ನಾಗಮಂಗಲ ಕೈಗಾರಿಕಾ ಪ್ರದೇಶ ಭೂಸ್ವಾಧೀನಕ್ಕೆ ಮತ್ತೊಮ್ಮೆ ಸರ್ವೆ ನಡೆಸಿ : ಅಧಿಕಾರಿಗಳಿಗೆ ಸಚಿವ ಜಗದೀಶ್ ಶೆಟ್ಟರ್ ಸೂಚನೆ - Karavali Times ನಾಗಮಂಗಲ ಕೈಗಾರಿಕಾ ಪ್ರದೇಶ ಭೂಸ್ವಾಧೀನಕ್ಕೆ ಮತ್ತೊಮ್ಮೆ ಸರ್ವೆ ನಡೆಸಿ : ಅಧಿಕಾರಿಗಳಿಗೆ ಸಚಿವ ಜಗದೀಶ್ ಶೆಟ್ಟರ್ ಸೂಚನೆ - Karavali Times

728x90

3 October 2020

ನಾಗಮಂಗಲ ಕೈಗಾರಿಕಾ ಪ್ರದೇಶ ಭೂಸ್ವಾಧೀನಕ್ಕೆ ಮತ್ತೊಮ್ಮೆ ಸರ್ವೆ ನಡೆಸಿ : ಅಧಿಕಾರಿಗಳಿಗೆ ಸಚಿವ ಜಗದೀಶ್ ಶೆಟ್ಟರ್ ಸೂಚನೆಬೆಂಗಳೂರು, ಅಕ್ಟೋಬರ್ 3, 2020 (ಕರಾವಳಿ ಟೈಮ್ಸ್) : ನಾಗಮಂಗಲ ತಾಲೂಕಿನ ಉದ್ದೇಶಿತ ಕೈಗಾರಿಕಾ ಪ್ರದೇಶ ಅಭಿವೃದ್ದಿಗೆ ಅಗತ್ಯವಿರುವ ಭೂಮಿಯ ಸ್ವಾಧೀನಕ್ಕೆ ಮತ್ತೊಮ್ಮೆ ಸರ್ವೆ ಮಾಡಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಶನಿವಾರ ಸಚಿವರನ್ನು ಭೇಟಿಯಾದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಭೆಯಲ್ಲಿ ಮಾತನಾಡಿ, ನಾಗಮಂಗಲ ತಾಲೂಕಿನಲ್ಲಿ ಕೈಗಾರಿಕಾ ಪ್ರದೇಶ ಅಭಿವೃದ್ದಿಗೆ ಭೂಸ್ವಾಧೀನ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಸ್ವಾಧೀನ ಪ್ರಕ್ರಿಯೆಯಲ್ಲಿ ಕೆಲವೊಂದು ಅಭಿವೃದ್ದಿ ಹೊಂದಿರುವ ತೋಟಗಳನ್ನು ನಮೂದಿಸಲಾಗಿದೆ. ಇದನ್ನು ಕೈಬಿಟ್ಟು ಶುಷ್ಕ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಬೇಕು. ಈ ಭಾಗದಲ್ಲಿ ಕೈಗಾರಿಕೆಗಳ ಬರುವ ಅಗತ್ಯತೆ ಇದೆ. ಆದರೆ, ಕೃಷಿಯಲ್ಲಿ ಅಭಿವೃದ್ದಿ ಹೊಂದಿರುವ ನೀರಾವರಿ ಜಮೀನನ್ನು ಈ ಉದ್ದೇಶಕ್ಕೆ ಸ್ವಾಧೀನ ಪಡಿಸಿಕೊಳ್ಳುವುದು ಬೇಡ ಎಂದು ಮನವಿ ಮಾಡಿದರು.

ಎಚ್.ಡಿ.ಕೆ. ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಜಗದೀಶ್ ಶೆಟ್ಟರ್, ತೋಟಗಳು ಹಾಗೂ ನೀರಾವರಿ ಸೌಲಭ್ಯದಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ಜಮೀನಿನ ಸ್ವಾಧೀನ ಪ್ರಕ್ರಿಯೆ ಸರಿಯಲ್ಲ. ಆ ಜಾಗವನ್ನು ಬಿಟ್ಟು ಶುಷ್ಕ ಪ್ರದೇಶದ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಆ ಭಾಗದ ರೈತರು ಹಾಗೂ ಜನಪ್ರತಿನಿಧಿಗಳೊಂದಿಗೆ ಸಭೆಯನ್ನು ನಡೆಸಬೇಕು ಮತ್ತು ಇನ್ನೊಮ್ಮೆ ಸರ್ವೆ ಕಾರ್ಯ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. 

ನಾಗಮಂಗಲ ಶಾಸಕ ಸುರೇಶ್ ಗೌಡ, ಮಾತನಾಡಿ ಶಾಸಕ ಎ ಮಂಜುನಾಥ್ ಅವರ ವಿಧಾನಸಭಾ ಕ್ಷೇತ್ರಗಳಲ್ಲಿ ಕೈಗಾರಿಕೆಗಳ ಅಭಿವೃದ್ದಿಗೆ ಅವಕಾಶ ಇರುವ ಪ್ರದೇಶಗಳ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು. ಅಲ್ಲದೆ, ಅಧಿಕಾರಿಗಳನ್ನು ಸರ್ವೆ ಕಾರ್ಯಕ್ಕೆ ಕಳುಹಿಸಿಕೊಡುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಚಿವರು ಸ್ಥಳದಲ್ಲೆ ಅಧಿಕಾರಿಗಳಿಗೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಅಪ್ಪಾಜಿ ಗೌಡ, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಕೆಐಎಡಿಬಿ ಸಿಇಓ ಶಿವಶಂಕರ್, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ ಉಪಸ್ಥಿತರಿದ್ದರು ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ನಾಗಮಂಗಲ ಕೈಗಾರಿಕಾ ಪ್ರದೇಶ ಭೂಸ್ವಾಧೀನಕ್ಕೆ ಮತ್ತೊಮ್ಮೆ ಸರ್ವೆ ನಡೆಸಿ : ಅಧಿಕಾರಿಗಳಿಗೆ ಸಚಿವ ಜಗದೀಶ್ ಶೆಟ್ಟರ್ ಸೂಚನೆ Rating: 5 Reviewed By: karavali Times
Scroll to Top