ರಮಾನಾಥ ರೈ ವಿರುದ್ದ ಕೊಲೆ ಆರೋಪ ಹೊರಿಸಿ ಭಾಷಣಗೈದ ಹರಿಕೃಷ್ಣ ವಿರುದ್ದ ಬಂಟ್ವಾಳ ಕಾಂಗ್ರೆಸ್ಸಿಗರಿಂದ ದೂರು ದಾಖಲು - Karavali Times ರಮಾನಾಥ ರೈ ವಿರುದ್ದ ಕೊಲೆ ಆರೋಪ ಹೊರಿಸಿ ಭಾಷಣಗೈದ ಹರಿಕೃಷ್ಣ ವಿರುದ್ದ ಬಂಟ್ವಾಳ ಕಾಂಗ್ರೆಸ್ಸಿಗರಿಂದ ದೂರು ದಾಖಲು - Karavali Times

728x90

10 November 2020

ರಮಾನಾಥ ರೈ ವಿರುದ್ದ ಕೊಲೆ ಆರೋಪ ಹೊರಿಸಿ ಭಾಷಣಗೈದ ಹರಿಕೃಷ್ಣ ವಿರುದ್ದ ಬಂಟ್ವಾಳ ಕಾಂಗ್ರೆಸ್ಸಿಗರಿಂದ ದೂರು ದಾಖಲು

ಬಂಟ್ವಾಳ, ನ. 10, 2020 (ಕರಾವಳಿ ಟೈಮ್ಸ್) : ಮಾಜಿ ಸಚಿವ ರಮಾನಾಥ ರೈ ವಿರುದ್ದ ಕೊಲೆ ಆರೋಪ ಹೊರಿಸಿ ಭಾಷಣ ಮಾಡಿದ ಹಾಗೂ ಅದನ್ನು ಸಾಮಾಜಿಕ ತಾಣಗಳಲ್ಲಿ ವೈರಲ್ ಮಾಡಿದವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಂಟ್ವಾಳ ತಾಲೂಕಿನ ಕಾಂಗ್ರೆಸ್ ನಾಯಕರು ಹಾಗೂ ಭಾರೀ ಸಂಖ್ಯೆಯ ಕಾರ್ಯಕರ್ತರು ಮಂಗಳವಾರ ಬಿ ಸಿ ರೋಡಿನಲ್ಲಿ ಕಾಲ್ನಡಿಗೆ ಮೂಲಕ ತೆರಳಿ ಬಂಟ್ವಾಳ ನಗರ ಪೊಲೀಸರಿಗೆ ದೂರು ನೀಡಿದರು. 

ತಾಲೂಕಿನ ಇರ್ವತ್ತೂರು ಗ್ರಾಮದ ತಾ ಪಂ ಸದಸ್ಯ ರಮೇಶ್ ಕುಡುಮೇರು ಅವರ ಮನೆಯಲ್ಲಿ ಇತ್ತೀಚೆಗೆ ನಡೆದ ಬಿಜೆಪಿ ಪಕ್ಷದ ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ರಾಜ್ಯ ಕಿಯೋನಿಕ್ಸ್ ನಿಗಮದ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಶಾಸಕರು, ಜನಪ್ರತಿನಿಧಿಗಳ ಸಮ್ಮುಖದಲ್ಲಿ ಶರತ್ ಮಡಿವಾಳ ಕೊಲೆ ಮಾಡಿಸಿದ್ದು ರಮಾನಾಥ ರೈ ಎಂದು ಗಂಭೀರ ಆರೋಪ ಮಾಡಿ ಭಾಷಣ ಮಾಡಿದ್ದಲ್ಲದೆ ಭಾಷಣದ ವೀಡಿಯೋವನ್ನು ಸಾಮಾಜಿಕ  ತಾಣಗಳಲ್ಲಿ ವೈರಲ್ ಮಾಡಿ ಸಮಾಜದಲ್ಲಿ ಕೋಮು ಸಂಘರ್ಷಕ್ಕೆ ಪ್ರಚೋದನೆ ನಡೆಸಿದ್ದಾರೆ. ಹಾಗೂ ಮಾಜಿ ಸಚಿವರ ಘನತೆಗೆ ಧಕ್ಕೆ ಉಂಟು ಮಾಡಿರುತ್ತಾರೆ. ಸದ್ರಿ ಭಾಷಣ ಮಾಡಿ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡಿದ ಆರೋಪದಲ್ಲಿ ಹರಿಕೃಷ್ಣ ಬಂಟ್ವಾಳ ಹಾಗೂ ಈ ಭಾಷಣವನ್ನು ಸಾಮಾಜಿಕ ತಾಣಗಳಲ್ಲಿ ವೈರಲ್ ಮಾಡಿದವರ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಅವರು ಬಂಟ್ವಾಳ ನಗರ ಠಾಣಾಧಿಕಾರಿಗೆ ನೀಡಿದ ದೂರಿನಲ್ಲಿ ಆಗ್ರಹಿಸಿದ್ದಾರೆ.

