ಕಲ್ಲಡ್ಕ : ಗೂಡ್ಸ್ ಟೆಂಪೋ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಮೃತ್ಯು - Karavali Times ಕಲ್ಲಡ್ಕ : ಗೂಡ್ಸ್ ಟೆಂಪೋ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಮೃತ್ಯು - Karavali Times

728x90

28 October 2020

ಕಲ್ಲಡ್ಕ : ಗೂಡ್ಸ್ ಟೆಂಪೋ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಮೃತ್ಯು

 


ಬಂಟ್ವಾಳ, ಅ. 29, 2020 (ಕರಾವಳಿ ಟೈಮ್ಸ್)  : ತಾಲೂಕಿನ ಕಲ್ಲಡ್ಕ ಪೇಟೆಯಲ್ಲಿ ಬುಧವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಸ್ಥಳೀಯ ನಿವಾಸಿ, ಸಿವಿಲ್ ಇಂಜಿನಿಯರ್ ವಸಂತ ಕೆ (55) ಅವರು ಮೃತಪಟ್ಟಿದ್ದಾರೆ. 

ವಸಂತ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಕಲ್ಲಡ್ಕದಿಂದ ಬಿ ಸಿ ರೋಡಿಗೆ ಬರುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಗೂಡ್ಸ್ ಟೆಂಪೋ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡ ವಸಂತ ಅವರನ್ನು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







  • Blogger Comments
  • Facebook Comments

0 comments:

Post a Comment

Item Reviewed: ಕಲ್ಲಡ್ಕ : ಗೂಡ್ಸ್ ಟೆಂಪೋ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಮೃತ್ಯು Rating: 5 Reviewed By: karavali Times
Scroll to Top