020 (ಕರಾವಳಿ ಟೈಮ್ಸ್) : ರಾಜ್ಯ ಗ್ರಾಮೀಣಾಭಿವೃದ್ಧಿ, ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಬಹುಗ್ರಾಮ ಕುಡಿಯುವ ನೀರಿನ ಕುರಿತಾದ ಸಭೆ ನಡೆಸಲಾಯಿತು.

ಸಭೆಯಲ್ಲಿ ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್, ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಮಂಗಳೂರು ಉತ್ತರ ಶಾಸಕ ಡಾ ಭರತ್ ಶೆಟ್ಟಿ ಭಾಗವಹಿಸಿದ್ದರು. ಸಭೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ವ್ಯಾಪ್ತಿಯ ಗ್ರಾಮಗಳಾದ ಅಮ್ಮುಂಜೆ ಗ್ರಾಮದ 1215 ಮನೆಗಳಿಗೆ, ಬಡಗಬೆಳ್ಳೂರು ಗ್ರಾಮದ 823 ಮನೆಗಳಿಗೆ, ತೆಂಕಬೆಳ್ಳೂರು ಗ್ರಾಮದ 314 ಮನೆಗಳಿಗೆ, ಕಳ್ಳಿಗೆ ಗ್ರಾಮದ 1273 ಮನೆಗಳಿಗೆ, ಕರಿಯಂಗಳ ಗ್ರಾಮದ 890 ಮನೆಗಳಿಗೆ ಸೇರಿದಂತೆ ಒಟ್ಟು 4 ಗ್ರಾಮ ಪಂಚಾಯತ್ ವ್ಯಾಪ್ತಿಯ 51 ಜನ ವಸತಿಗಳ 4815 ಮನೆಗಳಿಗೆ ಕಾರ್ಯಾತ್ಮಕ ನಳ್ಳಿ ನೀರು ಸಂಪರ್ಕ ಒದಗಿಸುವ ಬಗ್ಗೆ ಕಾರ್ಯಯೋಜನೆ ರೂಪಿಸಲಾಯಿತು. ಸಚಿವರು ಅನುಮೋದನೆ ನೀಡಿ ತಕ್ಷಣವೇ ಕಾಮಗಾರಿ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದಲ್ಲದೆ ಮಂಗಳೂರು ಹಾಗೂ ಮೂಡಬಿದಿರೆ ತಾಲೂಕಿನ ಜಲಜೀವನ ಮಿಷನ್ ಯೋಜನೆಯಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಸಚಿವರು ಅನುಮೋದನೆ ನೀಡಿದರು.

ಈ ಸಂದರ್ಭ ಗ್ರಾಮೀಣಾಭಿವೃದ್ಧಿ, ಪಂಚಾಯತ್‍ರಾಜ್ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತಿಕ್, ಗ್ರಾಮೀಣ ಕುಡಿಯುವ ನೀರಿನ ಮತ್ತು ನೈರ್ಮಲ್ಯ ಇಲಾಖೆಯ ಮುಖ್ಯ ಇಂಜಿನಿಯರ್ ಹೊಳೆಯಾಜಿ ಉಪಸ್ಥಿತರಿದ್ದರು.








  • Blogger Comments
  • Facebook Comments

0 comments:

Post a Comment

Item Reviewed: ಕರಾವಳಿ ಶಾಸಕರ ಸಮ್ಮುಖದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಕುರಿತು ಸಭೆ ನಡೆಸಿದ ಸಚಿವ ಈಶ್ವರಪ್ಪ Rating: 5 Reviewed By: karavali Times
Scroll to Top