ನಿಯೋಗದಲ್ಲಿ ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್ ಶಾಂತಿಅಂಗಡಿ, ಉಪಾಧ್ಯಕ್ಷೆ ಜೆಸಿಂತಾ ಡಿ’ಸೋಜ, ಜಿ ಪಂ ಸದದ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬಿ ಪದ್ಮಶೇಖರ್ ಜೈನ್, ಎಂ ಎಸ್ ಮುಹಮ್ಮದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ತಾ ಪಂ ಉಪಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಪುರಸಭಾ ಸದಸ್ಯರಾದ ಗಾಯತ್ರಿ ಪ್ರಕಾಶ್, ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಲುಕ್ಮಾನ್ ಬಿ ಸಿ ರೋಡು, ಹಸೈನಾರ್ ತಾಳಿಪಡ್ಪು, ಲೋಲಾಕ್ಷ ಶೆಟ್ಟಿ, ಮಾಜಿ ಸದಸ್ಯ ಸದಾಶಿವ ಬಂಗೇರ, ಮೆಸ್ಕಾಂ ಸಲಹಾ ಸಮಿತಿ ಮಾಜಿ ಸದಸ್ಯ ವೆಂಕಪ್ಪ ಪೂಜಾರಿ, ಪ್ರಮುಖರಾದ ಕೆ ಮಾಯಿಲಪ್ಪ ಸಾಲ್ಯಾನ್, ಮುಹಮ್ಮದ್ ನಂದಾವರ, ಸಂಪತ್ ಕುಮಾರ್ ಶೆಟ್ಟಿ, ಯೂಸುಫ್ ಕರಂದಾಡಿ, ಜಯಂತಿ ವಿ ಪೂಜಾರಿ, ಮಲ್ಲಿಕಾ ವಿ ಶೆಟ್ಟಿ, ಗಂಗಾಧರ ಪೂಜಾರಿ, ಜಗದೀಶ್ ಕುಂದರ್, ಸುದರ್ಶನ್ ಜೈನ್, ಪದ್ಮನಾಭ ರೈ, ಜಿ ಎಂ ಇಬ್ರಾಹಿಂ ಮಂಚಿ, ಕರೀಂ ಬೊಳ್ಳಾಯಿ ಮೊದಲಾದವರು ಇದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ರಮಾನಾಥ ರೈ ವಿರುದ್ದ ಕೊಲೆ ಆರೋಪ ಹೊರಿಸಿ ಭಾಷಣಗೈದ ಹರಿಕೃಷ್ಣ ವಿರುದ್ದ ಬಂಟ್ವಾಳ ಕಾಂಗ್ರೆಸ್ಸಿಗರಿಂದ ದೂರು ದಾಖಲು Rating: 5 Reviewed By: karavali Times
Scroll to Top